ಸಂತ್ರಸ್ತರ ನೆರವಿಗೆ ಧಾವಿಸಿದ ಜನ
ಶಾಸಕ ರಾಮುಲು-ರೆಡ್ಡಿಯಿಂದ ದೇಣಿಗೆ ಸಂಗ್ರಹ •ದವಸ-ಧಾನ್ಯ, ಅಗತ್ಯ ವಸ್ತುಗಳ ಕ್ರೂಢೀಕರಣ
Team Udayavani, Aug 11, 2019, 1:14 PM IST
ಬಳ್ಳಾರಿ: ಶಾಸಕರಾದ ಶ್ರೀರಾಮುಲು, ಸೋಮಶೇಖರರೆಡ್ಡಿ ನೆರೆ ಸಂತ್ರಸ್ತರ ನೆರವಿಗೆ ದೇಣಿಗೆ ಸಂಗ್ರಹಿಸಿದರು.
ಬಳ್ಳಾರಿ: ಪ್ರವಾಹ, ನೆರೆಹಾವಳಿಯಿಂದ ಉತ್ತರ ಕರ್ನಾಟಕ ತತ್ತರಿಸಿರುವ ಹಿನ್ನೆಲೆಯಲ್ಲಿ ನೆರೆಹಾವಳಿ ಸಂತ್ರಸ್ತರಿಗೆ ನೆರವಾಗುವ ದೃಷ್ಟಿಯಿಂದಾಗಿ ಶಾಸಕರಾದ ಬಿ.ಶ್ರೀರಾಮುಲು, ಜಿ.ಸೋಮಶೇಖರರೆಡ್ಡಿ ಅವರು ನಗರದಲ್ಲಿ ಸಾರ್ವಜನಿಕರಿಂದ ಶನಿವಾರ ದೇಣಿಗೆ ಸಂಗ್ರಹಿಸಿದರು.
ನಗರದ ಎಸ್‌ಪಿ ವೃತ್ತದಲ್ಲಿನ ಬಿಜೆಪಿ ಕಚೇರಿಯಿಂದ ಆರಂಭವಾದ ದೇಣಿಗೆ ಸಂಗ್ರಹ ನಗರದ ಪ್ರಮುಖ ಬೀದಿ, ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆ ಸೇರಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದರು. ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು, ನಗರ ಶಾಸಕ ಜಿ.ಸೋಮಶೇಖರರೆಡ್ಡಿಯವರು ದೇಣಿಗೆ ಡಬ್ಬಿಯನ್ನು ಹಿಡಿದು ಸಾರ್ವಜನಿಕರಿಂದ ಹಣ ಸಂಗ್ರಹಿಸಿದರು.
ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ಶ್ರೀರಾಮುಲು, ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯವಸ್ಥಗೊಂಡಿದೆ. ಸಾವಿರಾರು ಮನೆಗಳು ನೆರೆಹಾವಳಿಗೆ ತುತ್ತಾಗಿದ್ದು, ಆಸ್ತಿಪಾಸ್ತಿ ಹಾನಿಯಿಂದಾಗಿ ಲಕ್ಷಾಂತರ ಜನರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆದ್ದರಿಂದ ಅಲ್ಲಿನ ಸಂತ್ರಸ್ತರಿಗೆ ಕೆಲವು ಅಗತ್ಯ ವಸ್ತುಗಳನ್ನು ಕಳುಹಿಸಿ ಸ್ವಲ್ಪ ಸಹಾಯವನ್ನು ನೀಡುವ ಮೂಲಕ ಅವರಿಗೆ ನೆರವು ನೀಡಬೇಕಾಗಿದೆ. ಹಾಗಾಗಿ ಬಿಜೆಪಿ ವತಿಯಿಂದ ದೇಣಿಗೆ ಸಂಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಂಸದರಾದ ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಮಾಜಿಶಾಸಕ ಸುರೇಶ್ ಬಾಬು, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷೆ ನಿಶ್ಚಿತ, ಮುಖಂಡರಾದ ವೀರಶೇಖರ್ ರೆಡ್ಡಿ, ಮೊತ್ಕರ್ ಶ್ರೀನಿವಾಸ್, ಮಲ್ಲನಗೌಡ, ಕೃಷ್ಣಾರೆಡ್ಡಿ, ರಾಜು, ಪ್ರಕಾಶ್‌ರೆಡ್ಡಿ, ಅಶೋಕ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.