ಮೂಲವಿನ್ಯಾಸದಂತೆ ಕಾಲುವೆ ನಿರ್ಮಿಸದಿದ್ದರೆ ಹೋರಾಟ
Team Udayavani, Jun 24, 2019, 4:21 PM IST
ಬಳ್ಳಾರಿ: ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಆರ್.ಮಾಧವರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಳ್ಳಾರಿ: ತುಂಗಭದ್ರಾ ಬಲದಂಡೆ ಕೆಳಮಟ್ಟದ (ಎಲ್ಎಲ್ಸಿ) ಕಾಲುವೆಯ ಆಧುನೀಕರಣವನ್ನು ಮೂಲ ವಿನ್ಯಾಸದಂತೆ ಮಾಡದಿದ್ದರೆ ಕಾನೂನಾತ್ಮಕವಾಗಿ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ನಂಜುಂಡ ಸ್ವಾಮಿ ಬಣ)ಯ ರಾಜ್ಯ ಕಾರ್ಯಾಧ್ಯಕ್ಷ ಆರ್.ಮಾಧವರೆಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಬಲದಂಡೆಯ ಎಲ್ಎಲ್ಸಿ ಕಾಲುವೆ ಈ ಮೊದಲು 15 ಮೀಟರ್ ಅಗಲ, 8.5 ಮೀಟರ್ ಎತ್ತರದಲ್ಲಿ ವಿನ್ಯಾಸಗೊಳಿಸಿ ನಿರ್ಮಿಸಲಾಗಿತ್ತು. ಆದರೆ, ಈ ಕಾಲುವೆಯನ್ನು ಆಧುನೀಕರಣದ ಹೆಸರಿನಲ್ಲಿ ಹಳೆಯ ವಿನ್ಯಾಸವನ್ನೇ ಬದಲಿಸಲಾಗುತ್ತಿದೆ. 15 ಮೀಟರ್ ಇದ್ದ ಕಾಲುವೆಯನ್ನು 21 ಮೀಟರ್‌ಗೆ ಅಗಲವಾಗಿ ನಿರ್ಮಿಸಿ, ನೆರೆಯ ಆಂಧ್ರಪ್ರದೇಶಕ್ಕೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಇದೀಗ ಹೊಸ ವಿನ್ಯಾಸದಂತೆ ನಿರ್ಮಿಸಲಾಗುತ್ತಿರುವ ಎಲ್ಎಲ್ಸಿ ಕಾಲುವೆಯಲ್ಲಿ ನೀರು ರಾಜ್ಯದ ರೈತರಿಗೆ ಸರಿಯಾಗಿ ಸಿಗದೆ, ಸರಳವಾಗಿ ಆಂಧ್ರಪ್ರದೇಶಕ್ಕೆ ಹರಿದುಹೋಗಲಿದೆ. ಇದನ್ನು ವಿರೋಧಿಸಿ ಸಿರುಗುಪ್ಪ ತಾಲೂಕು ಸಿರಿಗೇರಿ ಬಳಿ ಕಳೆದ 17 ದಿನಗಳು ರೈತರು ಪ್ರತಿಭಟನೆ ನಡೆಸಿದ ಬಳಿಕ ಸ್ಥಳಕ್ಕೆ ಆಗಮಿಸಿದ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮುಖ್ಯ ಇಂಜಿನಿಯರ್ ಮಂಜಪ್ಪ, ಸ್ಥಳೀಯ ಶಾಸಕ ಎಂ.ಎಸ್.ಸೋಮಲಿಂಗಪ್ಪ ದಾಖಲೆಗಳನ್ನು ನೀಡಿದರು. ಮೂಲ ವಿನ್ಯಾಸದಂತೆ ಕಾಲುವೆಯನ್ನು ಅಗಲೀಕರಣಗೊಳಿಸುವುದಾಗಿ ರೈತರ ಮನವೊಲಿಸಲು ಯತ್ನಿಸಿದರು. ಆದರೆ, ಸೂಕ್ತ ದಾಖಲೆಗಳನ್ನು ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು. ದಾಖಲೆಗಳಲ್ಲಿ ಉಲ್ಲೇಖೀಸಿದ ಮೂಲ ವಿನ್ಯಾಸದಂತೆಯೇ ಕಾಲುವೆಯನ್ನು ನಿರ್ಮಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿ ಮಾಧವರೆಡ್ಡಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆ ಮುಖಂಡರಾದ ಲೇಪಾಕ್ಷಿ, ಹುಲುಗಯ್ಯ, ವಿಜಯಗೌಡ, ಬಸವರಾಜ ಸ್ವಾಮಿ, ಶೇಖರಪ್ಪ, ಮಂಜುನಾಥ ಸ್ವಾಮಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.