ಅಂಗವಿಕಲರ ಸಮಗ್ರ ಸಮೀಕ್ಷೆ ನಡೆಸಿ

•ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ತಾಕೀತು •ನೋಡಲ್ ಅಧಿಕಾರಿ ನೇಮಿಸಿ

Team Udayavani, Jun 29, 2019, 4:00 PM IST

29-June-29

ಬಳ್ಳಾರಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ ಬಸವರಾಜ್‌ ಮಾತನಾಡಿದರು.

ಬಳ್ಳಾರಿ: ನಗರ ವ್ಯಾಪ್ತಿಯಲ್ಲಿ ಸಮಗ್ರವಾಗಿ ಅಂಗವಿಕಲರ ಸಮೀಕ್ಷೆ ನಡೆಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ ಬಸವರಾಜು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಳ್ಳಾರಿ ನಗರವು 5 ಲಕ್ಷ ಜನಸಂಖ್ಯೆ ಹೊಂದಿದೆ. ಇದರಲ್ಲಿ ಶೇ.2ರಷ್ಟು ಜನರು ಅಂಗವಿಕಲರಿದ್ದಾರೆ. ನಿಖರ ಮಾಹಿತಿ ತಿಳಿದುಕೊಂಡು ಅವರಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅನುಕೂಲವಾಗುತ್ತದೆ ಎಂದರು. ಇದಕ್ಕೆ ಉತ್ತರಿಸಿದ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಎಂ.ಆರ್‌.ಡಬ್ಲೂಗಳಿಗೆ ಸೂಕ್ತ ತರಬೇತಿ ನೀಡಿ ಶೀಘ್ರ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹಾನಗರ ಪಾಲಿಕೆ ಮತ್ತು ನಗರ ಸಂಸ್ಥೆಗಳು ಅಂಗವಿಕಲರಿಗೆ ಇದುವರೆಗೆ ಒದಗಿಸಿರುವ ಮೂಲಸೌಕರ್ಯ ಕುರಿತು ನೀಡಿರುವ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮಹ್ಮದ್‌ ಮುನೀರ್‌ ಅವರು ಈ ವರ್ಷದ ಕ್ರಿಯಾಯೋಜನೆಯಲ್ಲಿ ಅಂಗವಿಕಲ ಸ್ನೇಹಿ ಶೌಚಾಲಯ ಹಾಗೂ ಪಾರ್ಕ್‌ಗಳ ನಿರ್ಮಾಣ, ಬೈಕ್‌ ಅಲ್ಲದೇ ಮನೆ ಒದಗಿಸುವಿಕೆ ಸೇರಿದಂತೆ ಇನ್ನಿತರ ಸೌಲಭ್ಯ ನೀಡುವುದಕ್ಕೆ ಕ್ರಮ ವಹಿಸಲಾಗುವುದು ಎಂದರು.

ಅಂಗವಿಕಲರು ಬಳ್ಳಾರಿ ನಗರದಲ್ಲಿ ಅತಿ ಹೆಚ್ಚು ಬಳಸುವ 10 ಸ್ಥಳಗಳ ಪಟ್ಟಿ ಮಾಡಿ ಮತ್ತು ತುರ್ತಾಗಿ ಅಲ್ಲಿ ಸೌಲಭ್ಯ ಕಲ್ಪಿಸುವುದಕ್ಕೆ ಮುಂದಾಗಬೇಕು ಎಂದು ಆಯುಕ್ತ ಬಸವರಾಜು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಹಾಗೂ ಹಾಸ್ಟೆಲ್ಗಳಿಗೆ ರ್‍ಯಾಂಪ್‌, ಶೌಚಾಲಯ, ವೀಲ್ ಚೇರ್‌ ಸೇರಿದಂತೆ ಅಂಗವಿಕಲ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲು ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಅಂಗವಿಕಲರ ಕುಂದುಕೊರತೆ ಆಲಿಸುವ ನಿಟ್ಟಿನಲ್ಲಿ ಪ್ರತಿ ಇಲಾಖೆಯಲ್ಲಿ ಒಬ್ಬ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದರು. ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್, ಜಿಪಂ ಸಿಇಒ ಕೆ.ನಿತೀಶ್‌, ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಉಪ ಆಯುಕ್ತ ಪದ್ಮನಾಭ, ಸಲಹೆಗಾರ ಹಂಪಣ್ಣ, ಉಪ ವಿಭಾಗಾಧಿಕಾರಿಗಳಾದ ಲೋಕೇಶ, ರಮೇಶ ಕೋನರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.