ಬಾ ಮಗು..ಆಂಗ್ಲ ಮಾಧ್ಯಮ ಸರಕಾರಿ ಶಾಲೆಗೆ

•39 ಶಾಲೆಗಳಲ್ಲಿ ಆಂಗ್ಲಮಾಧ್ಯಮ ವಿಭಾಗ ಆರಂಭ•30 ಮಕ್ಕಳಿಗಷ್ಟೇ ದಾಖಲಾತಿಗೆ ಅವಕಾಶ

Team Udayavani, May 29, 2019, 12:03 PM IST

29-May-12

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಿಲ್ಲೆಯಲ್ಲಿ 39 ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದ್ದು, ಶಿಕ್ಷಕರಿಗೆ ತರಬೇತಿ, ಕೊಠಡಿಗಳು ಸೇರಿ ಅಗತ್ಯ ಸಿದ್ಧತಾ ಕಾರ್ಯ ಕೈಗೊಂಡಿದೆ. ಮೇ 29 ರಿಂದ ಮಕ್ಕಳ ದಾಖಲಾತಿಗೆ ಚಾಲನೆ ದೊರೆಯಲಿದೆ.

ಕಡ್ಡಾಯ ಶಿಕ್ಷಣ ಕಾಯ್ದೆ (ಆರ್‌ಟಿಇ), ಗ್ರಾಮೀಣ ಪ್ರದೇಶಗಳಲ್ಲೂ ನಾಯಿಕೊಡೆಗಳಂತೆ ವರ್ಷದಿಂದ ವರ್ಷಕ್ಕೆ ತಲೆಎತ್ತುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯಿಂದಾಗಿ ಬಡಮಕ್ಕಳು ಸಹ ಪ್ರತಿಷ್ಠಿತ ಶಾಲೆಗಳತ್ತ ಮುಖ ಮಾಡಿದರೆ, ಶ್ರೀಮಂತರು, ಮಧ್ಯಮ ವರ್ಗದವರು ಸರ್ಕಾರಿ ಶಾಲೆಗಳಿಂದ ದೂರವೇ ಉಳಿದಿದ್ದಾರೆ. ಹೀಗಾಗಿ ಮುಚ್ಚುವ ಹಂತಕ್ಕೆ ತಲುಪಿರುವ ಸರ್ಕಾರಿ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ನಿರ್ಣಯಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಯ್ದ 39 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ವಿಧಾನಸಭಾ ಕ್ಷೇತ್ರಕ್ಕೆ 4-5 ಶಾಲೆಗಳ ಆಯ್ಕೆ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿಗಳನ್ನು ಆರಂಭಿಸಲು ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಅಥವಾ ಐದು ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ 4, ಬಳ್ಳಾರಿ ನಗರ 4, ಹಗರಿ ಬೊಮ್ಮನಹಳ್ಳಿ 4, ಹಡಗಲಿ 4, ಕಂಪ್ಲಿ 5, ಕೂಡ್ಲಿಗಿ 4, ಸಂಡೂರು 4, ಸಿರುಗುಪ್ಪ 5, ಹೊಸಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 5 ಸೇರಿ ಜಿಲ್ಲೆಯಲ್ಲಿ ಒಟ್ಟು 39 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಆಂಗ್ಲ ಮಾಧ್ಯಮಕ್ಕಾಗಿ 1 ರಿಂದ 10ನೇ ತರಗತಿವರೆಗೆ ಇರುವ ಶಾಲೆಗಳನ್ನೇ ಆಯ್ಕೆ ಮಾಡಲಾಗಿದೆ. ಸದ್ಯ ಇರುವ ಕೊಠಡಿಗಳಲ್ಲೇ ಆಂಗ್ಲಮಾಧ್ಯಮ ತರಗತಿ ಆರಂಭಿಸುವಂತೆ ಆಯಾ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ.

56 ಶಿಕ್ಷಕರಿಗೆ ತರಬೇತಿ: ಪ್ರಸಕ್ತ ವರ್ಷದಿಂದ ಆಂಗ್ಲ ಮಾಧ್ಯಮಕ್ಕೆ ಸೇರುವ ಮಕ್ಕಳಿಗೆ ಬೋಧಿಸಲು ಜಿಲ್ಲೆಯಾದ್ಯಂತ ಒಟ್ಟು 56 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಮೊದಲ ವರ್ಷ ಏಕೋಪಾಧ್ಯಾಯ ಶಾಲೆಗಳನ್ನಾಗಿ ಆರಂಭಿಸಲಾಗುತ್ತಿದ್ದು, 39 ಶಾಲೆಗಳಿಗೆ 39 ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ಹೆಚ್ಚುವರಿ 17 ಶಿಕ್ಷಕರನ್ನು ಅಗತ್ಯವಿದ್ದಲ್ಲಿ ಬಳಸಿಕೊಳ್ಳಲು ನಿರ್ಣಯಿಸ ಲಾಗಿದೆ. ಆಂಗ್ಲಮಾಧ್ಯಮದಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾದಲ್ಲಿ ಅತಿಥಿ ಶಿಕ್ಷಕರನ್ನು ಪಡೆದು ಶಿಕ್ಷಕರ ಕೊರತೆ ನೀಗಿಸಲಾಗುವುದು. ಜಿಲ್ಲೆಯಾದ್ಯಂತ ಶಾಲೆಗಳು ತೆರೆಯಲಾಗುವ ಮೇ 29ರಂದು ಆಂಗ್ಲ ಮಾಧ್ಯಮ ಶಾಲೆಗಳಲ್ಲೂ ಮಕ್ಕಳ ಪ್ರವೇಶಕ್ಕೆ ದಾಖಲಾತಿ ಪ್ರಕ್ರಿಯೆ ಚಾಲನೆ ಪಡೆದುಕೊಳ್ಳಲಿದೆ. ಆಂಗ್ಲ ಮಾಧ್ಯಮ ಸೇರುವ ಮಕ್ಕಳಿಗೆ ಯಾವುದೇ ಶುಲ್ಕವಿಲ್ಲದೇ, ಉಚಿತ ಪ್ರವೇಶ ಕಲ್ಪಿಸಲಾಗಿದೆ ಎನ್ನುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಧರನ್‌.

ಆಂಗ್ಲಮಾಧ್ಯಮ ವಿಭಾಗ: ಆಂಗ್ಲ ಮಾಧ್ಯಮವನ್ನು ಆರಂಭಿಸಲು ಜಿಲ್ಲೆಯಲ್ಲಿ ಆಯ್ದ 39 ಶಾಲೆಗಳಲ್ಲೇ ಆಂಗ್ಲಮಾಧ್ಯಮ ವಿಭಾಗವನ್ನು ಆರಂಭಿಸಲಾಗುತ್ತದೆ. ಆರಂಭಿಕವಾಗಿ ಒಂದನೇ ತರಗತಿಗೆ ಕೇವಲ 30 ಮಕ್ಕಳಿಗೆ ಮಾತ್ರ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಪೋಷಕರು ಒತ್ತಡ ಹೇರಿದಲ್ಲಿ ಒಬ್ಬರು ಅಥವಾ ಇಬ್ಬರು ಮಕ್ಕಳನ್ನು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲು ಅವಕಾಶವಿದೆ ಹೊರತು, ಅದಕ್ಕೂ ಹೆಚ್ಚು ಮಕ್ಕಳಿಗೆ ಅವಕಾಶವಿಲ್ಲ. ಸದ್ಯ ಇರುವ ಕೊಠಡಿಗಳಲ್ಲೇ ತರಗತಿ ಆರಂಭಿಸಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವುದರೊಳಗಾಗಿ ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಲು ಪ್ರಯತ್ನಿಸುವುದಾಗಿ ಡಿಡಿಪಿಐ ಶ್ರೀಧರನ್‌ ತಿಳಿಸುತ್ತಾರೆ.

ಜಿಲ್ಲೆಯ 39 ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸಲಾಗುತ್ತದೆ. ಇದಕ್ಕಾಗಿ ಜಿಲ್ಲೆಯ ಪ್ರತಿವಿಧಾನಸಭಾ ಕ್ಷೇತ್ರವಾರು 1 ರಿಂದ 10ನೇ ತರಗತಿವರೆಗೆ ಇರುವ ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಆಂಗ್ಲಮಾಧ್ಯಮದಲ್ಲಿ ಒಂದನೇ ತರಗತಿಗೆ ಮಾತ್ರ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, 30 ಮಕ್ಕಳಿಗೆ ಸೀಮಿತಗೊಳಿಸಲಾಗಿದೆ. ಆಂಗ್ಲ ಮಾಧ್ಯಮ ಬೋಧಿಸಲು 56 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಇರುವ ಎಲ್ಲ ಮೂಲ ಸೌಲಭ್ಯಗಳು ಆಂಗ್ಲಮಾಧ್ಯಮ ವಿದ್ಯಾರ್ಥಿಗಳಿಗೆ ಲಭಿಸಲಿವೆ. ಗ್ರಾಮೀಣ ಭಾಗದಲ್ಲಿ ಎಷ್ಟರ ಮಟ್ಟಿಗೆ ಬೇಡಿಕೆ ಇದೆ ಎಂಬುದು ದಾಖಲಾತಿ ಆರಂಭವಾದ ಬಳಿಕ ತಿಳಿಯಲಿದೆ.
ಶ್ರೀಧರನ್‌, ಡಿಡಿಪಿಐ,
ಸಾರ್ವಜನಿಕ ಶಿಕ್ಷಣ ಇಲಾಖೆ.

ಆಂಗ್ಲಮಾಧ್ಯಮದಲ್ಲಿ ಸದ್ಯ ಒಂದನೇ ತರಗತಿ ಆರಂಭಿಸಲಾಗುತ್ತಿರುವುದರಿಂದ ಪ್ರತ್ಯೇಕ ಒಂದು ಕೊಠಡಿ ಮೀಸಲಿರಿಸಲಾಗಿದೆ. ಶಾಲೆಯ ಇಬ್ಬರು ಶಿಕ್ಷಕರು ಇತ್ತೀಚೆಗೆ ಡಯಟ್‌ನಲ್ಲಿ ತರಬೇತಿ ಪಡೆದಿದ್ದಾರೆ. ಮಕ್ಕಳು ಕೂಡಲು ಬೆಂಚ್‌ಗಳ ವ್ಯವಸ್ಥೆಯೂ ಇದೆ. ಪೋಷಕರು ಮಕ್ಕಳನ್ನು ಸೇರಿಸುವುದೊಂದೇ ಬಾಕಿ ಇದೆ. ಅಲ್ಲದೇ, ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕರಪತ್ರಗಳನ್ನು ಸಿದ್ಧಪಡಿಸಲಾಗಿದ್ದು, ನಾಳೆಯಿಂದ ಪ್ರಭಾತ್‌ ಪೇರಿ ನಡೆಸಿ ಜಾಗೃತಿ ಮೂಡಿಸಲಾಗುತ್ತದೆ.
ಎನ್‌.ವಿರೂಪಾಕ್ಷಪ್ಪ
ಮುಖ್ಯೋಪಾಧ್ಯಾಯರು,
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಂಪುರಂ ಕಾಲೋನಿ, ಬಳ್ಳಾರಿ.

ಟಾಪ್ ನ್ಯೂಸ್

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.