ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ
Team Udayavani, Nov 20, 2018, 6:25 AM IST
ಬೆಳಗಾವಿ: ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಡಿ.10ರಿಂದ 20ರ ವರೆಗೆ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಯಾವುದೇ ಅನಾನುಕೂಲವಾಗದಂತೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ರಮೇಶಕುಮಾರ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾಪ ಅವಧಿಯನ್ನು ಇನ್ನೊಂದು ದಿನ ವಿಸ್ತರಿಸಲು ಸರ್ಕಾರಕ್ಕೆ ಪ್ರಸ್ತಾವ ಕಳಿಸಲಾಗಿದೆ. ಒಂದು ವೇಳೆ ಒಪ್ಪಿಗೆ ಸಿಕ್ಕರೆ ವಿಧಾನ ಮಂಡಲದ ಕಲಾಪಗಳು ನಡೆಯಲಿವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಚಲಿಗಾಲ ಅಧಿವೇಶನದ ಕಲಾಪಗಳು ಜನಪರವಾಗಿ, ಗೌರವಯುತವಾಗಿ ನಡೆಯಬೇಕು ಮತ್ತು ಗುಣಮಟ್ಟದ ಚರ್ಚೆ ನಡೆಯಬೇಕು ಎಂಬುದು ನಮ್ಮ ನಿಲುವು. ಇದರಲ್ಲಿ ಯಾವುದೇ ರಾಜಿ ಇಲ್ಲ. ಪರಿಣಾಮಕಾರಿಯಾಗಿ ಕಲಾಪ ನಡೆಯುವಂತೆ ನೋಡಿಕೊಳ್ಳಲಾಗುವುದು. ಹಾಜರಾತಿ, ಚರ್ಚೆ, ಸದನದಲ್ಲಿ ನಡತೆ ಸೇರಿ ಪ್ರತಿಯೊಂದರಲ್ಲೂ ಗುಣಾತ್ಮಕ ಬದಲಾವಣೆಗೆ ಪ್ರಯತ್ನಿಸಲಾಗುವುದು ಎಂದು ಸಭಾಧ್ಯಕ್ಷ ರಮೇಶಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.