ಅಭಿವೃದ್ಧಿ ನೆಪದಲ್ಲಿ ಮರ ನಾಶ ಸಲ್ಲ
ಅರಿವಿದ್ದರೂ ನಿಲ್ಲದ ಮರಗಳ ಮಾರಣಹೋಮ: ರೆಡ್ಡಿ ವಿಷಾದ
Team Udayavani, Aug 14, 2019, 4:16 PM IST
ಬಳ್ಳಾರಿ: ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಗಿಡನೆಡುವ ಕಾರ್ಯಕ್ರಮವನ್ನು ನೆರವೇರಿಸಿದ ಶಾಸಕ ಜಿ.ಸೋಮಶೇಖರ ರೆಡ್ಡಿ.
ಬಳ್ಳಾರಿ: ಮರಗಳ ಮಾರಣಹೋಮ ಮಾಡುವುದರಿಂದ ಪರಿಸರ ಹಾಳಾಗಲಿದೆ ಎಂಬ ಅರಿವು ಎಲ್ಲರಲ್ಲಿದ್ದರೂ ಮರಗಳನ್ನು ಕಡಿಯುವುದು ಸಾಮಾನ್ಯವಾಗಿದೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ವಿಷಾದ ವ್ಯಕ್ತಪಡಿಸಿದರು.
ನಗರದ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇತ್ತೀಚೆಗೆ ಅಭಿವೃದ್ಧಿ ನೆಪದಲ್ಲಿ ಮರಗಳನ್ನು ಕಡಿಯುವುದು ಸಾಮಾನ್ಯವಾಗಿದೆ. ಇದು ಇಂದೇ ನಿಲ್ಲಬೇಕು, ಇದರಿಂದ ಅರಣ್ಯ ನಾಶವಾಗುವದರ ಜೊತೆಗೆ ಪರಿಸರ ಹಾಳಾಗಲಿದೆ. ಇದರ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಮರಗಳ ಮಾರಣ ಹೋಮ ಮಾಡುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ. ಈ ಕುರಿತು ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳು ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಿದರೂ ನಾನಾ ಕಡೆ ಇನ್ನೂ ಜೀವಂತವಾಗಿದೆ. ಇದು ಇಂದೇ ನಿಲ್ಲಬೇಕು. ಅರಣ್ಯ ಸಂಪತ್ತನ್ನು ಬೆಳೆಸುವುದರ ಜತೆಗೆ ಅದನ್ನು ಉಳಿಸುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು. ಇದರಿಂದ ಸಕಾಲಕ್ಕೆ ಮಳೆಯಾಗಿ, ನಾಡು ಸಮೃದ್ಧಿಯಾಗಲಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಮನೆ ಎದುರು ಅಥವಾ ಆವರಣದಲ್ಲಿ ಮರಗಳನ್ನು ಬೆಳೆಸಲು ಮುಂದಾಗಬೇಕು, ಇದರಿಂದ ವ್ಯಾಪ್ತಿಯ ಪರಿಸರ ಉತ್ತಮವಾಗಿರಲಿದೆ. ತ್ಯಾಜ್ಯ ವಸ್ತುಗಳನ್ನು ನಿಗತ ಸ್ಥಳದಲ್ಲಿ ವಿಲೇವಾರಿ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು. ಎಲ್ಲೆಂದರಲ್ಲೇ ಎಸೆಯುವದರಿಂದ ಪರಿಸರ ಹಾಳಾಗುವದರ ಜೊತೆಗೆ ಸೊಳ್ಳೆಗಳೂ ಉತ್ಪತ್ತಿಯಾಗಿ ನಾನಾ ರೋಗಗಳು ಹರಡಲು ಕಾರಣವಾಗಲಿದೆ ಎಂದು ತಿಳಿಸಿದರು.
ವೀ.ವಿ. ಸಂಘದ ಕಾರ್ಯದರ್ಶಿ ಟಿ.ಕೊಟ್ರಪ್ಪ ಮಾತನಾಡಿ, ಪ್ರತಿಯೊಬ್ಬ ಮಕ್ಕಳೂ ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ಕಳೆದು ಹೋದ ಸಮಯ ಮತ್ತೆ ವಾಪಸ್ ತರಲು ಯಾರಿಂದಲೂ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸಮಯಕ್ಕೆ ಮೊದಲ ಆದ್ಯತೆ ನೀಡಿ ಗುಣಮಟ್ಟದ ಶಿಕ್ಷಣದ ಕಡೆ ಹೆಚ್ಚು ಗಮನಹರಿಸಬೇಕು. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು ಕಲಿಸಿದ ಗುರುಗಳ, ಪಾಲಕರ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಕೋರಿದರು. ಶಾಲೆ ಆಡಳಿತ ಮಂಡಳಿ ಸದಸ್ಯರು, ಶಾಲಾ ಮುಖ್ಯಸ್ಥರು ಮಾತನಾಡಿದರು.
ಮಹಾನಗರ ಪಾಲಿಕೆ ಸದಸ್ಯ ಎಸ್.ಮಲ್ಲನಗೌಡ, ಮೋತ್ಕರ್ ಶ್ರೀನಿವಾಸ್, ಮುಖ್ಯ ಶಿಕ್ಷಕಿ ಕುಮುದಾ ನಾಯ್ಕ, ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.