8 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿ
ಆಟೋ ಚಾಲಕರಿಂದ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ
Team Udayavani, Jul 5, 2019, 11:15 AM IST
ಬಳ್ಳಾರಿ: ಎಸ್‌ಪಿ ಕಚೇರಿ ಎದುರು ಆಟೋ ಚಾಲಕರು ಗುರುವಾರ ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಎಸ್‌ಪಿ ಲಕ್ಷ್ಮಣ ನಿಂಬರಗಿ ಆಗಮಿಸಿ ಚಾಲಕರನ್ನು ಉದ್ದೇಶಿಸಿ ಮಾತನಾಡಿದರು.
ಬಳ್ಳಾರಿ: ಪ್ರಯಾಣಿಕ ಆಟೋಗಳಲ್ಲಿ 8 ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಆಟೋ ಚಾಲಕರು ನಗರದ ಎಸ್‌ಪಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಹೈಕೋರ್ಟ್ ಆದೇಶದ ನೆಪದಲ್ಲಿ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿರುವ ಆಟೋಗಳನ್ನು ಪೊಲೀಸರು ತಡೆದು ಅಗತ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಹತ್ತಿಕೊಳ್ಳಲಾಗಿದೆ ಎಂದು ದಂಡ ವಿಧಿಸುತ್ತಿದ್ದಾರೆ. ಆಟೋಗಳನ್ನು ಸೀಜ್ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಆಟೋಗಳನ್ನು ಹಿಡಿಯುತ್ತಿರುವ ಪೊಲೀಸರು 6 ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಬೇಕು. 3+1 ವಯಸ್ಕರನ್ನು ಹತ್ತಿಸಿಕೊಳ್ಳಬೇಕು. ಮಿನಿ ಬಸ್‌ಗಳಲ್ಲಿ 11+1 ವಿದ್ಯಾರ್ಥಿಗಳು ಇರಬೇಕು ಎಂದು ಸೂಚಿಸುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡಿದರೆ ಆಟೋ ಚಾಲಕರಿಗೆ ನಷ್ಟವಾಗಲಿದ್ದು, ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಈ ವೇಳೆ ಎಸ್‌ಪಿ ಬಳಿಗೆ ನಿಯೋಗ ತೆರಳಿದ ಆಟೋ ಚಾಲಕರ ಸಂಘದ ಮುಖಂಡರು, ಆಟೋಗಳಲ್ಲಿ 8ರಿಂದ 10 ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡಲ್ಲಿ ಚಾಲಕರಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲು ಪ್ರಯತ್ನಿಸಲಾಯಿತು. ಎಸ್‌ಪಿ ಲಕ್ಷ್ಮಣ ನಿಂಬರಗಿ, ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಲು ಬರಲ್ಲ. ಜತೆಗೆ ಆಟೋ ಚಾಲಕರು ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಾದರೆ ಶಾಲಾ -ಕಾಲೇಜುಗಳಲ್ಲಿ ಮಕ್ಕಳ ಪೋಷಕರನ್ನು ಸಭೆ ಕರೆದು ನಷ್ಟ ಭರಿಸುವಂತೆ ಮನವರಿಕೆ ಮಾಡಿಕೊಳ್ಳಿ ಎಂದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತದೆ ಎಂದು ವಿವಿಧ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಕೆ.ತಾಯಪ್ಪ, ಜಾನ್ ಬಾಸ್ಕೋ, ರಾಜೇಶ್ ಹುಂಡೇಕರ್ ತಿಳಿಸಿದರು. ಪ್ರತಿಭಟನೆಯಲ್ಲಿ ಆಟೋ ಚಾಲಕರು, ಮಾಲೀಕರು ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.