134.72 ಕೋಟಿ ರೂ. ಬಜೆಟ್‌ಗೆ ಬುಡಾ ಅಸ್ತು
Team Udayavani, Jun 21, 2020, 8:38 AM IST
ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ 2020-21ನೇ ಸಾಲಿನ 134.72 ಕೋಟಿ ರೂಪಾಯಿ ಮೊತ್ತದ ಬಜೆಟ್ ಅನ್ನು ಅಧ್ಯಕ್ಷ ದಮ್ಮೂರು ಶೇಖರ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಮಂಡಿಸಲಾಯಿತು.
2020-21 ಸಾಲಿನ 134.72ಕೋಟಿ ರೂಪಾಯಿ ಮೊತ್ತದ ಬಜೆಟ್ ಅನ್ನು ಮಂಡನೆ ಮಾಡಲಾಯಿತು. ಈ ವರ್ಷದ ಉಳಿಕೆ ಮೊತ್ತ 9.35 ಕೋಟಿ ರೂಪಾಯಿಗಳು. ಗೋನಾಳ್ ಗ್ರಾಮದ ಹತ್ತಿರ 101.8 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ಧಿಪಡಿಸುತ್ತಿರುವ ವಸತಿ ಯೋಜನೆಗೆ 65 ಕೋಟಿ ರೂಪಾಯಿ ಮೀಸಲಿಡಲಾಗಿದೆ. ನಗರದಲ್ಲಿ ಕೊಳಚೆ ಪ್ರದೇಶಗಳ ನಿರ್ಮೂಲನೆಗೆ 0.77 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕೆರೆ ಅಭಿವೃದ್ಧಿಗೆ 6.28 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಇನ್ನುಳಿದ 62.67 ಕೋಟಿ ರೂಪಾಯಿ ಮೊತ್ತದ ವಿವಿಧ ಪ್ರಮುಖ ಯೋಜನೆಗಳು ಅಂದರೆ ಮಹಾ ಯೋಜನೆಯಲ್ಲಿ ಉದ್ಯಾನವನ/ ಬಯಲು ಪ್ರದೇಶಗಳನ್ನು ಭೂ ಸ್ವಾಧೀನ ಪಡಿಸಿಕೊಳ್ಳುವುದು.ವಿವಿಧ ಬಡಾವಣೆಗಳಲ್ಲಿ ಜಿಮ್ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವುದು ಹಾಗೂ ಇನ್ನಿತರ ಪ್ರಮುಖ ಯೋಜನೆಗಳಿಗೆ ಬಜೆಟಿನಲ್ಲಿ ಅನುಮೋದನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಬಳ್ಳಾರಿ ನಗರದ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಹಾಗೂ ಬುಡಾ ಆಯುಕ್ತರಾದ ಈರಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ರವಿಶಂಕರ್, ಪ್ರಾಧಿಕಾರದ ನಗರ ಯೋಜನಾ ಸದಸ್ಯರಾದ ಮಹಾನಗರ ಪಾಲಿಕೆಯ ಆಯುಕ್ತರಾದ ತುಷಾರಮಣಿ, ಪ್ರಾಧಿಕಾರದ ನಗರ ಯೋಜನಾ ಸದಸ್ಯರುಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು (ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ) ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.