8ರಂದು ಅಖೀಲ ಭಾರತ ಸಾರ್ವತ್ರಿಕ ಮುಷ್ಕರ
12 ಅಂಶಗಳ ಬೇಡಿಕೆ ಈಡೇರಿಕೆಗೆ ಒತ್ತಾಯ
Team Udayavani, Jan 6, 2020, 3:36 PM IST
ಬಳ್ಳಾರಿ: 12 ಅಂಶಗಳ ಬೇಡಿಕೆ ಈಡೇರಿಕೆ ಆಗ್ರಹಿಸಿ ಕೇಂದ್ರ ಜಂಟಿ ಕಾರ್ಮಿಕ ಸಮಿತಿಯಿಂದ ಜನವರಿ 8ರಂದು ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎ.ಆರ್.ಎಂ. ಇಸ್ಮಾಯಿಲ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಹೊಸ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಬದಲು ಪ್ರಸ್ತುತ ಇರುವ ಉದ್ಯೋಗ ನಾಶವಾಗುತ್ತಿವೆ. ಜಿಡಿಪಿ ಶೇ. 4ಕ್ಕೆ ಕುಸಿದಿದೆ. ಆರ್ಥಿಕ ಹಿಂಜರಿತದಿಂದ ಹಲವಾರು ಕಾರ್ಖಾನೆಗಳು ಮುಚ್ಚಿಹೋಗಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿ ಯಲ್ಲಿ 2ಲಕ್ಷ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ಸುಳ್ಳಾಗಿದೆ. ಈ ಎಲ್ಲ ವಿಷಯಗಳನ್ನು ಖಂಡಿಸಿ ಭಾರತ್ ಬಂದ್‌ಗೆ ಕರೆನೀಡಲಾಗಿದೆ ಎಂದರು.
ಅಂದು ಬಳ್ಳಾರಿಯಲ್ಲೂ ಸಹ ಬಂದ್ ಮಾಡಬೇಕೆಂದು ಈಗಾಗಲೇ ವರ್ತಕರು, ಕಚೇರಿ ಅಧಿ ಕಾರಿ ವರ್ಗ, ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು, ವಾಣಿಜ್ಯೋದ್ಯಮಿ,
ಕೈಗಾರಿಕೋದ್ಯಮಿಗಳಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲೂ ಅನೇಕ ಕಾರ್ಖಾನೆಗಳು ಮುಚ್ಚಿಹೋಗಿವೆ. ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಎನ್‌ಎಂಡಿಸಿ ಹಸ್ತಾಂತರಕ್ಕೆ ಒಳಗೊಳಗೆ ತಯಾರಿ ನಡೆದಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಳ ಆಗಿದ್ದರಿಂದ ಸಾರ್ವಜನಿಕ ಜೀವನ
ದುಬಾರಿಯಾಗಿದೆ ಎಂದು ಅವರು ಹೇಳಿದರು.
ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಮುಂದಾಗಬೇಕೆಂದು
ಆಗ್ರಹಿಸಿ ಈ ಬಂದ್‌ಗೆ ಕರೆನೀಡಲಾಗಿದೆ. ಬಂದ್‌ಗೆ ಬಳ್ಳಾರಿ ಜನ ಸಹ ಬೆಂಬಲಿಸಬೇಕು. ರೈತರೂ ಸಹ ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆ ಪಡೆಯುವಂತೆ ಆಗಬೇಕೆಂಬುದು
ನಮ್ಮ ಉದ್ದೇಶ. ಇದೇ ಕಾರಣಕ್ಕೆ ರೈತ ಸಂಘಟನೆಗಳು ಸಹ ನಮ್ಮ ಹೋರಾಟ ಬೆಂಬಲಿಸಿವೆ ಎಂದು ಅವರು ತಿಳಿಸಿದರು.
ಎನ್‌ಆರ್‌ಸಿ, ಸಿಎಎ ಕಾಯ್ದೆ ವಿರುದ್ಧ ಸಹ ನಮ್ಮ ಹೋರಾಟ ನಡೆಯಲಿದೆ.
ದೇಶದ ಸಾಕಷ್ಟು ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಇಂಥ ಸಂದರ್ಭದಲ್ಲಿ ಕೇಂದ್ರ
ಸರ್ಕಾರಕ್ಕೆ ನಾಗರಿಕ ಕಾಯ್ದೆ ತಿದ್ದುಪಡಿ ಬೇಕಿತ್ತಾ ಎಂದು ಅವರು ಪ್ರಶ್ನಿಸಿದರು. ಸಿಐಟಿಯು ಪ್ರಧಾನ ಕಾರ್ಯದರ್ಶಿ ಜೆ. ಸತ್ಯಬಾಬು, ಎಐಯುಟಿಯುಸಿ ಅಧ್ಯಕ್ಷ ಸೋಮಶೇಖರ ಗೌಡ, ಪ್ರಧಾನ ಕಾರ್ಯದರ್ಶಿ ಎ. ದೇವದಾಸ್, ಐಎನ್ ಟಿಯುಸಿ ಅಧ್ಯಕ್ಷ ಎಂ. ಜಯಕುಮಾರ, ಪ್ರಧಾನ ಕಾರ್ಯದರ್ಶಿ ಕೆ. ತಾಯಪ್ಪ, ಕಟ್ಟೆಬಸಪ್ಪ, ಕೆ. ನಾಗಭೂಷಣ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.