ಫೆ.1,2ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಗಡಿಭಾಗದಲ್ಲಿ ನಡೆಯುವ ಅಕ್ಷರ ಜಾತ್ರೆಗೆ ಪ್ರತಿಯೊಬ್ಬರು ಸಹಕಾರ ನೀಡಿ: ಸಿದ್ದರಾಮ ಕಲ್ಮಠ
Team Udayavani, Dec 27, 2019, 12:14 PM IST
ಬಳ್ಳಾರಿ: ಮುಂಬರುವ 2020ರ ಫೆಬ್ರವರಿ 1 ಮತ್ತು 2ರಂದು ಎರಡು ದಿನಗಳ ಕಾಲ ಬಳ್ಳಾರಿ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ತಿಳಿಸಿದ್ದಾರೆ.
ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಭವನದಲ್ಲಿ ನಡೆದ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಬಳ್ಳಾರಿ ನಗರದಲ್ಲಿ ಈ ಬಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸುವ ಸಲುವಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಜಿಲ್ಲೆಯ ಗಡಿಭಾಗದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳು, ವಿವಿಧ ವೃತ್ತಿ ಸಂಘಟನೆಗಳು, ಸಾಂಸ್ಕೃತಿಕ ಸಂಘಟನೆಗಳು, ಕಲಾ ಸಂಘಟನೆಗಳು, ಶಿಕ್ಷಣ ಸಂಸ್ಥೆಗಳು, ಸಾಹಿತಿಗಳು, ಕಲಾವಿದರು ಸಹಕಾರ ನೀಡಬೇಕು ಎಂದು ಕೋರಿದರು.
ಆಂಧ್ರದ ಗಡಿಭಾಗದಲ್ಲಿರುವ ಬಳ್ಳಾರಿ ನಗರದಲ್ಲಿ ಇನ್ನೂ ಕನ್ನಡ ಭಾಷೆಯ ಬಳಕೆ ಸಂಪೂರ್ಣವಾಗಿ ಆಗದಿರುವುದು ವಿಷಾದನೀಯ. ಕನ್ನಡ ಭಾಷೆ, ನಾಡು, ನುಡಿ, ಕವಿ, ಕಲಾವಿದರು, ಸಾಹಿತಿಗಳ ಕುರಿತು ಬಳ್ಳಾರಿ ಜಿಲ್ಲೆಯ ಜನತೆಗೆ ತಿಳಿಸಿಕೊಟ್ಟು ಅವರಲ್ಲಿ ಸಾಹಿತ್ಯದ ಪ್ರಜ್ಞೆ, ಭಾಷೆಯ ಮಹತ್ವ, ಜನಪದ, ಕಲೆ, ಬಳ್ಳಾರಿಯ ಇತಿಹಾಸ, ಔದ್ಯೋಗಿಕ ಬೆಳವಣಿಗೆ, ಜಿಲ್ಲೆ ಎದುರಿಸುತ್ತಿರುವ ಶೈಕ್ಷಣಿಕ, ಕೈಗಾರಿಕೆ, ಪರಿಸರ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು ಎಂದರು.
ಶೀಘ್ರದಲ್ಲಿಯೇ ಸಾಹಿತ್ಯಾಸಕ್ತರ, ಕನ್ನಡ ಅಭಿಮಾನಿಗಳ, ಕನ್ನಡ ಪರ ಸಂಘಟನೆಗಳ ಸಮಾಲೋಚನೆ ಸಭೆಯನ್ನು ಕರೆದು ಅವರ ಸಲಹೆ, ಸೂಚನೆಗಳನ್ನು ಪಡೆದು ಅತ್ಯಂತ ಯಶಸ್ವಿಯಾಗಿ ಸಮ್ಮೇಳನವನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ರಂಗಣ್ಣನವರ್ ಮಾತನಾಡಿ, ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ರಮೇಶ್‌ಗೌಡ ಪಾಟೀಲ್, ಗೌರವ ಕಾರ್ಯದರ್ಶಿ ವೀರೇಶ್ ಕರಡಕಲ್, ಕೋಳೂರು ಚಂದ್ರಶೇಖರಗೌಡ, ಎಸ್. ಎಂ. ನಾಗರಾಜಸ್ವಾಮಿ, ಕರೂರು ವಿರುಪಾಕ್ಷಗೌಡ, ವಿನೋದ ಕರಣಂ, ದಮ್ಮೂರು ಮಲ್ಲಿಕಾರ್ಜುನ, ವೀರೇಂದ್ರ ರಾವಿಹಾಳ್, ಮಂಜುನಾಥ ಕಮ್ಮರಚೇಡು, ಸೋಮಶೇಖರ್, ಶ್ರೀನಿವಾಸ ಯಾದವ್, ಪ್ರಕಾಶ್ ಅಕ್ಕಿ, ಸರೋಜ ಬ್ಯಾತನಾಳ್, ಕಾರ್ತಿಕ್ ಮರಿಸ್ವಾಮಿಮಠ, ರಮಣಪ್ಪ, ಎಚ್. ಕೆ. ಗೌರಿಶಂಕರ್, ಕುಮಾರಸ್ವಾಮಿ, ಡಾ| ಕೆ.ಬಸಪ್ಪ, ಶಿವಾನಂದ ಕತಕನಹಳ್ಳಿ, ಸುರೇಶ್‌ಹೂಗಾರ್, ದಿವಾಕರ ನಾರಾಯಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.