ಜ. 11, 12ಕ್ಕೆ ಹಂಪಿ ಉತ್ಸವ ಆಚರಣೆ

ಮೊದಲ ಬಾರಿಗೆ ಪವಾಡ ಬಯಲು ಕಾರ್ಯಕ್ರಮ ಪ್ರತಿ ತಿಂಗಳು 2ನೇ ಶನಿವಾರ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Nov 9, 2019, 5:40 PM IST

9-November-22

ಬಳ್ಳಾರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಹಂಪಿ ಉತ್ಸವವನ್ನು ಜನವರಿ 11 ಮತ್ತು 12 ರಂದು ಎರಡು ದಿನಗಳ ಕಾಲ ಆಚರಿಸಲು ದಿನಾಂಕ ನಿಗದಿಪಡಿಸಲಾಗಿದ್ದು ಉತ್ಸವದ ಬಳಿಕವೂ ಪ್ರತಿ ತಿಂಗಳ 2ನೇ ಶನಿವಾರದಂದು ಹಂಪಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿ ಕಾರಿ ಎಸ್‌.ಎಸ್‌. ನಕುಲ್‌ ಹೇಳಿದರು.

ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಂಪಿ ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 4 ಕೋಟಿ ರೂ. ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ 5 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವರ್ಷದಲ್ಲಿ ಮುಖ್ಯ ವೇದಿಕೆಯಾಗಿ ಗಾಯಿತ್ರಿಪೀಠ ವೇದಿಕೆ, ಎದುರು ಬಸವಣ್ಣ ವೇದಿಕೆ, ವಿರುಪಾಕ್ಷೇಶ್ವರ ದೇವಸ್ಥಾನ ವೇದಿಕೆ, ಸಾಸಿವೆಕಾಳು ವೇದಿಕೆ ಸೇರಿ ಒಟ್ಟು ನಾಲ್ಕು ವೇದಿಕೆಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಎರಡು ದಿನಗಳ ಕಾಲ ಉದಯಪುರ (ರಾಜಸ್ಥಾನ), ದೈನಾಪುರ್‌ (ನಾಗಾಲ್ಯಾಂಡ್‌), ಅಲಹಬಾದ್‌ (ಉತ್ತರ ಪ್ರದೇಶ), ಪಾಟಿಯಾಲ (ಪಂಜಾಬ್‌), ತಾಂಜಾವೂರ್‌ (ತಮಿಳುನಾಡು), ನಾಗಾಪುರ್‌(ಮಹಾರಾಷ್ಟ್ರ), ಕೊಲ್ಕತಾ (ಪಶ್ಚಿಮ ಬಂಗಾಳ) ಏಳು ವಲಯಗಳ ಸಾಂಸ್ಕೃತಿಕ ಕೇಂದ್ರಗಳಿಂದ ಆಯಾ ರಾಜ್ಯಗಳ ವಿಶಿಷ್ಟ ಜಾನಪದ ಕಲಾಪ್ರಕಾರದ ಪ್ರದರ್ಶನಕ್ಕಾಗಿ ಕಲಾ ತಂಡಗಳನ್ನು ನಿಯೋಜಿಸಲು ಆಯ್ಕೆ ಸಮಿತಿ ರಚಿಸಲಾಗಿದೆ ಎಂದು ಅವರು ಹೇಳಿದರು.

ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ನುರಿತ ಕಲಾವಿದರು ತಮ್ಮ ಸೇವಾ ವಿವರ ವ್ಯಕ್ತಿ ಪರಿಚಯದೊಂದಿಗೆ ಪ್ರಶಸ್ತಿ ಪತ್ರ, ಪ್ರಮಾಣ ಪತ್ರ, ಭಾವಚಿತ್ರ ಹಾಗೂ ನೃತ್ಯದ ವಿಡಿಯೋ, ಫೋಟೋಗಳನ್ನು ಡಿ. 10ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮುಚ್ಚಯ, ಡಾ| ರಾಜಕುಮಾರ್‌ ರಸ್ತೆ, ಬಳ್ಳಾರಿ ಇವರಿಗೆ ಅರ್ಜಿಗಳನ್ನು ಸಲ್ಲಿಸಬೇಕು ಹಾಗೂ ಇ-ಮೇಲ್‌ [email protected] ಮೂಲಕ ಕಳುಹಿಸಬೇಕು.

ಅಂತಾರಾಷ್ಟ್ರೀಯ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು, ಹಿರಿಯ ಕಲಾವಿದರು, ನಾಡೋಜ ಕಲಾವಿದರು ಹಂಪಿ ಉತ್ಸವದಲ್ಲಿ ಭಾಗವಹಿಸಲು ತಮ್ಮ ಸ್ವಯಂ ಸೇವಾ ವಿವರದೊಂದಿಗೆ ಯೂಟೂಬ್‌ ಲಿಂಕ್‌ನ್ನು ನೀಡಬೇಕು ಎಂದು ತಿಳಿಸಿದರು.

ತಹಶೀಲ್ದಾರ್‌ ನೇತೃತ್ವದಲ್ಲಿ ತಾಲೂಕುವಾರು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತ ಕಲಾತಂಡಕ್ಕೆ ಹಂಪಿ ಉತ್ಸವದ ಮುಖ್ಯ ವೇದಿಕೆಯಲ್ಲಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಹಂಪಿ ಉತ್ಸವದ ಬಳಿಕವೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತಿ ತಿಂಗಳು 2ನೇ ಶನಿವಾರ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗಿದೆ. ವಿಜಯನಗರ ವೈಭವದ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಂಪಿ ಬೈ ನೈಟ್‌ ಕಾರ್ಯಕ್ರಮವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ವಿವರಿಸಿದರು.

ಎರಡು ದಿನಗಳ ಹಂಪಿ ಉತ್ಸವ ಕಾರ್ಯಕ್ರಮದಲ್ಲಿ ಜಾನಪದ ವಾಹಿನಿ, ಶೋಭಾಯಾತ್ರೆ, ಪುಸ್ತಕ ಪ್ರದರ್ಶನ, ಶಿಲ್ಪಕಲೆ, ಚಿತ್ರಕಲೆ ಶಿಬಿರ ಏರ್ಪಡಿಸಲಾಗುತ್ತಿದೆ. ಈ ಎರಡು ದಿನಗಳ ಕಾಲ ಮನೋರಂಜನೆ, ವಸ್ತು ಪ್ರದರ್ಶನ, ಕರಕುಶಲ ಪ್ರದರ್ಶನ, ದೇಶಿ ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಕುಸ್ತಿ ಪ್ರದರ್ಶನ, ಅಕ್ಕಿಕಾಳು, ಮರಳು ಚಿತ್ರ ಸ್ಪರ್ಧೆ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಲೈಟ್‌ ಶೋ, ಡಾಗ್‌ ಶೋ, ಮತ್ಸ್ಯಮೇಳ, ಹಂಪಿ ಬೈಸ್ಕೈ ಮುಂತಾದ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಪವಾಡ ಬಯಲು ಕಾರ್ಯಕ್ರಮ: ಹಂಪಿ ಉತ್ಸವದಲ್ಲಿ ಮೊದಲ ಬಾರಿಗೆ ಪವಾಡ ಬಯಲು ಮತ್ತು ಮ್ಯಾಜಿಕ್‌ ಷೋ ಕಾರ್ಯಕ್ರಮ ಆಯೋಜಿಸುವ ಕುರಿತು ಚಿಂತನೆ ನಡೆದಿದೆ. ಸಂಜೆ ವೇಳೆ ಎಲ್ಲ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಗಲು ವೇಳೆ ಸಾಸಿವೆಕಾಳು ಗಣಪ ದೇವಸ್ಥಾನ ಬಳಿಯ ವೇದಿಕೆಯಲ್ಲಿ ಹುಲಿಕಲ್‌ ನಟರಾಜ್‌, ಗುರುರಾಜ್‌ ಕರ್ಜಗಿ ಸೇರಿದಂತೆ ಇನ್ನಿತರೆ ಪವಾಡ ಬಯಲು ಕಾರ್ಯಕ್ರಮ ನಡೆಸುವವರನ್ನು ಕರೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಎಸ್‌ಪಿ ಸಿ.ಕೆ. ಬಾಬಾ ಮಾತನಾಡಿ, ಹಂಪಿ ಉತ್ಸವದಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಇಲಾಖೆಯ ಎಲ್ಲ ಹಂತದ ಅ ಧಿಕಾರಿಗಳು ಸೇರಿ ಒಟ್ಟು 2 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗುತ್ತದೆ. ಭದ್ರತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಪ್ಪ ಇದ್ದರು.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.