ನಗರ ವಾಸಿಗಳಿಗಿಂತ ಗ್ರಾಮೀಣರೇ ಬೆಸ್ಟ್‌

ಉಪಚುನಾವಣೆಗೆ ಹೋಲಿಸಿದರೆ ಶೇ.10 ಮತದಾನ ಹೆಚ್ಚಳ •ಮತ ಜಾಗೃತಿ ಮೂಡಿಸಿದರೂ ಇಲ್ಲ ಫಲ

Team Udayavani, Apr 27, 2019, 12:58 PM IST

27-April-17

ಬಳ್ಳಾರಿ: ಮತದಾನ ಜಾಗೃತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್‌ ಗಾಯನ ಪ್ರಸ್ತುತಪಡಿಸಿದ್ದರು. (ಸಂಗ್ರಹ ಚಿತ್ರ)

ಬಳ್ಳಾರಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗಣಿಜಿಲ್ಲೆ ಬಳ್ಳಾರಿ ಮೀಸಲು ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಿದ್ದರೂ ಕಳೆದ ಚುನಾವಣೆಗೆ ಹೋಲಿಸಿದರೆ ಶೇಕಡಾವಾರು ಸರಾಸರಿ ಮತದಾನ ಪ್ರಮಾಣ ಶೇ.5ರಷ್ಟು ಕುಸಿತವಾಗಿದೆ. ಆದರೆ, ಜಿಲ್ಲಾ ಕೇಂದ್ರ ಸ್ಥಾನವಾದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲೇ ಅತ್ಯಂತ ಕಡಿಮೆ ಮತದಾನವಾಗಿದ್ದು, ನಗರ ಪ್ರದೇಶದಲ್ಲೇ ಮತದಾರರು ಮನೆಯಿಂದ ಮತಗಟ್ಟೆಗೆ ಆಗಮಿಸಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದೆ.

ಮತ ಚಲಾಯಿಸುವ ಹಕ್ಕುಳ್ಳ ಪ್ರತಿಯೊಬ್ಬರೂ ಚುನಾವಣೆಯಲ್ಲಿ ಭಾಗವಹಿಸಬೇಕು. ಸಂವಿಧಾನ ಬದ್ಧವಾಗಿ ನೀಡಿರುವ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಿ ಪ್ರಜಾತಂತ್ರ ವ್ಯವಸ್ಥೆ ಬಲಪಡಿಸಬೇಕು ಎಂಬುದು ಚುನಾವಣಾ ಆಯೋಗದ ಆಶಯ.ಅದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸ್ವೀಪ್‌ ಸಮಿತಿಯನ್ನು ಚುನಾವಣಾ ಆಯೋಗ ರಚನೆ ಮಾಡಿದೆ. ಈ ಮೂಲಕ ಎಲ್ಲ ಚುನಾವಣೆಗಳು ನಡೆಯುವ ಪೂರ್ವದಲ್ಲೇ ಸಮಿತಿಯಿಂದ ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಶೇ.100ರಷ್ಟು ಮತದಾನ ಆಗುವ ನಿಟ್ಟಿನಲ್ಲಿ, ನೈತಿಕ ಮತದಾನಕ್ಕೆ ಹೆಚ್ಚು ಒತ್ತು ನೀಡುವ ಸಲುವಾಗಿ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಸಹ ಗ್ರಾಮೀಣ ಭಾಗಕ್ಕಿಂತ ವಿದ್ಯಾವಂತರು, ನೌಕರರು, ಉದ್ಯಮಿಗಳು, ಕಾರ್ಮಿಕರ ಸಂಖ್ಯೆ ಹೆಚ್ಚಿರುವ ನಗರ ಪ್ರದೇಶದಲ್ಲೇ ಮತದಾನ ಪ್ರಮಾಣ ಶೇಕಡಾವಾರು ಕಡಿಮೆಯಾಗುತ್ತಿರುವುದು ಮಾತ್ರ ವಿಪರ್ಯಾಸ.

ಮತದಾನ ಜಾಗೃತಿ: ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್‌ ಸಮಿತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ರಂಗಭೂಮಿ ಹಿರಿಯ ಕಲಾವಿದೆ ಸುಭದ್ರಮ್ಮ ಮನ್ಸೂರ್‌ ಅವರನ್ನು ಚುನಾವಣಾ ಐಕಾನ್‌ (ರಾಯಭಾರಿ)ನ್ನಾಗಿ ಮಾಡಲಾಗಿತ್ತು. ಕಲಾವಿದರಿಂದ ನಗರದ ಮೋತಿ ವೃತ್ತದಲ್ಲಿ ಗಾಯನ ಕಾರ್ಯಕ್ರಮ, ನಾಟಕ ಪ್ರದರ್ಶನ, ಕವಿಕಾವ್ಯ ಗೋಷ್ಠಿ, ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಬೃಹತ್‌ ರ್ಯಾಲಿ ಸೇರಿದಂತೆ ವಿವಿಧ ರೀತಿಯಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರಿಗೆ ಸಾಮೂಹಿಕವಾಗಿ ಪ್ರತಿಜ್ಞಾವಿಧಿ ಬೋಧಿಸಲಾಗಿದೆ. ಆದರೂ, ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಗಲು ಕಾರಣವೇನು ಎಂಬ ಯಕ್ಷಪ್ರಶ್ನೆ ಜಿಲ್ಲಾಡಳಿತವನ್ನು ಕಾಡುತ್ತಿದೆ.

ಉಪಚುನಾವಣೆಯಲ್ಲೂ ಕಡಿಮೆ: ಕಳೆದ 2018 ನವೆಂಬರ್‌ 3ರಂದು ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಶೇ.53ರಷ್ಟು ಮತದಾನವಾಗಿತ್ತು. ಕ್ಷೇತ್ರದಲ್ಲಿ 2.43 ಲಕ್ಷ ಮತದಾರರು ಇದ್ದರೂ 1,24,965 ಮತದಾರರು ಮಾತ್ರ ಹಕ್ಕು ಚಲಾಯಿಸಿದ್ದರು. 2014ರಲ್ಲಿ ಲೋಕಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 1,28,047 ಮತದಾರರು ಮತದಾನ ಮಾಡಿದ್ದರು. ಇದೀಗ 2019ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 63.05ರಷ್ಟು ಅತ್ಯಂತ ಕಡಿಮೆ ಮತದಾನ ದಾಖಲಾಗಿದ್ದು, ಕಳೆದ ಉಪಚುನಾವಣೆಗೆ ಹೋಲಿಸಿದರೆ ಶೇ.10ರಷ್ಟು ಏರಿಕೆಯಾಗಿರುವುದು ಸಮಾಧಾನಕರ. ಮನೆಯಿಂದ ಹೊರಬಂದು ಹಕ್ಕು ಚಲಾಯಿಸದ ಕ್ಷೇತ್ರದ ಮತದಾರರ ಮುಂದೆ ಜಿಲ್ಲಾಡಳಿತ, ಸ್ವೀಪ್‌ ಸಮಿತಿ ಕೈಗೊಳ್ಳುವ ಮತದಾನ ಪ್ರಮಾಣ ಹೆಚ್ಚಿಸುವ, ನೈಜ ಮತದಾನಕ್ಕೆ ಒತ್ತು ನೀಡುವ ಎಲ್ಲ ಕಾರ್ಯಕ್ರಮಗಳು ಗೌಣವಾಗುತ್ತಿವೆ.

ಪುರುಷರ ಪ್ರಮಾಣವೇ ಹೆಚ್ಚು: ಬಳ್ಳಾರಿ ಲೋಕಸಭೆ ಚುನಾವಣೆಯ ಬಳ್ಳಾರಿ ವಿಧಾನಸಭೆ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದ್ದರೂ ಹಕ್ಕು ಚಲಾಯಿಸಿದವರಲ್ಲಿ ಪುರುಷರೇ ಮುಂದಿದ್ದಾರೆ. ಕ್ಷೇತ್ರದಲ್ಲಿ 1,23,621 ಮಹಿಳಾ ಮತದಾರರಲ್ಲಿ 76,322 ಜನರು ಮತದಾನ ಮಾಡಿದ್ದಾರೆ. 1,19,068 ಪೈಕಿ 76,708 ಪುರುಷ ಮತದಾರರು ಹಕ್ಕು ಚಲಾಯಿಸಿದ್ದಾರೆ. 15 ಜನ ತೃತೀಯ ಲಿಂಗಿಗಳು ಹೆಸರು ನೋಂದಣಿ ಮಾಡಿಸಿಕೊಂಡಿದ್ದರೂ ಇದರಲ್ಲಿ ಕೇವಲ ಒಬ್ಬರು ಮಾತ್ರ ಮತದಾನ ಮಾಡಿದ್ದು, ಉಳಿದವರು ಮತದಾನದಿಂದ ದೂರ ಉಳಿದಿದ್ದಾರೆ. ಇನ್ನು ಅಂಗವಿಕಲರಲ್ಲೂ ಕೇವಲ ಶೇ.68.53 ರಷ್ಟು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲಿ ಮತದಾನ ಪ್ರಮಾಣ ಏರಿಕೆಯತ್ತ ಸಾಗುತ್ತಿದ್ದರೆ, ನಗರ ಪ್ರದೇಶದಲ್ಲೇ ಕುಸಿಯುತ್ತಿದೆ.

ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಈಚೆಗೆ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.53 ರಷ್ಟು ಮತದಾನವಾಗಿತ್ತು. ಆದರೆ, ಇದೀಗ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.63 ರಷ್ಟು ಮತದಾರರು ಹಕ್ಕು ಚಲಾಯಿಸಿದ್ದು, ಮತದಾನ ಪ್ರಮಾಣ ಶೇ.10ರಷ್ಟು ಹೆಚ್ಚಳವಾಗಿದೆ. ವಿಭಿನ್ನ ರೀತಿಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿದರೂ ಮನೆಯಿಂದ ಹೊರಬಂದು ಮತದಾನ ಮಾಡದಿರಲು ಕಾರಣ ಜನರನ್ನೇ ಕೇಳಬೇಕು.
•ತುಷಾರಮಣಿ,
ಸಹಾಯಕ ಚುನಾವಣಾಧಿಕಾರಿ,
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.