ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಧನ ಪುನಾರಂಭಕ್ಕೆ ಕ್ರಮ
Team Udayavani, Nov 25, 2017, 6:00 AM IST
ವಿಧಾನಪರಿಷತ್ತು: “ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳಿಗೆ 2 ರೂ. ಪ್ರೋತ್ಸಾಹ ಧನ ನೀಡುವ ಪ್ರಕ್ರಿಯೆಯ ಮೇಲ್ವಿಚಾರಣೆ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ಪುನಾರಂಭಿಸಲಾಗುವುದು’ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ತಾತ್ಕಾಲಿಕವಾಗಿ 2 ರೂ. ಪ್ರೋತ್ಸಾಹಧನ ಯೋಜನೆ ಸ್ಥಗಿತಗೊಳಿಸಲಾಗಿದೆ. ಸದ್ಯದಲ್ಲೇ ಹೊಸ ನಿಯಮಾವಳಿ ರೂಪಿಸಿ ಚಾಲನೆ ನೀಡಲಾಗುವುದು. ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ’ ಎಂದು ಹೇಳಿದರು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ 2 ರೂ. ನೀಡುವ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕ, ಶಿಕ್ಷಕರಿಗೆ ವಹಿಸಲಾಗಿತ್ತು. ಅವರ ವರದಿಯಂತೆ ಹಣ ಬಿಡುಗಡೆಯಾಗುತ್ತದೆ. ಅನೇಕ ಪ್ರಕರಣದಲ್ಲಿ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸರ್ಕಾರವೇ ಯೋಜನೆ ಘೋಷಿಸಿರುವುದರಿಂದ ಮುಂದುವರಿಸಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
MUST WATCH
ಹೊಸ ಸೇರ್ಪಡೆ
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.