ನಾಳೆಯಿಂದ ಸಾವಯವ ಕೃಷಿ ಕಾರ್ಯಾಗಾರ
ರಾಸಾಯನಿಕ ಮುಕ್ತ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ
Team Udayavani, Jun 14, 2019, 4:31 PM IST
ಬಳ್ಳಾರಿ: ಮೈಸೂರಿನ ಉಳುಮೆ ಪ್ರತಿಷ್ಠಾನದ ನೈಸರ್ಗಿಕ ಕೃಷಿಕ ಟಿ.ಜಿ.ಎನ್.ಅವಿನಾಶ್ ಭಿತ್ತಿಪತ್ರ ಬಿಡುಗಡೆ ಮಾಡಿದರು.
ಬಳ್ಳಾರಿ: ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಎರ್ರಿತಾತ ದೇವಸ್ಥಾನದ ಪ್ರಾಂಗಣದಲ್ಲಿ ಜೂ.15, 16 ರಂದು ಎರಡು ದಿನಗಳ ಕಾಲ ರೈತನ ಸಮೃದ್ಧಿ ಮತ್ತು ನೆಲ, ಜಲದ ಕುರಿತು ಜನಜಾಗೃತಿಗಾಗಿ ನೈಸರ್ಗಿಕ ಕೃಷಿ ವಿಜ್ಞಾನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಉಳುಮೆ ಪ್ರತಿಷ್ಠಾನದ, ನೈಸರ್ಗಿಕ ಕೃಷಿಕ ಟಿ.ಜಿ.ಎನ್.ಅವಿನಾಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರೈತರು ಮಳೆಯ ಕೊರತೆ, ಅಂತರ್ಜಲ ಕುಸಿತ ಸೇರಿ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಅನಿಯಮಿತವಾಗಿ ರಾಸಾಯನಿಕ ಬಳಕೆಯಿಂದಾಗಿ ಸುಸ್ಥಿರ ಸಾವಯವ ಕೃಷಿ ಪದ್ಧತಿಯೆಂಬುದೇ ಮರೀಚಿಕೆಯಾಗುತ್ತಿದೆ. ಹಾಗಾಗಿ ರಾಸಾಯನಿಕ ಮುಕ್ತ ಕೃಷಿ ಪದ್ಧತಿಯನ್ನು ಪ್ರತಿಯೊಬ್ಬ ರೈತರು ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಮುಂದಿನ ದಿನಗಳಲ್ಲಿ ರೈತರಿಗೆ ಮರಗಳ ಬೆಳೆಸುವ ಆಧಾರಿತ ಕೃಷಿ ಪದ್ಧತಿಯೊಂದೇ ಪರಿಹಾರ ಮಾರ್ಗವಾಗಿದೆ. ಕೃಷಿ ಜಮೀನುಗಳಲ್ಲಿ ಮರಗಳನ್ನು ಬೆಳೆಸುವುದರಿಂದ ಮಳೆ ಪ್ರಮಾಣ ಹೆಚ್ಚುತ್ತದೆ. ಮರಗಳಲ್ಲಿ 107 ಹಣ್ಣಿನ ಮರಗಳು, 90 ತರಕಾರಿ ಗಿಡಗಳಿವೆ. ಸಮುದ್ರ ತೀರದಲ್ಲಿ ಬೆಳೆಯುವ ಏರೋ ಸೌತ್ಸ್ ಬೆಳೆಯಬೇಕಾಗಿದೆ. ಈ ಮರಗಳು ಮಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸುರಿಸುತ್ತವೆ. ಸುರಿದ ಮಳೆಯ ತೇವಾಂಶವನ್ನು ಕಾಪಾಡುತ್ತವೆ. ಇಂಥ ವೈಜ್ಞಾನಿಕ ಕೃಷಿ ಪದ್ಧತಿಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ವಿವರಿಸಿದರು.
ಕಾರ್ಯಾಗಾರದಲ್ಲಿ ಬಿದ್ದ ಮಳೆಯನ್ನು ಭೂಮಿಯಲ್ಲಿ ಹಿಡಿದಿಟ್ಟುಕೊಳ್ಳುವ ವಿಧಾನ, ಸಸ್ಯ ಬೆಳವಣಿಗೆಯಲ್ಲಿ ಬೆಳಕಿನ ಮಹತ್ವ, ಹ್ಯೂಮಸ್ ಮತ್ತು ಸಾವಯವ ಇಂಗಾಲದ ಮಹತ್ವ (ಭೂಮಿಯನ್ನು ಸಹಜವಾಗಿ ಬಲಗೊಳಿಸುವಿಕೆ), ಭೂಮಿಯಲ್ಲಿ ಸಹಜವಾಗಿ ನೈಸರ್ಗಿಕ ಉತ್ಪತ್ತಿ ಮಾಡುವ ವಿಧಾನ, ದ್ವಿದಳ ಧಾನ್ಯಗಳ ಮಹತ್ವ ಮತ್ತು ನಾಟಿ ಬೀಜ ಆಯ್ಕೆ ಮಾಡುವ ವಿಧಾನ, ಸಂರಕ್ಷಣೆ ಮಾಡುವ ವಿಧಾನ, ನಮ್ಮ ಭೂಮಿಯಲ್ಲಿ ಸಹಜ ಎರೆಹುಳು ಮತ್ತು ಸೂಕ್ಷ್ಮ ಜೀವಿಗಳ ಮಹತ್ವ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಪ್ರಗತಿಪರ ರೈತರು ತಮ್ಮ ಅನುಭವ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಬಿ.ಯು.ಯರ್ರಿಸ್ವಾಮಿ, ಕಮ್ಮರಚೇಡು ಈಶ್ವರಪ್ಪ, ಜಿ.ನಾಗರಾಜ, ರಾಮಕೃಷ್ಣ, ಕೆ.ಮಾರೆಣ್ಣ, ಕೆ.ಶಿವಪ್ಪ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.