ವಾರಾಂತ್ಯ ಮತ್ತೆ ಸಂಪೂರ್ಣ ಲಾಕ್‌ಡೌನ್
Team Udayavani, Jun 17, 2021, 5:53 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಈ ವಾರಾಂತ್ಯದಲ್ಲೂ ಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಶನಿವಾರ ಜೂ. 19ರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಜೂ. 21ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್ -19 ಹರಡುವುದನ್ನು ತಡೆಗಟ್ಟಲು ಜೂ.21ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿ ಸಿ ಆದೇಶಿಸಲಾಗಿದೆ.
ಅಗತ್ಯ ಸೇವೆಗಳಾದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧ ಪೂರೈಕೆ ಮತ್ತು ಖರೀದಿಗೆ ಹಾಗೂ ಆನ್ ಲೈನ್ ಫುಡ್ ಸರ್ವಿಸಿಸ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಅಲ್ಲದೇ, ಸರ್ಕಾರಿ ಅಧಿ ಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ ಘೋಷಿಸಿರುವ ದಿನಗಳಂದು ಸಾರ್ವಜನಿಕ ವಿತರಣಾ ಪದ್ಧತಿಯಡಿಯ ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು. ಅದೇ ರೀತಿ, ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರ ವಿತರಿಸಲು ಅವಕಾಶವಿರುತ್ತದೆ.
ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ. ಬೆಳಗಾವಿ ನಗರದಲ್ಲಿ ಬೀಜ, ರಸಗೊಬ್ಬರ ಹಾಗೂ ಇತರೆ ಪರಿಕರಗಳ ಮಾರಾಟ ಮಳಿಗೆಗಳು ಲಾಕ್ ಡೌನ್ ದಿನಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶವಿದ್ದು, ಅಲ್ಲಿ ತೆರಳುವ ರೈತರು ಗ್ರಾಮ ಪಂಚಾಯತಿ ಪಿಡಿಒ ಹಾಗೂ ಗ್ರಾಮಲೆಕ್ಕಿಗರ ಅನುಮತಿ ಪಡೆಯಬೇಕು.
ಅಲ್ಲದೇ ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಧಿಕಾರಿಗಳು ತಿಳಿಸಿದ್ದಾರೆ. ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ: ಸಂಪೂರ್ಣ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿ ಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.