457 ಜಿಂದಾಲ್ ನೌಕರರಿಗೆ ಕೋವಿಡ್ ಸೋಂಕು
Team Udayavani, Jul 6, 2020, 10:19 AM IST
ಬಳ್ಳಾರಿ: ಗಣನೀಯ ಪ್ರಮಾಣದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಶೇ. 40ರಷ್ಟು 457 ಸೋಂಕಿತರು ಜಿಂದಾಲ್ ಕೈಗಾರಿಕೆ ನೌಕರರು ಮತ್ತು ಕಾರ್ಮಿಕರಾಗಿದ್ದಾರೆ ಎಂಬ ಆಘಾತಕಾರಿ ಅಂಶ ತಿಳಿದು ಬಂದಿದೆ.
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಸೋಂಕಿತರ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣದಲ್ಲಿತ್ತು. ಮುಂಬೈ ಮತ್ತು ಇತರೆ ರಾಜ್ಯಗಳಿಂದ ಆಗಮಿಸಿದ್ದ ಕೆಲವರಿಗೆ ಪಾಸಿಟಿವ್ ಬಂದಿದ್ದರಿಂದ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಯಿತು. ಆದರೆ, ಜಿಂದಾಲ್ ಕಾರ್ಖಾನೆಯಲ್ಲಿ ಸೋಂಕು ಆವರಿಸಿದ ಬಳಿಕ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆರಂಭದಲ್ಲಿ ಕೇವಲ 13ರಿಂದ 20ರೊಳಗೆ ಇದ್ದ ಸೋಂಕಿತರ ಸಂಖ್ಯೆ ಇದೀಗ 1200ರ ಗಡಿ ದಾಟಿದೆ. ರಾಜ್ಯದಲ್ಲೇ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಬಳ್ಳಾರಿ ಬಂದು ನಿಂತಿದೆ. ಇದರಲ್ಲಿ ಸುಮಾರು ಶೇ. 40ರಷ್ಟು 457 ಸೋಂಕಿತರು ಜಿಂದಾಲ್ ಕೈಗಾರಿಕೆಯ ನೌಕರರು ಮತ್ತವರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಜಿಲ್ಲೆಯಲ್ಲಿ ಈ ವರೆಗೆ (ಶನಿವಾರದ ವರದಿ) 1168 ಜನರಿಗೆ ಸೋಂಕು ಆವರಿಸಿದ್ದು, 524 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 610 ಸಕ್ರಿಯ ಪ್ರಕರಣಗಳಾಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳ್ಳಾರಿ, ಸಂಡೂರು, ಕೊಪ್ಪಳ, ಹೊಸಪೇಟೆ, ಹಡಗಲಿ, ಕೂಡ್ಲಿಗಿಯ 6 ಜನ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದ 37 ಜನರು, ದುರ್ಬಲ ವರ್ಗದ ಮೂವರಿಗೆ ಸೋಂಕು ಆವರಿಸಿದೆ. ಜಿಲ್ಲೆಯ ಸಂಡೂರಿನ ದೌಲತ್‌ಪುರ ರಸ್ತೆಯ ಆಶ್ರಯ ಕಾಲೋನಿಯ ತಂದೆ ಮಗಳಿಗೆ ಕೋವಿಡ್ ಸೋಂಕು ಆವರಿಸಿರುವುದು ದೃಢಪಟ್ಟಿದೆ. ಸೋಂಕಿತ 42 ವರ್ಷದ ವ್ಯಕ್ತಿ ಮತ್ತವರ 12 ವರ್ಷದ ಮಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಹಡಗಲಿಯ 17ನೇ ವಾರ್ಡ್ ನಿವಾಸಿ 37 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂಜಿನೀಯರ್ ಆಗಿದ್ದ ಇವರಿಗೆ ಮದುವೆಗೆ ಬಂದಾಗ ಸೋಂಕು ಕಾಣಿಸಿಕೊಂಡಿದ್ದು, ತಪಾಸಣೆ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಇದೀಗ ಸೋಂಕಿತರ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.