ಸಿದ್ದರಾಮಯ್ಯನವರೇ ಎಲ್ಲರಿಗೂ ಲಸಿಕೆ ಕೊಡುತ್ತೇವೆ, ನಮಗೆ ಧಮ್ ಇದೆ: ಡಿಸಿಎಂ ಅಶ್ವಥ ನಾರಾಯಣ
Team Udayavani, Oct 24, 2020, 4:27 PM IST
ಬೆಳಗಾವಿ: ಸಿದ್ದರಾಮಯ್ಯ ನವರೇ ನಮಗೆ ಧಮ್ ಇದೆ. ಎಲ್ಲರಿಗೂ ಕೋವ್ಯಾಕ್ಸಿನ್ ನೀಡುತ್ತೇವೆ. ಆ ಧಮ್ ಇದೆ ಎಂದು ಡಿಸಿಎಂ ಡಾ.ಅಶ್ವಥ ನಾರಾಯಣ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾವು ಎಲ್ಲರಿಗೂ ಕೋವಿಡ್-19 ವ್ಯಾಕ್ಸಿನ್ ನೀಡುತ್ತೇವೆ.ಇದರಲ್ಲಿ ಯಾವುದೇ ಸಂದೇಹ ಇಲ್ಲ. ಸಿದ್ದರಾಮಯ್ಯನವರು ಧಮ್ ಬಗ್ಗೆ ಮಾತನಾಡುವುದು ಸರಿಯಲ್ಲ. ನಮಗೆ ಧಮ್ ಇದೆ ಎಂದು ತಿರುಗೇಟು ನೀಡಿದರು.
ವಿಜಯಪುರ ಶಾಸಕ ಬಸವರಾಜ ಪಾಟಿಲ್ ಯತ್ನಾಳ ಅವರು ನಾಯಕತ್ವ ಬದಲಾವಣೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ವಿಷಯದಲ್ಲಿ ರಾಜ್ಯಾಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರಕ್ಕೆ ಪಕ್ಷ ಬದ್ಧವಾಗಿದೆ ಎಂದರು. ಶಿಕ್ಷಣಕ್ಕಾಗಿ ವಿಶೇಷ ಆದ್ಯತೆ ನೀಡಿ ಹಿರೇಬಾಗೇವಾಡಿಯ ಗುಡ್ಡದಲ್ಲಿ ವಿವಿ ಸ್ಥಾಪನೆಗೆ ಸರಕಾರ ಮುಂದಾಗಿದೆ. ಇದರಲ್ಲಿ ಯಾರೂ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಇದನ್ನೂ ಓದಿ:ಉಪಚುನಾವಣೆ: ಸಿದ್ದರಾಮಯ್ಯ ಸವಾಲು ಸ್ವೀಕರಿಸಲು ಸಿದ್ಧ ಎಂದ ಸಚಿವ ಈಶ್ವರಪ್ಪ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದ್ದು ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು. ಈಗಾಗಲೇ 127 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಇಲ್ಲಿ ಅಕಾಡೆಮಿಕ್ ಮತ್ತು ಆಡಳಿತ ಕೇಂದ್ರ ಎರಡೂ ಕಾರ್ಯನಿರ್ವಹಿಸಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.