ಕಲಾಪದಲ್ಲಿ ಭಾಗವಹಿಸಿ, ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿ; CM
Team Udayavani, Nov 15, 2017, 11:09 AM IST
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಶಾಸಕರು ಸಕ್ರಿಯವಾಗಿ ಭಾಗವಹಿಸಿ, ವಿರೋಧ ಪಕ್ಷಗಳ ಟೀಕೆಗಳಿಗೆ ಸಮರ್ಥವಾಗಿ ಉತ್ತರ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಸರ್ಕಾರದ ಕೊನೆಯ ಅಧಿವೇಶನದಲ್ಲಿ ಟೀಕಿಸಲು ಪ್ರತಿಪಕ್ಷಗಳಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ರಾಜಕೀಯ ಲಾಭಕ್ಕಾಗಿ ಕೆಲ ವಿಷಯಗಳನ್ನು ಪ್ರಸ್ತಾಪ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸುತ್ತಿರುವುದಾಗಿ ಹೇಳಿದರು.
ಕೆಜೆ ಜಾರ್ಜ್ ಅವರ ವಿಷಯದಲ್ಲಿಯೂ ಪ್ರತಿಪಕ್ಷದವರು ರಾಜಕಾರಣ ಮಾಡುತ್ತಿದ್ದಾರೆ, ಭಾರತೀಯ ಜನತಾ ಪಕ್ಷದಲ್ಲಿರುವ ಕೇಂದ್ರ ಮತ್ತು ರಾಜ್ಯ ನಾಯಕರ ವಿರುದ್ಧವೂ ಹಲವಾರು ಪ್ರಕರಣಗಳು ದಾಖಲಾಗಿದೆ. ಆದರೆ ಅವರು ರಾಜೀನಾಮೆ ಕೊಟ್ಟಿಲ್ಲ, ಹಳೆಯ ವಿಚಾರಗಳನ್ನೇ ಬಿಜೆಪಿಯವರಯ ಕೆದಕುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.