ಹಾಲಿನ ಉತ್ಪನ್ನ ಎಫ್‌ಟಿಎ ವ್ಯಾಪ್ತಿಗೆ ಬೇಡ
ರಾಬಕೋ ಆಡಳಿತ ಮಂಡಳಿ ಅಧಿಕಾರಿಗಳಿಂದ ಬೃಹತ್ ಪ್ರತಿಭಟನೆ
Team Udayavani, Oct 12, 2019, 4:50 PM IST
ಬಳ್ಳಾರಿ: ಅಂತಾರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ವ್ಯಾಪ್ತಿಯಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ ಇಲ್ಲಿನ ರಾಬಕೋ ಆಡಳಿತ ಮಂಡಳಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹಾಲು ಉತ್ಪಾದಕರ ಸಂಘದ ನೂರಾರು ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಮುಕ್ತ ವ್ಯಾಪಾರ ಒಪ್ಪಂದವನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು. ಎಫ್‌ಟಿಎಯಿಂದ ರೈತರ ಹಿತ ಕಾಪಾಡಬೇಕು. ಎಫ್‌ಟಿಎ ನೀತಿ ಹಾಲು ಉತ್ಪಾದಕರಿಗೆ ಮಾರಕವಾಗಿದ್ದು, ಕೂಡಲೇ
ಸರ್ಕಾರ ಕೈಬಿಟ್ಟು ರೈತರ ಆದಾಯ ಹೆಚ್ಚಿಸಬೇಕು. ವಿದೇಶಿ ಹಾಲಿನ ದಾಳಿಯಿಂದ ಸ್ವದೇಶಿ ಹಾಲಿನ ಹಿತವನ್ನು ಸರ್ಕಾರ ಕಾಪಾಡಬೇಕು. ಅಗ್ಗದ ಹಾಲಿನ ಉತ್ಪನ್ನಗಳಿಂದ ಸ್ವದೇಶಿ ಹೈನು ಉದ್ಯಮಕ್ಕೆ ಆಪತ್ತು ಬರಲಿದೆ. ಕೂಡಲೇ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಪ್ರತಿಭಟನಾನಿರತರು
ಸರ್ಕಾರವನ್ನು ಒತ್ತಾಯಿಸಿದರು.
ಜಿಲ್ಲೆಯಲ್ಲಿ 376 ಹಾಲು ಉತ್ಪಾದಕರ ಸಂಘಗಳಿದ್ದು, ಸುಮಾರು 30 ಸಾವಿರ ರೈತ ಕುಟುಂಬಗಳು ಇದನ್ನೇ ಆಶ್ರಯಿಸಿದ್ದಾರೆ. ಇದರಿಂದ ಅವರೆಲ್ಲರ ಬದುಕು ಮೂರಾಬಟ್ಟೆಯಾಗಲಿದೆ. ಜಿಲ್ಲೆಯಲ್ಲಿ ಈಗಾಗಲೇ ಬರಗಾಲ ಆವರಿಸಿದ್ದು, ಈ ವ್ಯಾಪ್ತಿಯ ಜಿಲ್ಲೆಯಲ್ಲಿ ಹೈನುಗಾರಿಕೆಯೇ ಪ್ರಮುಖ ಮೂಲ ಕಸಬಾಗಿದೆ. ನಿತ್ಯ 30 ಸಾವಿರ ರೈತರು ಹೈನುಗಾರಿಕೆ ಮೇಲೆ ಅವಲಂಬಿತರಾಗಿದ್ದು, ನಿತ್ಯ 1.2ಲಕ್ಷ ಲೀಟರ್ ಹಾಲನ್ನು ಉತ್ಪಾದಿಸಿ ರಾಬಕೋ ಹಾಲು ಒಕ್ಕೂಟಕ್ಕೆ ಸರಬರಾಜು ಮಾಡಲಾಗುತ್ತಿದೆ. ಪ್ರತಿದಿನ ಅಂದಾಜು 40 ಲಕ್ಷ ರೂ.ವಹಿವಾಟು ನಡೆಯುತ್ತಿದ್ದು, ವಾರ್ಷಿಕವಾಗಿ ಸುಮಾರು
135 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಯುತ್ತಿದೆ. ಇದರಿಂದ ರೈತರು ಸಹ ನೆಮ್ಮದಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಜಾರಿಗೊಳಿಸಿದರೆ ರೈತರು ಬೀದಿಗೆ ಬರಲಿದ್ದಾರೆ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು. ನಿರ್ಲಕ್ಷಿಸಿದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.
ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಬುಕ್ಕಾ, ಮಾರುಕಟ್ಟೆ ವ್ಯವಸ್ಥಾಪಕ ಡಾ| ಸುನೀಲ್, ಮಾರುಕಟ್ಟೆ ಅಧಿಕಾರಿ ವೈ.ಚಂದ್ರಶೇಖರ ರೆಡ್ಡಿ, ರವಿ ಕುಮಾರ್, ಉದಯಕುಮಾರ್, ದಾಸನಗೌಡ, ರಾಬಕೋ ಒಕ್ಕೂಟದ ನಿರ್ದೇಶಕಿ ಜಿಂಕಲ್ ನಾಗಮಣಿ, ರಾಬಕೊ ಒಕ್ಕೂಟದ ನಿರ್ದೇಶಕ ಮರುಳಸಿದ್ದನಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಗೋಣಿಬಸಪ್ಪ ಸೇರಿದಂತೆ ನೂರಾರು ಪದಾಧಿಕಾರಿಗಳು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.