ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
Team Udayavani, Jan 4, 2025, 6:51 AM IST
ಬಳ್ಳಾರಿ: ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ ಬೆನ್ನಲ್ಲೇ ವಕ್ಫ್ ವಿರುದ್ಧ ಮತ್ತೊಂದು ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಜ. 4ರಂದು ಕಂಪ್ಲಿ ಪಟ್ಟಣದಲ್ಲಿ “ವಕ್ಫ್ ಹಠಾವೋ ದೇಶ್ ಬಚಾವೊ’ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಿದೆ.
ಶನಿವಾರ ಮಧ್ಯಾಹ್ನ 3ಕ್ಕೆ ಕಂಪ್ಲಿ ಪಟ್ಟಣದ ಉದ್ಭವ ಮಹಾಗಣಪತಿ ದೇವಸ್ಥಾನದಿಂದ ಪಾದಯಾತ್ರೆ ನಡೆಯಲಿದ್ದು, ಬಳಿಕ ಪಟ್ಟಣದ ಸಣಾಪುರ ರಸ್ತೆಯಲ್ಲಿನ ಶಾರದಾ ಶಾಲಾ ಆವರಣದಲ್ಲಿ ಜನಜಾಗೃತಿ ಸಭೆ ನಡೆಯಲಿದೆ. ಸಭೆಯಲ್ಲಿ ವಕ್ಫ್ ಸಂಬಂಧಿ ತ ಸಮಸ್ಯೆಗಳು ಆಲಿಸಿ, ದಾಖಲೆ ಸಮೇತ ದೂರುಗಳನ್ನು ಸ್ವೀಕರಿಸಲಾಗುವುದು. ಜನಜಾಗೃತಿ ಸಭೆಯಲ್ಲಿ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೊಂದಿಗೆ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಮಾಜಿ ಸಂಸದರಾದ ಬಿ.ವಿ.ನಾಯಕ್, ಪ್ರತಾಪ್ ಸಿಂಹ, ಚಂದ್ರಪ್ಪ, ಬಿ.ಪಿ.ಹರೀಶ್, ರವಿ ಬಿರಾದಾರ್, ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಅಭಿಯಾನ ಸಮಿತಿಯ ಸಂಚಾಲಕ ಭರತ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಪಾದಯಾತ್ರೆ ನಡೆಸಿ ವಕ್ಫ್ ನೋಟಿಸ್ ನೀಡಿದ್ದ ಹೊಲಗಳು ಹಾಗೂ ದೇವಸ್ಥಾನಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದರು. ಇದಾದ ಬಳಿಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಲ್ಕು ತಂಡಗಳಾಗಿ ರಾಜ್ಯದ ವಿವಿಧೆಡೆ ತೆರಳಿ ಮಾಹಿತಿ ಸಂಗ್ರಹಿಸಿ ಸರಕಾರದ ವಿರುದ್ಧ ಹೋರಾಟ ನಡೆಸಿದ್ದರು.
ಯಾಕೆ ಪ್ರತಿಭಟನೆ?
– ರೈತರು, ಮಠಗಳು ಮತ್ತು ಸರಕಾರಿ ಜಾಗಗಳ ಪಹಣಿಯಲ್ಲಿ ವಕ್ಫ್ ಹೆಸರು
– ವಕ್ಫ್ ಮಂಡಳಿಯ ನೋಟಿಸ್ ವಿರೋಧಿಸಿ ಯತ್ನಾಳ್ ಟೀಂನಿಂದ ಪ್ರತಿಭಟನೆ
– ಈ ಮೊದಲು ಬೀದರ್, ಕಲಬುರಗಿ ಸೇರಿ 6 ಜಿಲ್ಲೆಗಳಲ್ಲಿ ಜನಜಾಗೃತಿ ಸಭೆ
– ಮಾಹಿತಿ ಸಂಗ್ರಹಿಸಿ ವಕ್ಫ್ ಜೆಪಿಸಿಗೆ ಒದಗಿಸಿದ್ದ ತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.