ದಕ್ಷ ಅಧಿಕಾರಿಗೆ ಆತ್ಮೀಯ ಬೀಳ್ಕೊಡುಗೆ

ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ-ಅಧಿಕಾರಿಗಳನ್ನೂ ಪ್ರೋತ್ಸಾಹಿಸಿದ್ದರು ರಾಮಪ್ರಸಾತ್‌

Team Udayavani, Jun 28, 2019, 10:24 AM IST

28-June-5

ಬಳ್ಳಾರಿ: ನಿಕಟಪೂರ್ವ ಜಿಲ್ಲಾಧಿಕಾರಿ ಡಾ| ವಿ. ರಾಮ್‌ ಪ್ರಸಾತ್‌ ಮನೋಹರ್‌ ಅವರನ್ನು ವೈದ್ಯಕೀಯ ಸಚಿವ ಈ.ತುಕಾರಾಂ ಸನ್ಮಾನಿಸಿದರು.

ಬಳ್ಳಾರಿ: ಐಎಎಸ್‌ ಎಂದರೆ ನಮ್ಮ ಆಡು ಭಾಷೆಯಲ್ಲಿ ಐ ಯಮ್‌ ಆಲ್ವೇಸ್ಸ್ ಸೇಫ್‌ ಅಂತಾರೆ ಆದರೆ ದಕ್ಷ ಜಿಲ್ಲಾಧಿಕಾರಿ ಆದ ಡಾ.ರಾಮ್‌ ಪ್ರಸಾತ್‌ ಮನೋಹರ್‌ ಅವರು ಐ ಯಮ್‌ ಆಲ್ವೇಸ್ಸ್ ಸರ್ವಿಸ್‌ ಆಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. 3 ವರ್ಷಗಳ ಕಾಲ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಧಿಕಾರಿ ಡಾ.ರಾಮ್‌ ಪ್ರಸಾತ್‌ ಮನೋಹರ್‌ ಎಂದು ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ಬಣ್ಣಿಸಿದರು.

ನಗರದ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಜಿಲ್ಲಾಡಳಿತ, ವಿವಿಧ ಸಂಘ ಸಂಸ್ಥೆಗಳಿಂದ ಹಮ್ಮಿಕೊಂಡಿದ್ದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ರಾಮ್‌ ಪ್ರಸಾತ್‌ ಮನೋಹರ್‌ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರತಿಯೊಂದು ತಾಲೂಕಿನಲ್ಲಿ ಪ್ರತ್ಯೇಕ ಸಮಸ್ಯೆ ಇರುತ್ತದೆ. ಅದನ್ನು ಸಮತೋಲನ ರೀತಿಯಲ್ಲಿ ನಿರ್ವಹಿಸಲು ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಎಂಬುವುದು ಎರಡು ಕಣ್ಣು ಇದ್ದಂತೆ; ಆ ಎರಡನ್ನು ಸರಿದೂಗಿಸಿ ಜನರಿಗೆ ಸೇವೆ ಸಲ್ಲಿಸಿದ ಅಧಿಕಾರಿಗಳಾಗಿದ್ದಾರೆ ಎಂದು ಡಾ. ರಾಮ್‌ ಪ್ರಸಾತ್‌ ಅವರ ಸೇವೆಗೆ ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲೆಯ ಸುತ್ತಮುತ್ತ ಹಳ್ಳಿಗಳಲ್ಲಿ ಸಣ್ಣ ಸಣ್ಣ ಕೈಗಾರಿಕೆಗಳಾಗಲಿ, ಉದ್ಯೋಗ ಸೃಷ್ಟಿ, ಬಡವರಿಗೆ ಮನೆ ಸೂರು, ಶೈಕ್ಷಣಿಕ ಅಭಿವೃದ್ಧಿ ನೀಡುವುದರ ಜತೆಗೆ ಇತರೆ ಯೋಜನೆ ರೂಪಿಸಿ ಜನ ಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ. ಆ ಮೂಲಕ ಸಾರ್ಥಕ ಸೇವೆ ಸಲ್ಲಿಸಿದ್ದಾರೆ ಎಂದು ಗುಣಗಾನ ಮಾಡಿದ ಸಚಿವ ತುಕಾರಾಂ, ಎಲ್ಲೆ ಇದ್ದರೂ ಸಮಸ್ಯೆಗಳಿಗೆ ಸ್ಪಂದಿಸಿ, ಅದಕ್ಕೆ ಸಂಬಂಧಿಸಿದ ಸೂಕ್ತ ಸಲಹೆ ನೀಡುವುದರ ಜತೆಗೆ ಜನರಲ್ಲಿ ಆ ಕುರಿತು ಮನವರಿಕೆ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ರಾಮ್‌ ಪ್ರಸಾತ್‌ ಮಾತನಾಡಿ, ನಾನು ಮೊದಲಿಗೆ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದಾಗ ಇಲ್ಲಿನ ಜನರ ಮತ್ತು ಅಧಿಕಾರಿಗಳ ಮನೋಭಾವ ಅರಿತು ಈ ಜಿಲ್ಲೆಯನ್ನು ಒಂದು ಮಾದರಿ ಜಿಲ್ಲೆಯನ್ನಾಗಿ ಮಾರ್ಪಡು ಮಾಡಬೇಕು ಎಂದು ಪಣತೊಟ್ಟು ಸಕಾಲ ಯೋಜನೆಯಡಿ ಇಡೀ ರಾಜ್ಯಕ್ಕೆ ಕಡೆತ ವಿಲೇವಾರಿ ಮಾಡುವಲ್ಲಿ ನಮ್ಮ ಬಳ್ಳಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ 25 ಸಾವಿರ ಅಹವಾಲು ಸ್ವೀಕರಿಸಿ ಯಾವುದೇ ಲೋಪವಿಲ್ಲದೇ 16 ಸಾವಿರ ಜನರಿಗೆ ಪಟ್ಟ ನೀಡುವ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ ಶಿಕ್ಷಣ ಇಲಾಖೆ, ಕೈಗಾರಿಕಾ ಇಲಾಖೆ, ಇತರೆ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಸಾಧ್ಯವಾಗಿದೆ ಎಂದರು.

ಕಲ್ಯಾಣ ಸ್ವಾಮೀಜಿ, ರೈತ ಮುಖಂಡರಾದ ಪುರುಷೋತ್ತಮಗೌಡ, ಪನ್ನಾರಾಜ್‌, ಜಿಪಂ ಸಿಇಒ ನಿತೀಶ್‌, ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌, ಹೊಸಪೇಟೆಯ ಸಹಾಯಕ ಆಯುಕ್ತ ಲೋಕೇಶ್‌, ಜಿಲ್ಲಾಧಿಕಾರಿ ಪತ್ನಿ ದಿವ್ಯಪ್ರಭು, ಸ್ವಚ್ಛ ಭಾರತ ಅಭಿಯಾನದ ಮುಖ್ಯಸ್ಥ ರಿಜ್ವಾನ ಸೇರಿದಂತೆ ಇತರರು ಜಿಲ್ಲಾಧಿಕಾರಿಗಳ ಕೆಲಸ-ಕಾರ್ಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಸಹಾಯಕ ಆಯುಕ್ತ ರಮೇಶ್‌ ಕೋನರೆಡ್ಡಿ, ಪಾಲಿಕೆಯ ಆಯುಕ್ತೆ ತುಷಾರಮಣಿ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಪೌರ ಕಾರ್ಮಿಕರು, ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.