ಅ.27ಕ್ಕೆ ಮಹಿಳಾ ಮಿಲಿಟರಿ ಪೊಲೀಸ್‌ ಲಿಖೀತ ಪರೀಕ್ಷೆ

ಸುಮಾರು 1000 ಪೈಕಿ 200 ಅಭ್ಯರ್ಥಿಗಳು ಆಯ್ಕೆ

Team Udayavani, Aug 5, 2019, 9:22 AM IST

bg-tdy-4

ಬೆಳಗಾವಿ: ಮಹಿಳಾ ಮಿಲಿಟರಿ ಪೊಲೀಸ್‌ ಭರ್ತಿಗಾಗಿ ಎಂಎಲ್ಐಆರ್‌ಸಿ ಕೇಂದ್ರದಲ್ಲಿ ರವಿವಾರ ಆಂಧ್ರ ಪ್ರದೇಶದ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ನಡೆಸಲಾಯಿತು.

ಬೆಳಗಾವಿ: ದೇಶದ ಮೊದಲ ಮಹಿಳಾ ಸೈನ್ಯ ಪೊಲೀಸ್‌ ಭರ್ತಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಬೆಳಗಾವಿಯಲ್ಲಿಯೇ ಅಕ್ಟೋಬರ್‌ 27ರಂದು ನಡೆಯಲಿರುವ ಲಿಖೀತ ಪರೀಕ್ಷೆಗೆ ಆಹ್ವಾನಿಸಲಾಗುಗುವುದು ಎಂದು ನೇಮಕಾತಿ ವಿಭಾಗದ ಉಪ ಮಹಾನಿರ್ದೇಶಕ ದೀಪೇಂದ್ರ ರಾವತ್‌ ತಿಳಿಸಿದರು.

ಇಲ್ಲಿಯ ಮರಾಠಾ ಲಘು ಪದಾತಿದಳ (ಎಂಎಲ್ಐಆರ್‌ಸಿ) ಕೇಂದ್ರದ ಶಿವಾಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಯುವತಿಯರ ದೈಹಿಕ ಪರೀಕ್ಷೆ ಬಳಿಕ ರವಿವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ದೈಹಿಕ, ವೈದ್ಯಕೀಯ ಪರೀಕ್ಷೆಗಳು ಬಹುತೇಕ ಪೂರ್ಣಗೊಂಡಿವೆ. ಸುಮಾರು 1000 ಪೈಕಿ 200 ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ ಎಂದರು.

ಇದೇ ಮೊದಲ ಬಾರಿಗೆ ಮಹಿಳಾ ಭರ್ತಿ ಹಮ್ಮಿಕೊಂಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದಾರೆ. ಮೆರಿಟ್ ಆಧಾರದ ಮೇಲೆ ಮೂರು ಸಾವಿರ ಜನರನ್ನು ಆಹ್ವಾನಿಸಲಾಗಿತ್ತು. ಈ ಪೈಕಿ ಬೆಳಗಾವಿ ಕೇಂದ್ರಕ್ಕೆ ಸಾವಿರ ಜನರ ಪರೀಕ್ಷೆ ನಡೆಸಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳ ಅಭ್ಯರ್ಥಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.

ದೈಹಿಕ ಪರೀಕ್ಷೆಗಳಾದ ಓಟ, ಎತ್ತರ ಜಿಗಿತ, ಉದ್ದ ಜಿಗಿತದಲ್ಲಿ ಪಾಸಾದವರನ್ನು ದೇಹದ ಅಳತೆ ನಡೆಸಲಾಗುತ್ತದೆ. ಕನಿಷ್ಠ 152 ಸೆಂ.ಮೀ. ಎತ್ತರ, ಕನಿಷ್ಠ 41 ಕೆ.ಜಿ. ತೂಕ ಕಡ್ಡಾಯವಾಗಿ ಇರಬೇಕಾಗುತ್ತದೆ. ಎದೆ ಸುತ್ತಳತೆ ಸಾಮಾನ್ಯಕ್ಕಿಂತ ವಿಸ್ತೀರ್ಣ ಮಾಡಿದಾಗ ಕನಿಷ್ಠ 5 ಸೆಂ.ಮೀ. ಹಿಗ್ಗಬೇಕಾಗುತ್ತದೆ. ಇದರಲ್ಲಿ ಉತ್ತೀರ್ಣಗೊಂಡವರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಲಿಖೀತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ ಎಂದು ಹೇಳಿದರು.

ದೇಶಾದ್ಯಂತ 100 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬೆಳಗಾವಿ ಕೇಂದ್ರದಲ್ಲಿ ಎಷ್ಟು ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ ಎಂಬುದು ಕೊನೆಯಲ್ಲಿಯೇ ಗೊತ್ತಾಗಲಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸದೇ ಅನೇಕ ಅಭ್ಯರ್ಥಿಗಳು ನೇಮಕಾತಿಗಾಗಿ ಬಂದಿದ್ದರು. ಆದರೆ ಮೊದಲು ಅರ್ಜಿ ಸಲ್ಲಿಸಿ ಪ್ರವೇಶ ಪತ್ರಗಳನ್ನು ಪಡೆದವರಿಗೆ ಮಾತ್ರ ಅವಕಾಶ ಇತ್ತು. ಯಾರೂ ನಿರಾಸೆ ಆಗುವುದು ಬೇಡ. ಮತ್ತೆ ಮುಂದಿನ ದಿನಗಳಲ್ಲಿ ಅರ್ಜಿ ಆಹ್ವಾನಿಸಿದಾಗ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದರು.

ನೇಮಕಾತಿ ನಿರ್ದೇಶಕ ಪ್ರನೀತ ದಂಗವಾಲ್, ನೇಮಕಾತಿ ವಿಭಾಗದ ಹಿಮ್ಕಾ ಕಲ್ಯಾಣಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.