
ಬಳ್ಳಾರಿಗಿಲ್ಲ ಸಚಿವಗಿರಿ: ಅಂದು ಪ್ರಾಬಲ್ಯ-ಇಂದು ಸಿಕ್ಕಿಲ್ಲ ಪ್ರಾತಿನಿಧ್ಯ
ಬಳ್ಳಾರಿಯವರಾದ ಮೊಳಕಾಲ್ಮುರು ಶಾಸಕ ರಾಮುಲುಗೆ ಸಚಿವ ಸ್ಥಾನಸಚಿವಾಕಾಂಕ್ಷಿಗಳಾಗಿದ್ದ ರೆಡ್ಡಿ ಸಹೋದರರುಹಿಂದೆ ಜಿಲ್ಲೆಗೆ ಲಭಿಸಿದ್ದ ಮೂರು ಸಚಿವ ಸ್ಥಾನ
Team Udayavani, Aug 21, 2019, 3:35 PM IST

ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ದಶಕದ ಹಿಂದೆ ಮೂರು ಸಂಪುಟ ದರ್ಜೆಯ ಸಚಿವ ಸ್ಥಾನ, ಕೆಎಂಎಫ್ ರಾಜ್ಯಾಧ್ಯಕ್ಷ ಸ್ಥಾನ ಪಡೆದಿದ್ದ ಗಣಿನಾಡು ಬಳ್ಳಾರಿ ಜಿಲ್ಲೆಗೆ ಹಾಲಿ ಸಿಎಂ ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರದಲ್ಲಿ ಒಂದೂ ಸಚಿವ ಸ್ಥಾನ ಲಭಿಸದಿರುವುದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿಯಲ್ಲಿ ಅಂದು ಇದ್ದ ರಾಮುಲು, ರೆಡ್ಡಿತ್ರಯರ ಪ್ರಾಬಲ್ಯ ಇಂದು ಕುಸಿದಿರುವುದೇ ಜಿಲ್ಲೆಗೆ ಸಚಿವ ಸ್ಥಾನ ಕೈ ತಪ್ಪಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ರಾಜ್ಯ ರಾಜಕಾರಣದಲ್ಲಿ ಗಣಿನಾಡು ಬಳ್ಳಾರಿ ಜಿಲ್ಲೆ ತನ್ನದೇ ಆದ ಪ್ರಾಬಲ್ಯ ಮೆರೆದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ 2006ರಲ್ಲಿ ರಚನೆಯಾಗಿದ್ದ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಮೊದಲ ಬಾರಿಗೆ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಶ್ರೀರಾಮುಲು ಅವರು ಪ್ರವಾಸೋದ್ಯಮ ಸಚಿವರಾಗಿದ್ದರು. ಬಳಿಕ 2008ರ ವಿಧಾನಸಭೆ ಚುನಾವಣೆಯಲ್ಲಿ 110 ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿಗೆ ಆರು ಜನ ಪಕ್ಷೇತರ ಶಾಸಕರ ಬೆಂಬಲ ಕೊಡಿಸುವ ಮೂಲಕ ಸರ್ಕಾರ ರಚಿಸುವಲ್ಲಿ ರಾಮುಲು, ರೆಡ್ಡಿ ಸಹೋದರರು ಪ್ರಮುಖ ಪಾತ್ರ ವಹಿಸಿದ್ದರು. ಈ ಮೂಲಕ ಪಕ್ಷದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದರು. ಪರಿಣಾಮ ಆಗ ಬಳ್ಳಾರಿ ಜಿಲ್ಲೆಯ ಕೆಎಂಎಫ್ ರಾಜ್ಯಾಧ್ಯಕ್ಷ ಸ್ಥಾನ ಸೇರಿ, ಮೂರು ಸಂಪುಟ ದರ್ಜೆಯ ಸಚಿವ ಸ್ಥಾನಗಳು ಲಭಿಸಿದ್ದವು.
ಹರಪನಹಳ್ಳಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕರುಣಾಕರರೆಡ್ಡಿ ಅವರಿಗೆ ಕಂದಾಯ ಸಚಿವರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಮಾಜಿ ಸಚಿವ ಜನಾರ್ದನರೆಡ್ಡಿಯವರಿಗೆ ಪ್ರವಾಸೋದ್ಯಮ, ಸಚಿವ ಬಿ.ಶ್ರೀರಾಮುಲು ಅವರು, ಆರೋಗ್ಯ ಸಚಿವರಾಗಿ ಮತ್ತು ಹಾಲಿ ಶಾಸಕಸೋಮಶೇಖರರೆಡ್ಡಿ ಅವರಿಗೆ ಕೆಎಂಎಫ್ ಮಹಾಮಂಡಳದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿತ್ತು. ರೆಡ್ಡಿಗಳ ಪರವಾಗಿದ್ದ ಕೆಲವೊಂದು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಕ್ಕೆ ಅಂದಿನ ಮುಖ್ಯಮಂತ್ರಿಯಾಗಿದ್ದ, ಹಾಲಿ ಸಿಎಂ ಯಡಿಯೂರಪ್ಪ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರವನ್ನೇ ಬೀಳಿಸುವ ನಿಟ್ಟಿನಲ್ಲಿ ಶಾಸಕರೆಲ್ಲರನ್ನು ರೆಸಾರ್ಟ್‌ಗೆ ಕರೆದೊಯ್ದಿದ್ದರು. ಅಷ್ಟೊಂದು ಪ್ರಭಾವ ಬೀರಿದ್ದ ಗಣಿನಾಡು ಬಳ್ಳಾರಿ ಜಿಲ್ಲೆಗೆ ಹಾಲಿ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಒಂದೂ ಸಚಿವ ಸ್ಥಾನ ಲಭಿಸದಿರುವುದು ನಿರಾಸೆ ಮೂಡಿಸಿದೆ. ಮೊಳಕಾಲ್ಮುರು ಶಾಸಕ, ಬಳ್ಳಾರಿ ಮೂಲದ ಬಿ.ಶ್ರೀರಾಮುಲು ಅವರಿಗೆ ಸಚಿವ ಸ್ಥಾನ ನೀಡಿರುವುದು ಸ್ವಲ್ಪ ಸಮಾಧಾನಕರ ಸಂಗತಿಯಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.