ಡೊನೇಶನ್‌ ಹಾವಳಿ ನಿಯಂತ್ರಣಕ್ಕೆ ಒತ್ತಾಯ

ಎಐಎಸ್‌ಎಫ್‌ ಜಿಲ್ಲಾ ಸಮಿತಿಯಿಂದ ಆಗ್ರಹ •ಹಾಸ್ಟೆಲ್ ಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ

Team Udayavani, Aug 28, 2019, 1:24 PM IST

28-Agust-27

ಬಳ್ಳಾರಿ: ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್‌ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಹಾಸ್ಟೆಲ್ಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಡೊನೇಶನ್‌ ಹಾವಳಿ ನಿಯಂತ್ರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಐಎಸ್‌ಎಫ್‌) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಭಿವೃದ್ಧಿ ನೆಪದಲ್ಲಿ ದೊಡ್ಡ ಪ್ರಮಾಣದಲ್ಲಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಮೇಲಧಿಕಾರಿಗೆೆ ಸಾಕಷ್ಟು ಬಾರಿ ಗಮನ ಸೆಳೆದರೂ ಕ್ರಮವಿಲ್ಲ. ಇನ್ನಷ್ಟು ದಿನ ನಿರ್ಲಕ್ಷ್ಯವಹಿಸದೆ ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬೇಕು.

ವಿಶ್ವವಿದ್ಯಾಲಯದ ಕೌನ್ಸೆಲಿಂಗ್‌ನಲ್ಲಿ ಕೋಟಾದಡಿ ಮೆರಿಟ್ ವಿಧ್ಯಾರ್ಥಿಗಳು ಆಯ್ಕೆಯಾಗಿ ಖಾಸಗಿ ಸ್ನಾತಕೋತ್ತರ ಕೇಂದ್ರಗಳಲ್ಲಿ ಎಂಎ, ಎಂಕಾಂ, ಎಂಎಸ್ಸಿ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದಾರೆ. ಇಂಥ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಶುಲ್ಕ ಹಾಗೂ ದೇಣಿಗೆ ಹೆಸರಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಂದ 15 ಸಾವಿರಕ್ಕೂ ಹೆಚ್ಚು ಹಣವನ್ನು ಪಡೆಯಲಾಗುತ್ತಿದೆ. ಇದು ತೀರಾ ಖಂಡನೀಯ. ಅಲ್ಲದೇ, ಕಾಲೇಜು ದಾಖಲಾತಿಯಲ್ಲಿ ಶೇ. 50ರಷ್ಟು ಆಡಳಿತ ಮಂಡಳಿ ಕೋಟಾ ನೀಡಿದರೂ, ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕವನ್ನು ಪಡೆಯಲಾಗುತ್ತಿದೆ. ಮೇಲಾಗಿ ಅರ್ಹ ಉಪನ್ಯಾಸಕರನ್ನೂ ನೇಮಿಸದೆ, ಯುಜಿಸಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ಅಂತಹ ಕಾಲೇಜುಗಳನ್ನು ಗುರುತಿಸಿ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಹಾಗೂ ವಿದ್ಯಾಸಿರಿ ಹಣ ವಿದ್ಯಾರ್ಥಿಗಳ ಖಾತೆಗೆ ಪಾವತಿಸಬೇಕು. ವಿಳಂಬ ಮಾಡಿದರೇ ವಿದ್ಯಾರ್ಥಿ ಪೋಷಕರಿಗೆ ಆರ್ಥಿಕ ಹೊರೆಯಿಂದ ಶೈಕ್ಷಣಿಕ ಚಟುವಟಿಕೆಗೆ ತೀವ್ರ ತೊಂದರೆಯಾಗಲಿದೆ. ಹಾಸ್ಟೆಲ್ಗಳಲ್ಲಿ ಹೆಚ್ಚುವರಿ ದಾಖಲಾತಿಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ಆದೇಶ ಹೊರಡಿಸಿದ್ದರೂ ಜಿಲ್ಲೆಯ ನಾನಾ ತಾಲೂಕಿನಲ್ಲಿ ಅಧಿಕಾರಿಗಳು ನಾನಾ ನೆಪ ಹೇಳಿ ಮಕ್ಕಳಿಗೆ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ದೂರಿದರು. ಖಾಸಗಿ ಪದವಿಪೂರ್ವ ಕಾಲೇಜು, ಮಹಾವಿದ್ಯಾಲಯಗಳಲ್ಲಿ ನಡೆಕ್ಷಯುತ್ತಿರುವ ಡೊನೇಶನ್‌ ಹಾವಳಿಗಳನ್ನು ಕೂಡಲೇ ತಡೆಗಟ್ಟಬೇಕು. ಪ್ರವಾಹ, ನೆರೆಯಿಂದ ತತ್ತರಿಸಿದ ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಸರ್ಕಾರ ಅಗತ್ಯ ಪರಿಕರಗಳನ್ನು ಒದಗಿಸಬೇಕು. ನಿರ್ಲಕ್ಷಿಸಿದರೇ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಸಂಗನಕಲ್ಲು ಕಟ್ಟೆಬಸಪ್ಪ, ರಾಜ್ಯ ಉಪಾಧ್ಯಕ್ಷ ಮಾದಿಹಳ್ಳಿ ಮಂಜುನಾಥ್‌, ಕೊಟ್ರೇಶ್‌ ಮುಂಡರಗಿಮs್, ರವಿ, ಹುಲಿನಾಥ್‌, ಅಶ್ವಿ‌ನಿ, ಅನುಷಾ, ದ್ರಾಕ್ಷಾಯಿಣಿ, ಕಲ್ಪನಾ, ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.