ರಾಮುಲುಗಿಲ್ಲ ಡಿಸಿಎಂ: ಬೆಂಬಲಿಗರು ಗರಂ
ವಾಲ್ಮೀಕಿ ಸಮುದಾಯದ ಮುಖಂಡರ ಅಸಮಾಧಾನ • ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು • ರಾಜ್ಯದ ವಿವಿಧೆಡೆ ಪ್ರತಿಭಟನೆ
Team Udayavani, Aug 28, 2019, 11:44 AM IST
ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ನೂತನ ಸರ್ಕಾರದಲ್ಲಿ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊನೇ ಕ್ಷಣದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವುದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ‘ನಿಮಗೆ ಆ ಹುದ್ದೆ ಸಿಗಲ್ಲ’ ಎಂಬ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮಾತು ನಿಜವಾಗಿದೆ.
ಗಣಿನಾಡು ಬಳ್ಳಾರಿಯ ರೆಡ್ಡಿ ಸಹೋದರರೊಂದಿಗೆ ರಾಜಕೀಯ ಆರಂಭಿಸಿದ ಶ್ರೀರಾಮುಲು ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡವರು. ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಟ್ಟುವಲ್ಲಿ ಅವರ ಶ್ರಮ ಅಡಗಿದೆ ಎನ್ನುವುದೂ ಸತ್ಯ. ಹೀಗಾಗಿ ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ವಾಲ್ಮೀಕಿ ಸಮುದಾಯದಿಂದಲೂ ಈ ಬಗ್ಗೆ ಒತ್ತಾಯ ಕೇಳಿಬಂದಿತ್ತು. ಮಾಜಿ ಸಚಿವ ಜಿ.ಜನಾರ್ದನರೆಡ್ಡಿಯವರೂ ಹಿಂದೊಮ್ಮೆ ಶ್ರೀರಾಮುಲು ಅವರು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ನೀಡಿದ್ದರು.
ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ. ಜತೆಗೆ ಬಿಜೆಪಿ ಪಕ್ಷದಲ್ಲೂ ಪ್ರಭಾವಿಯಾಗಿ ಗುರುತಿಸಿಕೊಂಡಿದ್ದರು. ಅಲ್ಲದೇ, ಪ್ರಬಲ ರಾಜ್ಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಮೊದಲು ನೆರೆಯ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀರಾಮುಲು, ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದರು. ಆಗ ಮೊಳಕಾಲ್ಮೂರು ಕ್ಷೇತ್ರದಿಂದ ಭಾರಿ ಅಂತರದಿಂದ ಜಯಗಳಿಸಿ, ಬಾದಾಮಿ ಕ್ಷೇತ್ರದಲ್ಲಿ ಕೇವಲ 1600 ಮತಗಳ ಅಂತರದಿಂದ ಪರಾಭವಗೊಂಡರು. ಜತೆಗೆ ರಾಜ್ಯಾದ್ಯಂತ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು.
ಇನ್ನೊಂದೆಡೆ ಪಕ್ಷದಲ್ಲೂ ವಿವಿಧ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದಲ್ಲಿ ಅವರಿಗೆ ಡಿಸಿಎಂ ಹುದ್ದೆ ಖಚಿತ ಎಂಬ ಸುದ್ದಿಯೂ ಹಬ್ಬಿತ್ತು. ಆದರೆ, ಆಗ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ರಚನೆಯಾದ್ದರಿಂದ ಡಿಸಿಎಂ ಹುದ್ದೆ ಕೂಗಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಆದರೆ, ಇದೀಗ ಪುನಃ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಡಿಸಿಎಂ ಕೂಗಿಗೆ ಮತ್ತಷ್ಟು ಪುಷ್ಠಿ ಬಂದಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ಪಕ್ಷದ ಮೇಲೆ ಒತ್ತಡ ಹೇರಿದ್ದರು.
ಆದರೆ ಬಿಜೆಪಿ ಹೈಕಮಾಂಡ್ ಇದೀಗ ಪರಿಶಿಷ್ಟ ಜಾತಿ ಕೋಟಾದಲ್ಲಿ ಹಿರಿಯ ಮುಖಂಡ ಸಚಿವ ಗೋವಿಂದ ಕಾರಜೋಳ, ಲಿಂಗಾಯತ ಕೋಟಾದಡಿ ಸಚಿವ ಲಕ್ಷ್ಮಣ ಸವದಿ, ಒಕ್ಕಲಿಗರ ಪೈಕಿ ಅಶ್ವತ್‌ನಾರಾಯಣ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುತ್ತಿದ್ದಂತೆ ವಾಲ್ಮೀಕಿ ಸಮುದಾಯದಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಬಳ್ಳಾರಿ-ಹೊಸಪೇಟೆ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅಭಿಮಾನಿಗಳು, ಶ್ರೀರಾಮುಲು ಅವರಿಗೆ ಡಿಸಿಎಂ ಹುದ್ದೆ ನೀಡದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದಂತಾಗಿದೆ. ಅವರಿಗೆ ಡಿಸಿಎಂ ಹುದ್ದೆ ನೀಡದಿದ್ದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಲಿದೆ ಎಂದೂ ಎಚ್ಚರಿಸಿದ್ದಾರೆ.
ಮತ್ತೆ ಆರೋಗ್ಯ ಸಚಿವ
ಈ ಹಿಂದೆ 2008ರಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶ್ರೀರಾಮುಲು, ಆಗ 108 ಆ್ಯಂಬುಲೆನ್ಸ್ , ವಾಜಪೇಯಿ ಆರೋಗ್ಯಶ್ರೀ ಸೇರಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಇದೀಗ ಪುನಃ ಅದೇ ಖಾತೆ ಲಭಿಸಿದ್ದು, ಮತ್ತಷ್ಟು ಉತ್ತಮ ಯೋಜನೆ ರೂಪಿಸಲಿದ್ದಾರೆಯೇ? ಅಥವಾ ಡಿಸಿಎಂ ಪಟ್ಟದ ಬೆನ್ನು ಬೀಳಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕು.
ನಿಜವಾದ ಡಿಕೆಶಿ ಭವಿಷ್ಯ
ಬಿಜೆಪಿ ಸರ್ಕಾರ ರಚನೆಯಾದಲ್ಲಿ ಡಿಸಿಎಂ ಹುದ್ದೆ ನಿರೀಕ್ಷೆಯಲ್ಲಿದ್ದ ಶ್ರೀರಾಮುಲು ಅವರಿಗೆ ಕಳೆದ ವಿಧಾನಸಭೆ ಅಧಿವೇಶನದಲ್ಲೇ ಬಳ್ಳಾರಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದರು. ‘ರಾಮುಲು ಅವರೇ ನಿಮ್ಮ ಪಕ್ಷದಲ್ಲಿ ನಿಮ್ಮನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲ್ಲ. ಆ ಹುದ್ದೆ ಈಗಾಗಲೇ ಬೇರೆಯವರಿಗೆ ಮೀಸಲಾಗಿದೆ. ನೀವು ನಮ್ಮ (ಕಾಂಗ್ರೆಸ್) ಪಕ್ಷಕ್ಕೆ ಬನ್ನಿ. ನಾವು ಉಪಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ’ ಎಂದಿದ್ದರು. ಅದರಂತೆ ರಾಮುಲು ಅವರಿಗೆ ಡಿಸಿಎಂ ಹುದ್ದೆ ಕೈತಪ್ಪಿದ್ದು, ಡಿಕೆಶಿ ಭವಿಷ್ಯ ನಿಜವಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.