ಮತ್ತೆ 66 ಮಂದಿಗೆ ಸೋಂಕು: ಒಂದು ಸಾವು
Team Udayavani, Jul 11, 2020, 12:09 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಶುಕ್ರವಾರ ಪುನಃ 66 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1554ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಶುಕ್ರವಾರ ಮತ್ತೂಬ್ಬರು ಬಲಿಯಾಗಿದ್ದು, ಸತ್ತವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿತರ ಸಂಖ್ಯೆ ದಿನೇದಿನೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಗುರುವಾರ 46 ಜನರಲ್ಲಿ ಪತ್ತೆಯಾಗಿದ್ದ ಸೋಂಕು ಶುಕ್ರವಾರ 66 ಜನರಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮಡುಗಟ್ಟಿದೆ. ಗುಣಮುಖರಾಗಿದ್ದ 79 ಜನರು ಬಿಡುಗಡೆಯಾಗುವ ಮೂಲಕ ಒಟ್ಟು 1008 ಜನರು ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ. ಒಟ್ಟು 55 ಸಕ್ರಿಯ ಪ್ರಕರಣಗಳಾಗಿವೆ. ಕೋವಿಡ್ ಸೋಂಕಿಗೆ ಶುಕ್ರವಾರ ಮತ್ತೂಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 47 ವರ್ಷದ ಪುರುಷ ಪಿ. 15538 ಸೋಂಕಿತನು ಜ್ವರ, ಉಸಿರಾಟ ಸಮಸ್ಯೆಯಿಂದಾಗಿ ಜುಲೈ 1ರಂದು ಆಸ್ಪತ್ರೆಗೆ ದಾಖಲಾಗಿದ್ದು, ಜುಲೈ 10ರಂದು ಮೃತಪಟ್ಟಿದ್ದಾನೆ. ಸಾಯುವ ಮುನ್ನ ಸ್ವ್ಯಾಬ್ ಪರೀಕ್ಷಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಇನ್ನು ಗುರುವಾರ ರೋಗಲಕ್ಷಣ ರಹಿತ 22 ಕೋವಿಡ್ ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್‌ನಲ್ಲಿ ಇಡಲಾಗಿದ್ದು, ಶುಕ್ರವಾರ ಪುನಃ 24 ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್‌ನಲ್ಲಿ ಇಟ್ಟು ಚಿಕಿತ್ಸೆ ನೀಡುತ್ತಿದೆ. ಈ ಮೂಲಕ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ರೋಗಲಕ್ಷಣ ರಹಿತ ಸೋಂಕಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸಿರುಗುಪ್ಪದಲ್ಲಿ ನಾಲ್ಕು ಜನರಲ್ಲಿ ಸೋಂಕು ಪತ್ತೆ : ನಗರದಲ್ಲಿ 4 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಕೋವಿಡ್ ಸೋಂಕಿತರ ಸುತ್ತಲಿನ 10 ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದ್ದು, 100 ಮೀಟರ್ ಬಫರ್‌ಝೋನ್ ಎಂದು ಗುರುತಿಸಲಾಗಿದೆ. ಸೋಂಕಿತರ ಮನೆ ಸುತ್ತಮುತ್ತಲಿನ ಪ್ರದೇಶವನ್ನು ಡಿಸ್ಯಾನಿಟೈಸರ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಸುರೇಶ್‌ಗೌಡ ತಿಳಿಸಿದ್ದಾರೆ. ನಗರದ 15ನೇ ವಾರ್ಡ್‌ನ 52 ವರ್ಷದ ಮಹಿಳೆ, 23ನೇ ವಾರ್ಡ್‌ನ 45 ವರ್ಷದ ಮಹಿಳೆ, 17ನೇ ವಾರ್ಡ್‌ನ ಕೊರ್ರಮ್ಮನ ಹಳ್ಳ ಹತ್ತಿರದ ನಿವಾಸಿ 21 ವರ್ಷದ ಯುವಕ, 17ನೇ ವಾರ್ಡ್‌ನ ನಿವಾಸಿ ಸಿಂಧನೂರಿನ ಬ್ಯಾಂಕ್ ಆಫ್ ಬರೋಡ ಉದ್ಯೋಗಿ, 32 ವರ್ಷದ ಪುರುಷನಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.