ಶಾಲೆಯತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು
ಮೊದಲ ದಿನವೇ ಪುಸ್ತಕ-ಸಮವಸ್ತ್ರ ಪೂರೈಕೆ•ಸಿಹಿ ವಿತರಿಸಿ ಶಾಲೆಗೆ ಸ್ವಾಗತಿಸಿದ ಶಿಕ್ಷಕರು
Team Udayavani, May 30, 2019, 1:23 PM IST
ಬಳ್ಳಾರಿ: ಡಿಎಆರ್ ಮೈದಾನದಲ್ಲಿ ಸರ್ಕಾರಿ ಶಾಲೆಯತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು.
ಬಳ್ಳಾರಿ: ಸತತ ಎರಡು ತಿಂಗಳ ಕಾಲ ರಜೆಯ ಮಜಾ ಅನುಭವಿಸಿದ ವಿದ್ಯಾರ್ಥಿಗಳು ಮೇ 29 ರಿಂದ ಚಾಲನೆ ಪಡೆದುಕೊಂಡ ಶಾಲೆಗಳತ್ತ ಖುಷಿಯಿಂದಲೇ ಬುಧವಾರ ಹೆಜ್ಜೆ ಹಾಕಿದರು.
ವಿದ್ಯಾರ್ಥಿಗಳ ಸ್ವಾಗತಕ್ಕೆ ಶಾಲೆಗಳನ್ನು ತಳೀರು ತೋರಣಗಳಿಂದ ಸಿಂಗರಿಸಲಾಗಿದ್ದು, ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕರು ಆತ್ಮೀಯವಾಗಿ ಬರಮಾಡಿಕೊಂಡರು. ಕೆಲ ವಿದ್ಯಾರ್ಥಿಗಳು ಮುಖ್ಯಶಿಕ್ಷಕರ ಪಾದಗಳಿಗೆ ನಮಸ್ಕರಿಸಿ ತರಗತಿ ಕೊಠಡಿಯೊಳಗೆ ಕಾಲಿಟ್ಟರು. ಇದೇ ವೇಳೆ ಮೊದಲ ದಿನವಾಗಿದ್ದರಿಂದ ಇಸ್ಕಾನ್ ಸಂಸ್ಥೆಯಿಂದ ತಯಾರಿಸಲಾಗಿದ್ದ ಸಿಹಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಅಲ್ಲದೇ, ಮೊದಲ ದಿನವೇ ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ, 1 ರಿಂದ 10ನೇ ತರಗತಿವರೆಗಿನ ಪಠ್ಯಪುಸ್ತಕ ವಿತರಿಸಲಾಯಿತು. ಬಳಿಕ ಶಾಲಾ ವ್ಯಾಪ್ತಿ ಪ್ರದೇಶದಲ್ಲಿ ವಿದ್ಯಾರ್ಥಿಗಳಿಂದ ಮೆರವಣಿಗೆ ತೆರಳಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ದಾಖಲಾತಿ ಮಾಡಿಸುವಂತೆ ಪೋಷಕರಲ್ಲಿ ಜಾಗೃತಿ ಮೂಡಿಸಿದರು. ಆಂಗ್ಲ ಮಾಧ್ಯಮ ಆರಂಭವಾಗುತ್ತಿರುವ ಶಿಕ್ಷಕರು, ಬ್ಯಾನರ್‌ಗಳನ್ನು ಹಿಡಿದು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದರ ಬಗ್ಗೆ ಜಾಗೃತಿ ಮೂಡಿಸಿದರು.
ಜಿಲ್ಲೆಯಲ್ಲಿ 1400ಕ್ಕೂ ಹೆಚ್ಚು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, 197 ಸರ್ಕಾರಿ ಪ್ರೌಢಶಾಲೆ, 230 ಅನುದಾನಿತ, 87 ಅನುದಾನ ರಹಿತ, ಸಮಾಜ ಕಲ್ಯಾಣ ವ್ಯಾಪ್ತಿಯ ಶಾಲೆಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 2,750 ಶಾಲೆಗಳು ಇವೆ. ಈ ಎಲ್ಲ ಶಾಲೆಗಳು ಇಂದಿನಿಂದ ಚಾಲನೆ ಪಡೆದುಕೊಂಡಿದ್ದು, ಕೇಂದ್ರೀಯ ವಿದ್ಯಾಲಯ ಸೇರಿ ಜಿಲ್ಲೆಯಾದ್ಯಂತ ಒಟ್ಟು 4.81 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಸರ್ಕಾರಿ ಹಿರಿಯ, ಕಿರಿಯ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪೂರೈಸುವ ಪಠ್ಯಪುಸ್ತಕಗಳನ್ನು ಎಲ್ಲ ಶಾಲೆಗಳಿಗೂ ಈಗಾಗಲೇ ಪೂರೈಕೆ ಮಾಡಲಾಗಿದೆ. ಕೆಲ ಶಾಲೆಗಳಲ್ಲಿ ಮೊದಲ ದಿನವೇ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಶಿಕ್ಷಕರು ವಿತರಿಸಿದ್ದಾರೆ. ಉರ್ದು ಸೇರಿ ಇತರೆ ಭಾಷಾ ಪಠ್ಯ ಪುಸ್ತಕಗಳು ಇನ್ನು ಬಂದಿಲ್ಲ. ಈ ವಾರದೊಳಗೆ ಬರುವ ಸಾಧ್ಯತೆಯಿದ್ದು, ಬಂದಾಕ್ಷಣ ಮಕ್ಕಳ ಕೈ ಸೇರಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.