ನಾಡು ನುಡಿ ಅಭಿಮಾನವಿರಲಿ
ಬಳ್ಳಾರಿ ವಲಯದ ಐಜಿಪಿ ಎಂ. ನಂಜುಡಸ್ವಾಮಿ ಕರೆ ಭಾಷೆ ಉಳಿವಿಗೆ ಎಲ್ಲರೂ ಶ್ರಮಿಸಿ
Team Udayavani, Nov 11, 2019, 12:46 PM IST
ಬಳ್ಳಾರಿ: ಕನ್ನಡ, ನಾಡು, ನುಡಿ ಹಾಗೂ ಭಾಷೆ, ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ, ಗೌರವ ಇರಬೇಕು ಎಂದು ಬಳ್ಳಾರಿ ವಲಯದ ಐಜಿಪಿ ಎಂ. ನಂಜುಡಸ್ವಾಮಿ ಹೇಳಿದರು.
ನರಗದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಕನ್ನಡೋತ್ಸವ-ನಾಡು ನುಡಿ ಸಂಸ್ಕೃತಿಯ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಭೆ ಸಮಾರಂಭಗಳಲ್ಲಿ ನೆಪಕ್ಕಾಗಿ ಕನ್ನಡದ ಬಗ್ಗೆ ಮಾತನಾಡುವುದು ಬೇಡ. ಪ್ರತಿಯೊಬ್ಬರಲ್ಲೂ ಕನ್ನಡ, ಭಾಷೆ, ಕನ್ನಡ ಸಂಸ್ಕೃತಿ, ನೆಲ-ಜಲದ ಬಗ್ಗೆ ಅಭಿಮಾನವಿರಬೇಕು. ಎಂದರು. ಕರ್ನಾಟಕಕ್ಕೆ ಕರವನಾಡು ಅಥವಾ ಮಾಳವದೇಶ ಎಂದು ನಾಮಕರಣ ಮಾಡಿದರೆ ಉತ್ತಮ. ಫಾದರ್ ಹೆರಾಸ್ ಅವರು ಹೇಳುವಂತೆ ಕನ್ನಡವೇ ಭಾರತದ ಹಳೆಯ ಭಾಷೆ, ಅಷ್ಟೇ ಅಲ್ಲದೇ ಸಿಂಧೂ ನಾಗರಿಕತೆಯ ಜನರು ಈ ಭಾಷೆಯನ್ನು ಮಾತನಾಡುತ್ತಿದ್ದರು ಎಂದು ಸ್ಮರಿಸಿದರು.
ಕನ್ನಡ ಸಂಸ್ಕೃತಿ, ಭಾಷೆ, ನಾಡು ಉಳಿವಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು, ಸಭೆ ಸಮಾರಂಭಗಳಲ್ಲಿ ಕನ್ನಡದ ಬಗ್ಗೆ ಮಾತನಾಡಿ ಕೈತೊಳೆದುಕೊಂಡರೆ ಸಾಲದು, ಪ್ರತಿಯೊಬ್ಬರಲ್ಲೂ ಅಭಿಮಾನವಿರಬೇಕು ಎಂದರು.
ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮಾತನಾಡಿ, ಪ್ರಸಕ್ತ ವರ್ಷ ಬಾಗಲಕೋಟೆಯಲ್ಲಿ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಬರುವ ದಿನಗಳಲ್ಲಿ ಬಳ್ಳಾರಿಯಲ್ಲೂ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವದು ಎಂದು ಭರವಸೆ ನೀಡಿದರು.
ಸರ್ಕಾರಿ ನೌಕರರು ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ಇಂಥ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ, ಇತರರಿಗೆ ಮಾದರಿಯಾಗಬೇಕು. ಕೇವಲ ಸರ್ಕಾರಿ ಕೆಲಸ ಮಾತ್ರ ನಮ್ಮದು ಎಂದು ಕೈಕಟ್ಟಿಕೂಡಕೂಡದು. ಬಿಡುವಿನ ವೇಳೆ, ರಜೆ ದಿನಗಳಲ್ಲಿ ವಿವಿಧ ಸಂಘ ಸಂಸ್ಥೆಯವರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಬೇಕು ಎಂದರು.
ನೌಕರರು ಯಾವುದೇ ಸಮಸ್ಯೆ, ಅನ್ಯಾಯಕ್ಕೆ ಒಳಗಾದಲ್ಲಿ ಕೂಡಲೇ ರಾಜ್ಯ ಸಮಿತಿಗೆ ಜಿಲ್ಲಾಧ್ಯಕ್ಷರ ಮೂಲಕ ತಿಳಿಸಿದರೇ ಖಂಡಿತ ಸ್ಪಂಸಲಾಗುವುದು. ನೌಕರರು ಸಹ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಭಾವಿಸಿ, ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಬೇಕು. ಸ್ವಲ್ಪ ನಿರ್ಲಕ್ಷ್ಯವಹಿಸಿದರೂ ಸರ್ಕಾರದ ಸೌಲಭ್ಯಗಳು ಅನರ್ಹರ ಪಾಲಾಗಲಿವೆ. ಅದಕ್ಕೆ ಯಾವುದೇ ಕಾರಣಕ್ಕೂ ಅಧಿಕಾರಿಗಳು ಅವಕಾಶ ನೀಡದೆ ಪ್ರತಿಯೊಬ್ಬರೂ ಅರ್ಹರಿಗೆ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ. ಶಿವಾಜಿರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕೆ. ರಾಮಕೃಷ್ಣ, ಜಿಲ್ಲಾ ಗೌರವಾಧ್ಯಕ್ಷ ಡಾ| ಎಂ.ಟಿ. ಮಲ್ಲೇಶಪ್ಪ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿ ಕಾರಿಗಳು, ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.