![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 21, 2022, 4:23 PM IST
ಬೆಳಗಾವಿ: ನಮ್ಮಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಜಿಲ್ಲೆಯ ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದು, ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಪಕ್ಷಗಳಲ್ಲಿ ವಿಷಯಾಧಾರಿತ ಭಿನ್ನಾಪ್ರಾಯ ಸಹಜ. ಆದರೆ ಬಣ ರಾಜಕೀಯವಿಲ್ಲ. ಜಾರಕಿಹೊಳಿ ಸಹೋದರರು ಸೇರಿ ಎಲ್ಲರೂ ಒಂದಾಗಿ ಚುನಾವಣೆ ಮಾಡುತ್ತೇವೆ. ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
‘ಹನುಮಂತ ನಿರಾಣಿ 6 ವರ್ಷಗಳಿಂದ ಉತ್ತಮ ಕೆಲಸ ಮಾಡಿದ್ದಾರೆ. ಅರುಣ ಶಹಾಪುರ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಪದವೀಧರ, ಶಿಕ್ಷಕರ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ. ಬಿಜೆಪಿ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ಮತ ಕೇಳುತ್ತೇವೆ ಎಂದು ಹೇಳಿದರು.
ನಾನು ಮುಖ್ಯಮಂತ್ರಿಯಾದರೆ ಸಾಲ ಮನ್ನಾ ಮಾಡುತ್ತೇನೆ. ಜನರಿಗೆ ಉಚಿತವಾಗಿ 10 ಕೆ.ಜಿ. ಅಕ್ಕಿ ನೀಡುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಾರಜೋಳ ಕಾಂಗ್ರೆಸ್ ಇದೇ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಆಡಳಿತ ನಡೆಸಿದೆ. ಜನರಿಗೆ ಬೇಕಾಗಿರುವುದು ಅಕ್ಕಿ ಅಲ್ಲ. ಸ್ವಾಭಿಮಾನದ ಬದುಕು’ ಎಂದು ಟೀಕಿಸಿದರು.
ಬಿಜೆಪಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉತ್ತರಿಸಿದ ಕಾರಜೋಳ ಅವರು ‘ಸಿದ್ದರಾಮಯ್ಯ ತುಳಸಿ ಪತ್ರಿ ತಲೆಯ ಮೇಲೆ ಹೊತ್ತುಕೊಂಡು ಅಧಿಕಾರ ನಡೆಸಿದ್ದಾರೆ. ಸುಳ್ಳು ಹೇಳುತ್ತಲೇ ಕಾಂಗ್ರೆಸ್ ಖಾಲಿಯಾಗಲಿದೆ’ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ತೊಂದರೆ ಜೊತೆಗೆ ಅನುಕೂಲವೂ ಆಗಿದೆ. ಮಳೆಯಿಂದ ಆಗಿರುವ ತೊಂದರೆ ನಿವಾರಣೆಗೆ ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಹೆಚ್ಚು ಮಳೆಯಾಗಿದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಸ್ವಲ್ಪಮಟ್ಟಿಗೆ ಹಾನಿಯಾಗಿದೆ. ನದಿ ತೀರದಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.