ಜಿಂದಾಲ್ ಗೆ ಜಮೀನು ಪರಭಾರೆ ಬೇಡ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ
Team Udayavani, Jun 27, 2019, 11:31 AM IST
ಬಳ್ಳಾರಿ: ಡಿಸಿ ಕಚೇರಿ ಆವರಣದಲ್ಲಿ ಕರವೇ ಕಾರ್ಯಕರ್ತರು ಜಿಂದಾಲ್ ಕಂಪನಿಗೆ ಜಮೀನು ಪರಭಾರೆ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು.
ಬಳ್ಳಾರಿ: ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆ ಮಾಡುವುದನ್ನು ವಿರೋಧಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಪರಭಾರೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಮೇಲಾಗಿ ದೇಶದ ಅತಿದೊಡ್ಡ ಜಿಂದಾಲ್ ಕಂಪನಿಗೆ ಇಷ್ಟು ಕಡಿಮೆ 1.22 ಲಕ್ಷ ರೂ.ಗಳಿಗೆ ಎಕರೆ ಜಮೀನು ನೀಡುತ್ತಿರುವುದು ಸರ್ಕಾರದ ಬೊಕ್ಕಸಕ್ಕೆ ವಂಚನೆಯಾಗುತ್ತಿದೆ. ಆದ್ದರಿಂದ ಈ ಕೂಡಲೇ ರಾಜ್ಯ ಸರ್ಕಾರ ಜಮೀನನ್ನು ಹಿಂಪಡೆಯಬೇಕು.
ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಬೇಕು. ಇಲ್ಲವಾದರೆ ರಾಜ್ಯ ಪ್ರತಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಿ. ರಾಮಾಂಜಿನೇಯ, ನಗರಾಧ್ಯಕ್ಷ ಬಿ. ಚಂದ್ರಶೇಖರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಕೆ.ರಾಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಪಾರ್ವತಿ, ಜಿಲ್ಲಾ ಉಪಾಧ್ಯಕ್ಷ ಬಿ.ಆರ್.ಎಲ್. ಸೀನಾ,ಬಳ್ಳಾರಿ ತಾಲೂಕು ಅಧ್ಯಕ್ಷ ಕರುಣಾಕರರೆಡ್ಡಿ, ರೈತ ಸಂಘದ ಜಿಲ್ಲಾಧ್ಯಕ್ಷ ಹುಲಿಗೇಶ್, ನಗರ ಉಪಾಧ್ಯಕ್ಷ ಅಸುಂಡಿ ಸುರೇಶ್ ಸೇರಿದಂತೆ ವೇದಿಕೆ ಸದಸ್ಯರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.