Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು
Team Udayavani, Dec 5, 2023, 12:41 AM IST
ಬೆಳಗಾವಿ: ಕಾಂಗ್ರೆಸ್ ಸರಕಾರಕ್ಕೆ ಮೊದಲನೆ ಯದಾದ ಬೆಳಗಾವಿ ಅಧಿವೇಶನದ ಮೊದಲ ದಿನವೇ ಆರು ಸಚಿವರು ಗೈರು ಹಾಜರಾಗಿದ್ದರಿಂದ ವಿಧಾನ ಪರಿಷತ್ತಿನಲ್ಲಿ ಸಭಾಪತಿ ಸಿಟ್ಟಾದರು, ಅತ್ತ ವಿಧಾನಸಭೆಯಲ್ಲೂ ಕಲಾಪ ಒಂದು ತಾಸು ತಡವಾಗಿ ಆರಂಭವಾಯಿತು.
ಮೇಲ್ಮನೆಯಲ್ಲಿ ಸದನ ಆರಂಭವಾಗುತ್ತಿದ್ದಂತೆ ವಿವಿಧ ಕ್ಷೇತ್ರಗಳಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದರ ಬೆನ್ನಲ್ಲೇ ಪ್ರಶ್ನೋತ್ತರ ಅವಧಿ ಪ್ರಾರಂಭವಾಯಿತು. ಹಲವು ಸಚಿವರ ಪರವಾಗಿ ಸಭಾ ನಾಯಕರು ಮತ್ತು ಪ್ರಿಯಾಂಕ್ ಖರ್ಗೆ ಉತ್ತರಿಸಿದರು. ಕೆಲವು ಉಪ ಪ್ರಶ್ನೆಗಳಿಗೆ ಉತ್ತರ ಕೊಡುವ ಪ್ರಯತ್ನವನ್ನೂ ಮಾಡಿದರು. ಈ ಸಂದರ್ಭ ಕೆಲವು ಶಾಸಕರು ಸಂಬಂಧಪಟ್ಟ ಖಾತೆಗಳ ಸಚಿವರಿಂದಲೇ ವಿವರವಾದ ಉತ್ತರ ಬಯಸಿದರು.
ಆಗ, ಮೊದಲ ದಿನವೇ ಆರು ಸಚಿವರು ಗೈರುಹಾಜರಿದ್ದಾರೆ. ಎಲ್ಲರೂ ಪೂರ್ವನಿರ್ಧರಿತ ಕಾರ್ಯಕ್ರಮದ ಕಾರಣ ನೀಡಿದ್ದಾರೆ.
ಹೀಗಾದರೆ ನಾನು ಸದನ ನಡೆಸಬೇಕೋ ಬೇಡವೋ ನೀವೇ ಹೇಳಿ. ನಾಳೆಯಿಂದ ಇದು ನಡೆಯುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಖಾರವಾಗಿ ಹೇಳಿದರು. ದೀರ್ಘ ಉತ್ತರ ಬಯಸಿದ್ದರಿಂದ ಕೆಲವು ಪ್ರಶ್ನೆಗಳನ್ನು ಅರ್ಧ ತಾಸು ಚರ್ಚೆಗೆ ಕೈಗೆತ್ತಿಕೊಳ್ಳಲು ಸದಸ್ಯರು ಮನವಿ ಮಾಡಿದರು. ಸಚಿವರಾದ ಕೆ.ಜೆ. ಜಾರ್ಜ್, ಡಾ| ಎಂ.ಸಿ. ಸುಧಾಕರ್, ಕೆ.ಎಚ್. ಮುನಿಯಪ್ಪ, ಡಾ| ಶರಣಪ್ರಕಾಶ ಪಾಟೀಲ ಗೈರುಹಾಜರಿದ್ದರು.
ವಿಧಾನಸಭೆ ಒಂದು ತಾಸು ವಿಳಂಬ ಆರಂಭ: ವಿಧಾನಸಭೆಯಲ್ಲಿ ನಿಗದಿತ ಸಮಯಕ್ಕಿಂತ ಒಂದು ತಾಸು ತಡವಾಗಿ ಕಲಾಪ ಆರಂಭವಾಗುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್, ಯಾವ ಕಾರಣಕ್ಕೆ ಕಲಾಪ ವಿಳಂಬವಾಗಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಬಸವರಾಜ ರಾಯರೆಡ್ಡಿ, ಕಲಾಪ ನಿಯಮಗಳ ಪ್ರಕಾರ ಸದನವನ್ನು ಹೇಗೆ ಪ್ರಾರಂಭಿಸಬೇಕೆಂಬ ಬಗ್ಗೆ ನಿರ್ದಿಷ್ಟ ಪದ್ಧತಿ ಇದೆ. ಯಾರು ಬೇಕಾದರೂ ಬರಲಿ, ಬಿಡಲಿ; ನೀವು ಪೀಠದಲ್ಲಿ ಆಸೀನರಾಗಿ ಕಲಾಪ ಆರಂಭಿಸಿ. ಆಗ ಎಲ್ಲರೂ ಬರುತ್ತಾರೆ. ಇಲ್ಲವಾದರೆ ಬೆಳಗಾವಿ ಅಧಿವೇಶನ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಯನ್ನು ಜನರು ಒಪ್ಪಿಕೊಳ್ಳಬೇಕಾಗುತ್ತದೆ. ಇದಕ್ಕೆ ಆಸ್ಪದ ನೀಡಬೇಡಿ ಎಂದು ಸ್ಪೀಕರ್ ಖಾದರ್ ಅವರಿಗೆ ಮನವಿ ಮಾಡಿದರು.
ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್, ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಉತ್ತರ ಕರ್ನಾಟಕದ ರಾಜಕೀಯ ನಾಯಕತ್ವವನ್ನು ಅವಗಣಿಸುತ್ತಿರುವ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಇದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಡಿ. 6ರಿಂದ ಉ.ಕ. ಸಮಸ್ಯೆಗಳ ಬಗ್ಗೆ ಚರ್ಚೆ: ಡಿ. 6ರಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ನೀರಾವರಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಪ್ರಕಟಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ ಕೊಡಬೇಕೆಂದು ಅನೇಕ ಶಾಸಕರು ಬೇಡಿಕೆ ಇರಿಸಿದ್ದರು. ಇದಕ್ಕೆ ಸಹಮತ ವ್ಯಕ್ತವಾಗಿದ್ದು, ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಕಾಲಾವಕಾಶ ಒದಗಿಸಲು ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ (ಬಿಎಸಿ) ಸಭೆ ನಿರ್ಧರಿಸಿದೆ. ಸೋಮವಾರ ಭೋಜನ ವಿರಾಮದ ವೇಳೆಯಲ್ಲಿ ನಡೆದ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ಕೊಡುವುದು, ಮಸೂದೆಗಳನ್ನು ಮೊದಲ ವಾರದಲ್ಲೇ ಮಂಡಿಸಿ, ಎರಡನೇ ವಾರದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಎಚ್ಚರ ವಹಿಸಬೇಕು
ಆಡಳಿತ ಪಕ್ಷದ ಮುಖ್ಯ ಸಚೇತಕರಾದರೂ ಈ ಬಗ್ಗೆ ಎಚ್ಚರ ವಹಿಸಬೇಕಲ್ಲವೇ ಎಂದು ಸಭಾಪತಿ ಹೊರಟ್ಟಿ ಪ್ರಶ್ನಿಸಿದರು. ಆಗ ಮುಖ್ಯ ಸಚೇತಕ ಸಲೀಂ ಅಹಮ್ಮದ್ “ಆನ್ ದಿ ವೇ’ ಎಂದು ಸಮಜಾಯಿಷಿ ನೀಡಲು ಮುಂದಾದರು. “ಯಾವ ಆನ್ ದಿ ವೇ ರೀ? ಸದನದ ಸಮಯ ಗೊತ್ತಿಲ್ಲವೇ? ನಾಳೆಯಿಂದ ಇದು ಪುನರಾವರ್ತನೆಯಾಗುವಂತಿಲ್ಲ’ ಎಂದು ಹೊರಟ್ಟಿಯವರು ಸ್ಪಷ್ಟ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.