ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಎರಡನೇ ಬಲಿ
Team Udayavani, Jun 30, 2020, 10:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ 19 ಮಹಾಮಾರಿಗೆ ಎರಡನೇ ಬಲಿಯಾಗಿದೆ.
ಇದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಸೋಮವಾರ ಮೃತಪಟ್ಟಿದ್ದ 32 ವರ್ಷದ ಅಥಣಿ ತಾಲೂಕಿನ ಯುವಕನಲ್ಲಿ ಕೋವಿಡ್ ಸೋಂಕು ಇದ್ದಿದ್ದು ಇಂದು ದೃಢಪಟ್ಟಿದೆ.
ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ 32 ವರ್ಷದ ಯುವಕ ತೀವ್ರ ಉಸಿರಾಟದ ತೊಂದರೆಯಿಂದ ಬಲಲುತ್ತಿದ್ದರು.
ಕೂಡಲೇ ಆ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಉಸಿರಾಟದ ತೊಂದರೆಯಿದ್ದುದರಿಂದ ಆ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ರವಿವಾರ ಜಿಲ್ಲಾಸ್ಪತ್ರೆಗೆ ದಾಖಲುಗೊಂಡಿದ್ದ ಆ ಯುವಕ ಸೋಮವಾರ ಮೃತಪಟ್ಟಿದ್ದ.
ಉಸಿರಾಟ ತೊಂದರೆಯಿಂದ ಬಳಲಿ ಮೃತಪಟ್ಟಿದ್ದರಿಂದ ವೈದ್ಯರು ಯುವಕನ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು.
ಮಂಗಳವಾರ ಯುವಕನ ವರದಿ ಪಾಸಿಟಿವ್ ಬಂದಿದೆ. ಈ ಯುವಕ ಲಾಕ್ ಡೌನ್ ಗಿಂತ ಮುಂಚೆಯೇ ವಿದೇಶದಿಂದ ಮರಳಿದ್ದನು ಎನ್ನಲಾಗುತ್ತಿದೆ.
ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ ಗೆ ತೆರಳಿದ್ದ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ ಈ ಯುವಕನ ಅಜ್ಜಿ ಈ ಮೊದಲೇ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು ಮತ್ತು ಇದು ಜಿಲ್ಲೆಯಲ್ಲಿ ದಾಖಲಾಗಿದ್ದ ಕೋವಿಡ್ 19 ಸೋಂಕು ಸಂಬಂಧಿರ ಬಲಿಯಾಗಿತ್ತು.
ಇದೀಗ ಅಥಣಿಯ ಈ ಯುವಕನೂ ಮಹಾಮಾರಿಗೆ ಬಲಿಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.