ಯೋಗದಿಂದ ಆರೋಗ್ಯ ವೃದ್ಧಿ: ಬೋಗರಾಜ್‌

ಶಾಲಾ ಮಕ್ಕಳಿಗಾಗಿ ಚಿತ್ರಕಲೆ-ಭಾಷಣ ಸ್ಪರ್ಧೆ•ದೈಹಿಕ ಶಿಕ್ಷಕರಿಂದ ತರಬೇತಿ ಶಿಬಿರ

Team Udayavani, Jun 17, 2019, 11:59 AM IST

17-June-14

ಬಳ್ಳಾರಿ: ಕೊಳಗಲ್ಲು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಯೋಗದ ಮಹತ್ವ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ತಾಪಂ ಸದಸ್ಯ ಬೋಗರಾಜ್‌ ಉದ್ಘಾಟಿಸಿದರು.

ಬಳ್ಳಾರಿ: ಪ್ರತಿ ದಿನ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ತಾಪಂ ಸದಸ್ಯ ಯು. ಬೋಗರಾಜ್‌ ಹೇಳಿದರು.

ತಾಲೂಕಿನ ಕೋಳಗಲ್ಲು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಬಳ್ಳಾರಿ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗ್ರಾಮ ಪಂಚಾಯತಿ ಕೋಳಗಲ್ಲು ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಯೋಗದ ಮಹತ್ವ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯೋಗವು ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಕೊಡುಗೆಯಾಗಿದ್ದು, ಭಾರತೀಯರಾದ ನಾವು ಪ್ರತಿ ದಿನ ಯೋಗವನ್ನು ಮಾಡುವುದರಿಂದ ಮಾನಸಿಕ ಒತ್ತಡದಿಂದ ಬರುವ ಅನೇಕ ರೋಗಗಳನ್ನು ನಿಗ್ರಹಿಸಬಹುದು ಎಂದರು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಉಪನಿರ್ದೇಶಕ ಡಾ. ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಜೀವನದಲ್ಲಿ ಯೋಗ ಮತ್ತು ಧ್ಯಾನ ಅಳವಡಿಸಿಕೊಂಡರೆ ಮನಸ್ಸಿನ ಮೇಲೆ ಹಿಡಿತ ಸಾಧಿಸಬಹುದು ಎಂದರು.

ಕಾರ್ಯಕ್ರಮ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಗ್ರಾಪಂ ಅಧ್ಯಕ್ಷ ಸಿದ್ದಮನಹಳ್ಳಿ ಹುಲಗೆಪ್ಪ ಚಾಲನೆ ನೀಡಿದರು. ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ಯೋಗದ ಅಭ್ಯಾಸ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಕೆ. ಗಾದಿಲಿಂಗಪ್ಪ, ದೈಹಿಕ ಶಿಕ್ಷಕ ವರದೆಂದ್ರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೇಶಾವಲಿ, ಸದಸ್ಯ ಈರಣ್ಣ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು. ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಕ್ಷೇತ್ರ ಪ್ರಚಾರ ಸಹಾಯಕ ಎನ್‌. ರಾಮಕೃಷ್ಣ ಸ್ವಾಗತಿದರು.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

police crime

ಕೊಳತ್ತಮಜಲಿನಲ್ಲಿ ಹೊಡೆದಾಟ; ಎರಡು ಪ್ರತ್ಯೇಕ ಪ್ರಕರಣ ದಾಖಲು

police

Bantwal: ಹಾಡಹಗಲೇ ಮನೆಯಿಂದ ನಗದು ಕಳವು

1-mm

State Olympics ಮಂಗಳೂರು, ಉಡುಪಿಯಲ್ಲಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

1-k-u

Karavali Utsav: ಶ್ವಾನ ಪ್ರದರ್ಶನ, ಚಲನಚಿತ್ರೋತ್ಸವ, ಯುವಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.