![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 22, 2017, 7:25 AM IST
ವಿಧಾನ ಪರಿಷತ್: ರಾಜ್ಯದ ಎಲ್ಲ ಜಿಲ್ಲಾ- ತಾಲೂಕು ಕೇಂದ್ರಗಳು ಸೇರಿದಂತೆ ಒಟ್ಟು 247 ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಐವನ್ ಡಿ’ಸೋಜ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿದೆ. ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಸ್ಥಾಪನೆಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಅದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಐವನ್ ಡಿ’ಸೋಜ, ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ತಲಾ 5 ಇಂದಿರಾ ಕ್ಯಾಂಟೀನ್ ಆರಂಭಿಸಬೇಕು.
ಮೂಡಬಿದಿರೆ ತಾಲೂಕು ಎಂದು ಘೋಷಣೆಯಾಗಿದ್ದರೂ ಅಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಬಗ್ಗೆ ಪ್ರಸ್ತಾಪವಿಲ್ಲ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು
You seem to have an Ad Blocker on.
To continue reading, please turn it off or whitelist Udayavani.