ಅನಕ್ಷರತೆಯಿಂದ ಅಪರಾಧ ಹೆಚ್ಚಳ
ಕಾನೂನು ನಿಯಮ ಪಾಲಿಸದವರಿಂದ ವಾಮಮಾರ್ಗ: ಲಾವಣ್ಯ
Team Udayavani, Dec 14, 2019, 4:52 PM IST
ಬಳ್ಳಾರಿ: ಕಾನೂನು ಉಲ್ಲಂಘಿಸುವುದೇ ಅಪರಾಧವಾಗಿದ್ದು, ಪ್ರಾಣ ಉಳಿಸಲೆಂದೇ ಇರುವ ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದು ಹೆಚ್ಚುವರಿ ಎಸ್‌ಪಿ ಬಿ.ಎಸ್.ಲಾವಣ್ಯ ಹೇಳಿದರು.
ನಗರದ ಬಿಪಿಎಸ್‌ಸಿ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಗ್ರಾಮಾಂತರ ಪೊಲೀಸ್ ಠಾಣೆ, ಸನ್ಮಾರ್ಗ ಗೆಳೆಯರ ಬಳಗದಿಂದ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಅಪರಾಧ ತಡೆ ಮಾಸಾಚರಣೆ ನಿಮಿತ್ತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾನೂನಿಗೆ ವಿರುದ್ಧವಾಗಿ ನಡೆಯುವುದೇ ಅಪರಾಧವಾಗಿದೆ. ಪೊಲೀಸರು ಸಂಚಾರಿ ನಿಯಮಗಳು ಹಾಕಿರುತ್ತಾರೆ. ಈ ನಿಯಮಗಳು ಸಾರ್ವಜನಿಕರ ಪ್ರಾಣ ಉಳಿಸುವುದಕ್ಕಾಗಿ ಇವೆ. ಆದರೆ ನಿಯಮಗಳನ್ನು ಪಾಲಿಸದ ಸಾರ್ವಜನಿಕರು ವಾಮ ಮಾರ್ಗಗಳನ್ನು ಅನುಸರಿಸುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದೆ. ಎಲ್ಲರನ್ನು ರಕ್ಷಣೆ ಮಾಡುವುದು ಕೇವಲ ಪೊಲೀಸರಿಂದಲೇ ಸಾಧ್ಯವಾಗಲ್ಲ. ಸಾರ್ವಜನಿಕರು ಸಹ ತಮ್ಮ ಜವಾಬ್ದಾರಿಯನ್ನು ಅರಿತು ಕಾನೂನು ಪಾಲಿಸಬೇಕು. ಒಂದುವೇಳೆ ತೊಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಸಿ ಸಹಕರಿಸಬೇಕು. ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು. ಅಪರಾದಗಳನ್ನು ತಡೆಗಟ್ಟುವುದು ಹಾಗೂ ಆಗದೇ ಇರುವಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಯುವಜನರು ಇಂಟರ್‌ನೆಟ್ ಬಳಕೆ ಹಾಗೂ ಸೋಷಿಯಲ್ ಮೀಡಿಯಾ ಬಳಕೆ ಮಾಡುವಾಗ ತುಂಬಾ ಮುನ್ನೆಚ್ಚರಿಕೆ ವಹಿಸಬೇಕು. ನಿಮಗೆ ತಿಳಿಯದೇ ನಿಮ್ಮ ಖಾಸಗಿ ಮಾಹಿತಿಯನ್ನು ಗೌಪ್ಯವಾಗಿ ಕದಿಯುವವರಿದ್ದಾರೆ ಅನಾಮಧೇಯ ವ್ಯಕ್ತಿ ಹಾಗೂ ವಿಚಾರಗಳಿಗೆ ಸ್ಪಂದಿಸುವಾಗ ಎಚ್ಚರ ವಹಿಸಬೇಕು. ಅಪರಿಚಿತರ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾನೂನು ಅಧಿಕಾರಿ ಅನುರಾಧ ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಡಿವೈಎಸ್‌ಪಿ ಅರುಣ್‌ಕುಮಾರ್ ಜಿ.ಕೊಳೂರು, ಶಾಲೆಯ ಅಧ್ಯಕ್ಷ ಎಸ್. ಜೆ.ವಿ.ಮಹಿಪಾಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಎ.ಎರ್ರಿಸ್ವಾಮಿ ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮೀಣ ಠಾಣೆ ಸಿಪಿಐ ಶ್ರೀನಿವಾಸ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಎಸ್‌ಐ ವೈ.ಎಸ್.
ಹನುಮಂತಪ್ಪ ವಂದಿಸಿದರು. ಸನ್ಮಾರ್ಗ ಗೆಳೆಯರ ಬಳಗದ ಚಂದ್ರಶೇಖರ ಆಚಾರ್, ಎಸ್.ಸತ್ಯನಾರಾಯಣ, ಕೆ.ಬಸವರಾಜ್, ಲಕ್ಷ್ಮಣ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.