ರಾರಾಜಿಸಿದ 65 ಅಡಿ ಉದ್ದದ ನಾಡಧ್ವಜ


Team Udayavani, Nov 2, 2020, 6:45 PM IST

ballary-tdy-1

ಬಳ್ಳಾರಿ: ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ನವ ಕರ್ನಾಟಕ ಯುವ ಶಕ್ತಿ ಸಂಘಟನೆ ನಗರದ ಏಕಶಿಲಾ ಬೆಟ್ಟ ಎನ್ನಲಾಗುವ ಐತಿಹಾಸಿಕ ಬಳ್ಳಾರಿ ಬೆಟ್ಟದ ಮೇಲೆ 65 ಅಡಿ ಉದ್ದದ ಕನ್ನಡ ಬಾವುಟವನ್ನು ಭಾನುವಾರ ಬೆಳಗಿನ ಜಾವ ಆರೋಹಣ ಮಾಡಲಾಯಿತು.

ಪ್ರತಿ ರಾಜ್ಯೋತ್ಸವ ದಿನದಂದು ಕೋಟೆ ಮೇಲೆ ಮುಂಜಾವಿನಲ್ಲಿಯೇ ಕನ್ನಡಧ್ವಜಾರೋಹಣ ಮಾಡುವ ಸಂಪ್ರದಾಯವನ್ನು ಈ ಸಂಘಟನೆ ಮಾಡಿಕೊಂಡು ಬಂದಿದೆ. ಈ ಬಾರಿ 65ನೇ ರಾಜ್ಯೋತ್ಸವ ಆಗಿದ್ದರಿಂದ 65 ಅಡಿ ಉದ್ದದ ಧ್ವಜವನ್ನು ಸಂಘಟನೆ ಮುಖಂಡರು, ಯುವಕರುಸೇರಿ ಧ್ವಜಾರೋಹಣ ಮಾಡಿ ಕನ್ನಡತನ ಮೆರೆದಿದ್ದಾರೆ.

ನಗರದ ಜನರೆಲ್ಲ ನಮ್ಮ ರಾಜ್ಯದ ಬಾವುಟ ದರ್ಶನ ಮಾಡಿ, ನಾಡು ನುಡಿಯ ಹೆಮ್ಮೆಯನ್ನು ಪಡೆದುಕೊಳ್ಳಲಿ. ನಾಡಿನ ಬಾವುಟ ಎಂದೆಂದಿಗೂ ಬಾನೆತ್ತರದಲ್ಲಿ ಹಾರಾಡಲಿ, ರಾಜ್ಯದ ಜನತೆಗೆ ತಾಯಿ ಭುವನೇಶ್ವರಿ ಉತ್ತಮ ಮಳೆ ಬೆಳೆ ಕೊಡಲಿ ಎಂಬ ಆಶಯದೊಂದಿಗೆ ಈ ಕಾರ್ಯ ಮಾಡುತ್ತಿರುವುದಾಗಿ ಸಂಘಟನೆಯ ಮುಖಂಡ ಸಿದ್ಮಲ್‌ ಮಂಜುನಾಥ್‌ ಇತರರು ಹೇಳಿದರು.

ಈ ಕಾರ್ಯಕ್ರಮದಲ್ಲಿ ನವಕರ್ನಾಟಕ ಯುವಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕೆ. ರಮೇಶ್‌, ಎಂ. ಮಂಜುನಾಥ, ಚಂದ್ರಶೇಖರ ಆಚಾರ್‌, ತಿಪ್ಪೇರುದ್ರ, ಗಿರಿಬಾಬು, ಕೆ. ಮಂಜುನಾಥ, ಮಹೇಶ್‌ ಕುಮಾರ್‌, ಮಿಥುನ್‌, ಪ್ರಸಾದ್‌ ಗೋಖಲೆ, ಜೆ.ಪಿ. ಮಂಜುನಾಥ, ಲಕ್ಷ್ಮೀ ರೆಡ್ಡಿ, ವೀರೇಶ್‌, ಶರಣ, ದೀರಜ್‌, ಚಂದ್ರು ಇತರರು ಇದ್ದರು.

ನಾಡ ರಕ್ಷಣೆಗೆ ಎಲ್ಲರೂ ಬದ್ಧರಾಗಿ :

ಕುರುಗೋಡು: ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ ರಕ್ಷಣೆಗೆ ಕನ್ನಡ ನಾಡಿನ ಪ್ರತಿಯೊಬ್ಬ ನಾಗರಿಕರು ಬದ್ಧರಾಗಬೇಕು ಅಂದಾಗ ಮಾತ್ರ ಕನ್ನಡಭಾಷೆ ಜೀವಂತವಾಗಿರಲು ಸಾಧ್ಯ ಎಂದು ಕುರುಗೋಡು ಪಿಎಸ್‌ಐ ಎಂ. ಕೃಷ್ಣಮೂರ್ತಿ ಹೇಳಿದರು.

ಅವರು ಭಾನುವಾರ ಪಟ್ಟಣದ ಮುಖ್ಯವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಕುರುಗೋಡು ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇತ್ತೀಚೆಗೆ ನಮ್ಮ ನಾಡಿನಲ್ಲಿ ಅನ್ಯಭಾಷೆಗಳ ಹಾವಳಿ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲರೂ ಭಾಷೆ ಉಳಿವಿಗಾಗಿ ಕನ್ನಡಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಕರೆ ನೀಡಿದರು. ಕರವೇ ಕುರುಗೊಡು ತಾಲೂಕು ಅಧ್ಯಕ್ಷ ಗುಡಿಸಿಲಿರಾಜ ಮತ್ತು ತಾಲೂಕು ಘಟಕದ ಉಪಾಧ್ಯಕ್ಷ ಕೆ. ಬಸವರಾಜ್‌ ಮಾತನಾಡಿ, ನಾಡಿನ ಇತಿಹಾಸ ಮತ್ತು ಪರಂಪರೆ ಬಗ್ಗೆ ವಿವರಿಸಿದರು.

10ನೇ ತರಗತಿಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕಪಡೆದ ವಿದ್ಯಾರ್ಥಿಗಳನ್ನು ಮತ್ತು ವಿಡಿಯೋ ಮೂಲಕ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಾಲೂಕು ಘಟಕದ ಗೌರವಾಧ್ಯಕ್ಷ ಹಂಪೆ ಬಸವರಾಜ್‌, ಕುರುಗೋಡು ಯುವ ಘಟಕ ಅಧ್ಯಕ್ಷ ಗೆಣಿಕೆಹಾಳು ವೀರೇಶ್‌, ಉಪಾಧ್ಯಕ್ಷ ಪಿ. ಸಿದ್ದಿಸಾಬ್‌, ಗಾಳೆಪ್ಪ, ಬ್ಲಾಕ್‌ ಅಧ್ಯಕ್ಷ ಬಂಗಿಮಲ್ಲಯ್ಯ, ಪುರಸಭೆ ಸದಸ್ಯ ನಾಗರಾಜ, ಸುಂಕಪ್ಪ, ಅಗಸರ ವೆಂಕಟೇಶ್‌, ಹೊನ್ನಪ್ಪ, ಸಿದ್ದಪ್ಪ, ರಾಮಣ್ಣ, ಸೇರಿದಂತೆ ಇತರೆ ಕರವೇ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.