ಶಾದಿಭಾಗ್ಯಕ್ಕೆ ಗ್ರಹಣ!

ಸರ್ಕಾರದಿಂದ ಬಿಡುಗಡೆಯಾಗದ ಅನುದಾನ , ರಾಜ್ಯಾದ್ಯಂತ 33 ಸಾವಿರ ಅರ್ಜಿ ಬಾಕಿ •ಫಲಾನುಭವಿಗಳಲ್ಲಿ ಆತಂಕ

Team Udayavani, Jul 14, 2019, 11:05 AM IST

Udayavani Kannada Newspaper

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಯಾದಾಗಿನಿಂದ ಅಧಿಕಾರ ಉಳಿಸಿಕೊಳ್ಳುವ ಯತ್ನದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂಬುದಕ್ಕೆ ಬಿದಾಯಿ (ಶಾದಿಭಾಗ್ಯ) ಯೋಜನೆಗೆ ಪ್ರಸಕ್ತ ಸಾಲಿನ ಅನುದಾನ ಬಿಡುಗಡೆಗೊಳ್ಳದಿರುವುದು ಇದಕ್ಕೆ ಸಾಕ್ಷಿ ಎಂಬಂತಿದೆ.

ಅನುದಾನ ಇಲ್ಲದ ಕಾರಣಕ್ಕೆ ಶಾದಿಭಾಗ್ಯ ಯೋಜನೆಯ ಸುಮಾರು 33 ಸಾವಿರ ಅರ್ಜಿ ಬಾಕಿ ಉಳಿದಿದ್ದು, ಸಾಲ ಮಾಡಿರುವ ಫಲಾನುಭವಿಗಳು ಪ್ರೋತ್ಸಾಹಧನಕ್ಕಾಗಿ ಎದುರು ನೋಡುವಂತಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯನವರು 2013ರಲ್ಲಿ ಅಧಿಕಾರಕ್ಕೆ ಬಂದಾಗ ಎಲ್ಲ ಸಮುದಾಯಗಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಂತೆ ಅಲ್ಪಸಂಖ್ಯಾತರಿಗೂ ಬಿದಾಯಿ (ಶಾದಿಭಾಗ್ಯ) ಯೋಜನೆಯನ್ನು ಜಾರಿಗೆ ತಂದಿದ್ದರು. ಇದರಿಂದ ಮುಸ್ಲಿಂ, ಕ್ರಿಶ್ಚಿಯನ್‌, ಜೈನ, ಸಿಖ್‌ ಸೇರಿ ಹಲವಾರು ಸಮುದಾಯಗಳಲ್ಲಿನ ಬಡ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲವಾಗಿತ್ತು. ಆದರೆ ಯೋಜನೆಗೆ ಸರ್ಕಾರದಿಂದ ಸಮರ್ಪಕವಾಗಿ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 33 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿದಿವೆ. ಶಾದಿಭಾಗ್ಯ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಕುಟುಂಬದ ವಿಧವೆಯರು, ವಿಚ್ಛೇದಿತ ಮಹಿಳೆಯರು, ಹೆಣ್ಣು ಮಕ್ಕಳ ಮದುವೆಗಾಗಿ ಸರ್ಕಾರದಿಂದ 50 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಕಳೆದ 2018 ಫೆಬ್ರವರಿಯಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಮಂಡಿಸಿದ ಕೊನೆಯ ಬಜೆಟ್‌ನಲ್ಲಿ 125 ಕೋಟಿ ರೂಗಳನ್ನು ಮೀಸಲಿಡಲಾಗಿದ್ದ ಈ ಯೋಜನೆಗೆ, ವಿಧಾನಸಭೆ ಚುನಾವಣೆ ನಡೆದ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಕೇವಲ 55 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆಗೊಳಿಸಲಾಗಿದೆ.

ಇಷ್ಟು ಕಡಿಮೆ ಅನುದಾನವನ್ನು ರಾಜ್ಯಾದ್ಯಂತ ಬಾಕಿ ಇರುವ 33 ಸಾವಿರ ಫಲಾನುಭವಿಗಳಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ವಾಸ್ತವದಲ್ಲಿ ಯೋಜನೆಗೆ ಸುಮಾರು 150 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ದ ಅಗತ್ಯವಿದೆ ಎಂದು ಇಲಾಖೆ ಮೂಲಗಳು ಹೇಳುತ್ತಿವೆ.

ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 2013-14ನೇ ಸಾಲಿನಿಂದ 2019ರವರೆಗೆ ಒಟ್ಟು 6216 ಅರ್ಜಿಗಳನ್ನು ಸಲ್ಲಿಕೆಯಾಗಿವೆ. ಇದರಲ್ಲಿ ಈವರೆಗೆ ಕೇವಲ 2436 ಅರ್ಜಿಗಳು ಮಾತ್ರ ವಿಲೇವಾರಿಯಾಗಿದ್ದು, ಅನುದಾನ ಬಿಡುಗಡೆಗೊಳಿಸಲಾಗಿದೆ. ಬಾಕಿ 3780 ಅರ್ಜಿಗಳಿಗೆ ಅನುದಾನವೇ ಬಿಡುಗಡೆಯಾಗಿಲ್ಲ. ಇನ್ನುಳಿದಂತೆ ರಾಯಚೂರು ಜಿಲ್ಲೆ 1035, ಧಾರವಾಡ 2440, ಹಾವೇರಿ 2342, ಬೀದರ್‌ 2230, ಬೆಳಗಾವಿ 1508, ದಕ್ಷಿಣಕನ್ನಡ 1626, ದಾವಣಗೆರೆ 1387, ವಿಜಯಪುರ 1017, ಮೈಸೂರು 1005, ಶಿವಮೊಗ್ಗ ಜಿಲ್ಲೆಯಲ್ಲಿ 933 ಅರ್ಜಿಗಳು ಬಾಕಿ ಉಳಿದಿದ್ದು, ರಾಜ್ಯಾದ್ಯಂತ 30 ಜಿಲ್ಲೆಗಳ 33 ಸಾವಿರಕ್ಕೂ ಹೆಚ್ಚು ಅರ್ಜಿ ವಿಲೇವಾರಿ ಮಾಡಬೇಕಿದ್ದು, ಅರ್ಜಿ ಸಲ್ಲಿಸಿದ ಫಲಾನುಭವಿಗಳು ಪ್ರೋತ್ಸಾಹಧನಕ್ಕಾಗಿ ಇಲಾಖೆಗೆ ಪ್ರತಿದಿನ ಆಲೆದಾಡುವಂತಾಗಿದೆ.

ಟಾಪ್ ನ್ಯೂಸ್

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.