ಬೆಳಗಾವಿಯಲ್ಲಿ 7ರಿಂದ ಕುಸ್ತಿ ಸಂಭ್ರಮ
Team Udayavani, Feb 3, 2019, 9:39 AM IST
ಬೆಳಗಾವಿ: ಭಾರತೀಯ ಕ್ರೀಡೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಪುರುಷ ಹಾಗೂ ಮಹಿಳಾ ವಿಭಾಗದ ಕರ್ನಾಟಕ ಕುಸ್ತಿ ಹಬ್ಬ ಫೆ. 7ರಿಂದ 10ರ ವರೆಗೆ ಕುಂದಾನಗರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಡಾ| ಎ.ಬಿ. ಬೊಮ್ಮನಹಳ್ಳಿ, ರಾಜ್ಯ ಸರಕಾರ ಬಜೆಟ್‌ನಲ್ಲಿ ಘೋಷಿಸಿದಂತೆ ಕರ್ನಾಟಕ ಕುಸ್ತಿ ಹಬ್ಬ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ಆರು ಹಂತದಲ್ಲಿ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕೊನೆಯ ದಿನ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕುಸ್ತಿ ಪಟುಗಳ ಕಾಳಗ ಇದೆ. ಲಕ್ಷಕ್ಕೂ ಹೆಚ್ಚು ಜನ ಕುಸ್ತಿ ಆಸಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಫೆ. 7ರಂದು ಕುಸ್ತಿ ಪಂದ್ಯಾವಳಿಗೆ ಚಾಲನೆ ಸಿಗಲಿದ್ದು, ರಾಜ್ಯದ ಮೂಲೆ ಮೂಲೆಯಲ್ಲಿರುವ ಕುಸ್ತಿ ಪಟುಗಳಿಗೆ ಅವಕಾಶ ನೀಡಲಾಗುವುದು. ಇದಕ್ಕಾಗಿ 2 ಕೋಟಿ ರೂ. ಬಿಡುಗಡೆ ಆಗಿದ್ದು, ಹೆಚ್ಚುವರಿಯಾಗಿ 75 ಲಕ್ಷ ರೂ. ನೀಡುವಂತೆ ಸರಕಾರಕ್ಕೆ ಮನವಿ ಮಾಡಲಾಗಿದೆ. 700ರಿಂದ 750 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಅಜರ್‌ಬೈಜಾನ್, ಜಾರ್ಜಿಯಾ ದೇಶದ ನಾಲ್ವರು, ಪಂಜಾಬ್, ಹರಿಯಾಣಾ ಸೇರಿದಂತೆ ವಿವಿಧ ರಾಜ್ಯಗಳಿಂದ ಕುಸ್ತಿ ಪಟುಗಳು ಭಾಗವಹಿಸಲಿದ್ದಾರೆ. ವಸತಿ, ಊಟೋಪಚಾರ, ಸಾರಿಗೆ ವ್ಯವಸ್ಥೆ, ವೈದ್ಯಕೀಯ ಸೇವೆ ಒದಗಿಸಲಾಗುವುದು. ಈಗಾಗಲೇ ಮೈದಾನ ತಯಾರಿಕೆ ಕಾರ್ಯ ಭರದಿಂದ ಸಾಗಿದ್ದು, ಪೂರಕ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಗರಡಿ ಮನೆ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ರಾಜ್ಯಕ್ಕೆ ಮಂಜೂರಾದ 10 ಗರಡಿ ಮನೆಗಳ ಪೈಕಿ 5 ಬೆಳಗಾವಿ ಜಿಲ್ಲೆಗೆ ಬಂದಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಕೆ. ಶ್ರೀನಿವಾಸ, ಜಿಲ್ಲಾ ಉಪನಿರ್ದೇಶಕ ಸಿ.ಬಿ. ರಂಗಪ್ಪ, ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘದ ರತನಕುಮಾರ ಮಠಪತಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.