ಹೊಸ ಸರಕಾರದಲ್ಲಿ ಯಾರಿಗೆ ಸಿಗಲಿದೆ ಮಂತ್ರಿಗಿರಿ

ಸಚಿವ ಸ್ಥಾನದ ರೇಸ್‌ನಲ್ಲಿ ಗುರಿ ತಲುಪುವವರ್ಯಾರು •2008ರಲ್ಲಿ ಸಿಕ್ಕಿತ್ತು 3 ಸಚಿವ ಸ್ಥಾನ •ಈ ಬಾರಿ ಯಾರಿಗೆ ಎಂಬ ಚರ್ಚೆ ಜೋರು

Team Udayavani, Jul 25, 2019, 11:17 AM IST

Udayavani Kannada Newspaper

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗುತ್ತಿದ್ದಂತೆ ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ.

ಬಿಜೆಪಿ ಆಡಳಿತಕ್ಕೆ ಬರಲು ಪ್ರಮುಖ ಪಾತ್ರ ವಹಿಸಿರುವ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿಯೂ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈ ಹಿಂದಿನಂತೆ ಮೂರು ಸಚಿವ ಸ್ಥಾನಗಳು ಲಭಿಸಲಿವೆಯೇ? ಯಾರ್ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಮೂಡಿದೆ.

ರಾಜ್ಯ ವಿಧಾನಸಭೆಗೆ 2008ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 110 ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿಗೆ ಬಹುಮತ ಸಾಬೀತುಪಡಿಸಲು ಕೇವಲ ಮೂರು ಶಾಸಕರ ಕೊರತೆಯಿತ್ತು. ಆಗ 6 ಪಕ್ಷೇತರ ಶಾಸಕರ ಬೆಂಬಲವನ್ನು ಬಿಜೆಪಿಗೆ ಕೊಡಿಸುವಲ್ಲಿ ಗಣಿಧಣಿಗಳಾದ ರೆಡ್ಡಿ ಸಹೋದರರು ಯಶಸ್ವಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕರುಣಾಕರ ರೆಡ್ಡಿ, ವಿಧಾನಪರಿಷತ್‌ ಸದಸ್ಯರಾಗಿದ್ದ ಜಿ. ಜನಾರ್ದನರೆಡ್ಡಿ, ಇವರ ಆಪ್ತ ಬಿ. ಶ್ರೀರಾಮುಲು ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಅಲ್ಲದೆ ಬಳ್ಳಾರಿ ನಗರ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿ ಅವರಿಗೆ ಕೆಎಂಎಫ್‌ ರಾಜ್ಯ ಮಹಾಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಇದರಿಂದ ರಾಜ್ಯದಲ್ಲೇ ರೆಡ್ಡಿ ಸಹೋದರರು ಅತ್ಯಂತ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬದಲಾದ ರಾಜಕೀಯ ವಿದ್ಯಮಾನಗಳಿಂದಾಗಿ ರೆಡ್ಡಿ ಸಹೋದರರ ಹವಾ ಒಂದಷ್ಟು ಕಡಿಮೆಯಾಗಿದೆ. ಹೀಗಾಗಿ ಮೈತ್ರಿ ಸರ್ಕಾರ ಪತನದಿಂದಾಗಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಬಿಜೆಪಿ ಸರ್ಕಾರದಲ್ಲಿ ಈ ಹಿಂದಿನಂತೆ ಈ ಬಾರಿಯೂ ನಿರೀಕ್ಷಿತ ಸಚಿವ ಸ್ಥಾನಗಳು ಜಿಲ್ಲೆಗೆ ಲಭಿಸಲಿವೆಯೇ ಎಂಬುದು ಯಕ್ಷಪ್ರಶ್ನೆಯಾಗಿದೆ.

ಗೆದ್ದವರೆಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳು: ಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಸಿರುಗುಪ್ಪ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ಜಿಲ್ಲೆಯ ಪ್ರಭಾವಿ ಮುಖಂಡ ಬಿ. ಶ್ರೀರಾಮುಲು ಅವರು ಪಕ್ಕದ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೂ ಜಿಲ್ಲೆಯ ಮೇಲೆ ಇವರ ಹಿಡಿತ ಸಡಿಲಗೊಂಡಿಲ್ಲ. ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಕೋಟಾ ಅಥವಾ ಜಾತಿ ಲೆಕ್ಕಾಚಾರದಲ್ಲಾದರೂ ಸಚಿವ ಸ್ಥಾನ ಲಭಿಸೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನು ಜಿಲ್ಲೆಯ ಸಿರುಗುಪ್ಪ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಎಂ.ಎಸ್‌.ಸೋಮಲಿಂಗಪ್ಪ, ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದ ಕೂಡ್ಲಿಗಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ ಜಾತಿ ಲೆಕ್ಕಾಚಾರದಲ್ಲಿ ದೊರೆಯುವುದು ಅನುಮಾನ ಎನ್ನಲಾಗುತ್ತಿದೆ. ವಾಲ್ಮೀಕಿ ಸಮುದಾಯದಲ್ಲೇ ಪ್ರಭಾವಿ ಮುಖಂಡರಾದ ರಮೇಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ ಅವರು ಸಚಿವ ಸ್ಥಾನದ ರೇಸ್‌ನಲ್ಲಿರುವುದರಿಂದ ಸೋಮಲಿಂಗಪ್ಪ ಹಾಗೂ ಎನ್‌.ವೈ. ಗೋಪಾಲಕೃಷ್ಣ ಅವರ ಆಸೆ ಈಡೇರುವುದು ಕಷ್ಟ ಎಂಬ ಚರ್ಚೆಗಳು ನಡೆಯುತ್ತಿವೆ.

ಕರುಣಾಕಾರ ರೆಡ್ಡಿಗೆ ಸ್ಥಾನ?: ಈ ಮೊದಲು ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪನಹಳ್ಳಿ ಕ್ಷೇತ್ರ ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿದೆ. ಅಲ್ಲಿನ ಶಾಸಕ ಜಿ. ಕರುಣಾಕರೆಡ್ಡಿ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈ ಮೊದಲು ಬಿಜೆಪಿಯಲ್ಲಿ ರೆಡ್ಡಿ ಸಹೋದರರು ತಮ್ಮದೇ ಆದ ಹಿಡಿತ ಸಾಧಿಸಿದ್ದರು. ಪರಿಣಾಮ ಆಗ ಮೊದಲಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕರುಣಾಕರರೆಡ್ಡಿಯವರು ಕಂದಾಯ ಸಚಿವರಾಗಿದ್ದರು. ಇದೀಗ ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಬರುವುದರಿಂದ ಜಿಲ್ಲೆಯಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಮೇಲಾಗಿ ಪಕ್ಷದಲ್ಲೂ ರೆಡ್ಡಿ ಸಹೋದರರ ಪ್ರಭಾವವೂ ಒಂದಷ್ಟು ಕುಸಿದಿದೆ. 2008ರಲ್ಲಿ ಶಾಸಕರಾಗಿ, ಕೆಎಂಎಫ್‌ ರಾಜ್ಯಾಧ್ಯಕ್ಷರಾಗಿದ್ದ ಶಾಸಕ ಜಿ. ಸೋಮಶೇಖರರೆಡ್ಡಿ ಅವರು 2013ರಲ್ಲಿ ಸೋಲಿನ ಭೀತಿಯಿಂದಾಗಿ ಚುನಾವಣೆಯಿಂದಲೇ ದೂರ ಉಳಿದಿದ್ದರು. ಹೀಗಾಗಿ ಇವರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಸಚಿವ ಸ್ಥಾನಕ್ಕಾಗಿಯೇ ಬಿಜೆಪಿಗೆ ಬಂದ ಆನಂದ್‌ ಸಿಂಗ್‌
ಸತತ ಮೂರನೇ ಬಾರಿಗೆ ಜಯಗಳಿಸಿರುವ ವಿಜಯನಗರ ಕ್ಷೇತ್ರದ ಶಾಸಕ ಬಿ.ಎಸ್‌. ಆನಂದ್‌ಸಿಂಗ್‌ ಅವರು ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತೊರೆದಿದ್ದು, ಮತ್ತೆ ಮಾತೃ ಪಕ್ಷ ಬಿಜೆಪಿಗೆ ಸೇರಲಿದ್ದಾರೆ ಎನ್ನಲಾಗುತ್ತಿದೆ. ಆನಂದ್‌ಸಿಂಗ್‌ ಅವರಿಗೆ ಸಚಿವ ಸ್ಥಾನ ನೀಡಿದರೆ, ರೆಡ್ಡಿ ಸಹೋದರರಿಗೆ ಹೊಸ ಸಂಪುಟದಲ್ಲಿ ಸ್ಥಾನ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.