ಪ್ರತಿ ತಾಲೂಕಿನಲ್ಲಿ 100 ಆಕ್ಸಿಜನ್ ಬೆಡ್ ವ್ಯವಸ್ಥೆ
ಕೋವಿಡ್ 3ನೇ ಅಲೆ ತಡೆ ಪರಿಶೀಲನಾ ಸಭೆಯಲ್ಲಿ ಸಚಿವ ಆನಂದ ಸಿಂಗ್ ಸೂಚನೆ
Team Udayavani, Aug 7, 2021, 5:09 PM IST
ಬಳ್ಳಾರಿ: ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿ ಕಾರಿಗಳಿಗೆ
ಕಟ್ಟುನಿಟ್ಟಿನ ಸೂಚನೆ ನೀಡಿದ ಸಂಪುಟ ದರ್ಜೆ ಸಚಿವ ಆನಂದಸಿಂಗ್ ಅವರು ಜಿಲ್ಲಾಡಳಿತ ವತಿಯಿಂದ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 100 ಆಕ್ಸಿಜನ್ ಸಹಿತ ಬೆಡ್ ವ್ಯವಸ್ಥೆ ಮಾಡಿಕೊಳ್ಳಬೇಕು. ಆಯಾ ತಾಲೂಕು ರೋಗಿಗಳಿಗೆ ಆಯಾ ತಾಲೂಕು ವ್ಯಾಪ್ತಿಯಲ್ಲಿಯೇ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್ ಮೂರನೇ ಅಲೆ ತಡೆಗಟ್ಟುವಿಕೆಗೆ ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ 3ನೇ ಅಲೆ ಸಂಭಾವ್ಯದ ಕುರಿತು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಒಂದು ವೇಳೆ ಮೂರನೇ ಅಲೆ ಎದುರಾದಲ್ಲಿ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಪ್ರತಿ ತಾಲೂಕು ಆಸ್ಪತ್ರೆಗಳಿಗೆ 100 ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. 15 ದಿನದಲ್ಲಿ ಇದು ಕಾರ್ಯರೂಪಕ್ಕೆ ಬರುವಂತೆ ನೋಡಿಕೊಳ್ಳಬೇಕು ಎಂದರು.
36 ಕೋವಿಡ್ ಆಸ್ಪತ್ರೆಗಳು: ಜಿಲ್ಲೆಯಲ್ಲಿ ಡೆಡಿಕೇಟೆಡ್ ಕೋವಿಡ್ ಹಾಸ್ಪಿಟಲ್ (ಡಿಸಿಹೆಚ್) ಹಾಗೂ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್ (ಡಿಸಿಹೆಚ್‌ಸಿ) ಒಳಗೊಂಡಂತೆ ಒಟ್ಟು 36 ಕೋವಿಡ್ ಆಸ್ಪತ್ರೆಗಳಿದ್ದು, ಅವುಗಳಲ್ಲಿ 478 ಜನರಲ್ ಬೆಡ್, 2109 ಆಕ್ಸಿಜನ್ ಬೆಡ್, 117 ಐಸಿಯು ಬೆಡ್, 154 ಐಸಿಯು ಮತ್ತು ವೆಂಟಿಲೇಟರ್ ಬೆಡ್‌ಗಳನ್ನು ಒಳಗೊಂಡಂತೆ ಒಟ್ಟು 2858 ಬೆಡ್‌ಗಳು ಖಾಲಿಯಿವೆ. 40 ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಒಟ್ಟು 3170 ಬೆಡ್‌ಗಳು ಲಭ್ಯವಿವೆ ಎಂದು ಜಿಲ್ಲಾಕಾರಿ ಪವನಕುಮಾರ್ ಮಾಲಪಾಟಿ ಅವರು ಸಭೆಯಲ್ಲಿ ಸಚಿವರಿಗೆ ವಿವರಿಸಿದರು.
ಇದನ್ನೂ ಓದಿ:ಸಂತ್ರಸ್ತರಿಗೆ 15 ದಿನಗಳಲ್ಲಿ ಹಕ್ಕುಪತ್ರ ವಿತರಿಸಲು ಅಧಿಕಾರಿಗಳಿಗೆ ಸಚಿವ ಕಾರಜೋಳ ಸೂಚನೆ
ನವೆಂಬರ್ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 13 ಲಕ್ಷ ಜನರು ಕೋವಿಡ್ ಮೊದಲ ಡೋಸ್ ಲಸಿಕೆ ಪಡೆಯಲಿದ್ದಾರೆ, ಇದರಲ್ಲಿ 6 ಲಕ್ಷ ಜನ
ಎರಡನೇ ಡೋಸ್ ಲಸಿಕೆ ಪಡೆಯಲಿದ್ದಾರೆ ಎಂದು ಅವರು ವಿವರಿಸಿದರು.
ಒಂದು ನಿಮಿಷಕ್ಕೆ 3500 ಲೀಟರ್ ಆಕ್ಸಿಜನ್ ಉತ್ಪಾದನೆ: ವಿಮ್ಸ್‌ನಲ್ಲಿ ಒಂದು ನಿಮಿಷಕ್ಕೆ 1 ಸಾವಿರ ಲೀಟರ್ ಉತ್ಪಾದನೆಯ
ಆಕ್ಸಿಜನ್ ಫ್ಲಾಂಟ್, ಜಿಲ್ಲಾಸ್ಪತ್ರೆಯಲ್ಲಿ 500 ಲೀಟರ್ ಆಕ್ಸಿಜನ್ ಉತ್ಪಾದನೆ, ನ್ಯೂ ಡೆಂಟಲ್ ಕಾಲೇಜುನಲ್ಲಿ 160 ಲೀಟರ್ ಆಕ್ಸಿಜನ್ ಉತ್ಪಾದನೆ, ಹಡಗಲಿಯಲ್ಲಿ 500 ಲೀಟರ್ ಉತ್ಪಾದನೆಯ ಆಕ್ಸಿಜನ್ ಫ್ಲಾಂಟ್, ಜಿಂದಾಲ್ ವತಿಯಿಂದ ಹಗರಿಬೊಮ್ಮಹಳ್ಳಿ, ಸಿರುಗುಪ್ಪದಲ್ಲಿ ತಲಾ 500 ಲೀಟರ್ ಉತ್ಪಾದನೆಯ ಆಕ್ಸಿಜನ್ ಫ್ಲಾಂಟ್ ಒಳಗೊಂಡಂತೆ ಜಿಲ್ಲೆಯಲ್ಲಿ ಒಂದು ನಿಮಿಷಕ್ಕೆ 3500 ಲೀಟರ್ ಆಕ್ಸಿಜನ್ ಉತ್ಪಾದನೆ ಕ್ರಮಕೈಗೊಳ್ಳಲಾಗಿದೆ.
ಬಾಲ ಚೈತನ್ಯಕ್ಕೆ ಶಾಸಕರ ಮೆಚ್ಚುಗೆ: ಜಿಪಂ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ರೂಪಿಸಿದ ಬಾಲಚೈತನ್ಯ ಯೋಜನೆಗೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಸಂಡೂರು ಶಾಸಕ ತುಕಾರಾಂ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಯೋಜನೆಯನ್ನು ಹೀಗೆ ಮುಂದುವರೆಸುವಂತೆ ಸಲಹೆ ನೀಡಿದರು. ಸಂಡೂರು ಶಾಸಕ ಇ. ತುಕಾರಾಂ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಸಿರುಗುಪ್ಪ ಶಾಸಕ ಸೋಮಲಿಂಗಪ್ಪ ಅವರು ಮಾತನಾಡಿದರು.
ಕೋವಿಡ್ ಹಾಗೂ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೊಟ್, ಅಪರ ಜಿಲ್ಲಾ ಧಿಕಾರಿ ಪಿ.ಎಸ್. ಮಂಜುನಾಥ, ಸಹಾಯಕ ಆಯುಕ್ತ ಆಕಾಶ್ ಶಂಕರ್, ಡಿಹೆಚ್‌ಒ ಡಾ| ಹೆಚ್.ಎಲ್. ಜನಾರ್ಧನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಬಸರೆಡ್ಡಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.