ಆನ್‌ಲೈನ್ ವಂಚನೆಗೆ ಬಲಿಯಾಗದಿರಿ
Team Udayavani, Dec 23, 2019, 3:25 PM IST
ಬಳ್ಳಾರಿ: ತಾಲೂಕಿನ ರೂಪನಗುಡಿ ಮತ್ತು ಚೇಳ್ಳಗುರ್ಕಿ ಗ್ರಾಮಗಳಲ್ಲಿ ಅಪರಾಧ ತಡೆ ಮಾಸಾಚರಣೆಯನ್ನು ಈಚೆಗೆ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನ ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ಮತ್ತು ಸನ್ಮಾರ್ಗ ಗೆಳೆಯರ ಬಳಗ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಾಸಾಚರಣೆಯನ್ನು ಗ್ರಾಮೀಣ ಠಾಣೆ ವೃತ್ತ ನಿರೀಕ್ಷಕ ಎಂ. ಶ್ರೀನಿವಾಸ್ ಉದ್ಘಾಟಿಸಿ ಮಾತನಾಡಿ, ಎಟಿಎಂ ಕಾರ್ಡ್ ವಂಚನೆ, ಓಎಲ್‌ಎಕ್ಸ್, ಕ್ವಿಕರ್ ಆನ್‌ಲೈನ್ ಮೂಲಕ ವಂಚನೆ, ಸಾಲ ಕೊಡುವ ನೆಪದಲ್ಲಿ ವಂಚನೆ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾಡುವ ವಂಚನೆ, ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಮೂಲಕ ವಂಚನೆ, ಸ್ಪೈಪಿಂಗ್ (ಸ್ಮಿಮ್ಮರ್) ಮಷಿನ್‌ಗಳ ಮೂಲಕ ವಂಚನೆ, ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ, ಎಸ್‌ಎಂಎಸ್ ಮೂಲಕ ವಂಚನೆ ಮಾಡುವವರ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಯಾವುದೇ ರೀತಿಯಿಂದ ಅವರ ಜೊತೆ ಒಡನಾಟ ಇಟ್ಟುಕೊಳ್ಳಬಾರದು.
ಅನುಮಾನ ಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ನಮ್ಮೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಪಿಡಿಹಳ್ಳಿ ಪಿ.ಎಸ್.ಐ. ಶರತ್‌ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದರೋಡೆ, ಡಕಾಯಿತಿ, ಕಳ್ಳತನಗಳಕ್ಕಿಂತ ಸೈಬರ್ ಕ್ರೈಂ ಹೆಚ್ಚಾಗುತ್ತಿರುವುದು ವಿಷಾದನೀಯ. ವಿದ್ಯಾರ್ಥಿಗಳು ಫೇಸ್‌ಬುಕ್, ವಾಟ್ಸಾಫ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು, ಕಾನೂನಿಗೆ ತೊಂದರೆಯಾಗುವ ರೀತಿಯಲ್ಲಿ ತಮ್ಮ ವೈಯಕ್ತಿಕ ಭಾವಚಿತ್ರಗಳನ್ನು ಶೇರ್ ಮಾಡಬಾರದು. ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯು ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಎಸ್.ಪಿ.ಕಚೇರಿಯಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಖುದ್ದಾಗಿ ಭೇಟಿ ನೀಡಿಯಾಗಲಿ ಅಥವಾ 9480803014 ನಂಬರ್ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ಇದೇ ವೇಳೆ ಹಾಸ್ಯ ಕಲಾವಿದ ಎ. ಎರ್ರಿಸ್ವಾಮಿ ಅಪರಾಧ ತಡೆ ಕುರಿತು ತಮ್ಮ ಹಾಸ್ಯ ಚಟಾಕಿಗಳ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಬಸರಕೋಡು ಶಾಲೆಯ ಮುಖ್ಯಶಿಕ್ಷಕ ಮೆಹತಾಬ್, ಸನ್ಮಾರ್ಗ ಗೆಳೆಯರ ಬಳಗದ ಕಾರ್ಯದರ್ಶಿ ಕಪ್ಪಗಲ್ಲು ಚಂದ್ರಶೇಖರ ಆಚಾರ್, ರೂಪನಗುಡಿ ಶಾಲೆಯ ಮುಖ್ಯಶಿಕ್ಷಕ ಶಿವಣ್ಣ, ಕಾಲೇಜಿನ ಪ್ರಾಚಾರ್ಯ ನಾಗಭೂಷಣ,
ಚೇಳ್ಳಗುರ್ಕಿ ಶಾಲೆಯ ಮುಖ್ಯಶಿಕ್ಷಕಿ ಶೋಭಾ, ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯಶಿಕ್ಷಕ ಬಸವರಾಜ್ ಕೆ.ಎಂ. ಬಸವರಾಜ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.