9 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ

Team Udayavani, Feb 3, 2019, 7:47 AM IST

bell-5.jpg

ಹರಪನಹಳ್ಳಿ: ಮಧ್ಯ ಕರ್ನಾಟಕದ ಅಸಂಖ್ಯಾತ ಭಕ್ತರ ಆರಾಧ್ಯ ದೈವ‌ ಉಚ್ಚಂಗೆಮ್ಮದೇವಿ ದರ್ಶನ ಪಡೆಯಲು ರಸ್ತೆ ನಿರ್ಮಾಣಕ್ಕೆ 9 ಕೋಟಿ ರೂ. ಹಣ ಮಂಜೂರಾಗಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ್‌ನಾಯ್ಕ ತಿಳಿಸಿದರು.

ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಉಚ್ಚೆಂಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂಲೆ ಮೂಲೆಗಳಿಂದ ಹುಣ್ಣಿಮೆ, ಅಮಾವಾಸೆ, ಜಾತ್ರೋತ್ಸವ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಉಚ್ಚೆಂಗೆಮ್ಮದೇವಿ ದರ್ಶನ ಪಡೆಯಲು ಆಗಮಿಸುತ್ತಾರೆ. ಆದರೆ ದೇವಿ ಬೆಟ್ಟದ ಮೇಲೆ ನೆಲೆಸಿರುವುದರಿಂದ ವೃದ್ಧರು, ಅಂಗವಿಕಲರು, ಮಕ್ಕಳು ಬೆಟ್ಟ ಏರಲು ಕಷ್ಟಪಡುತ್ತಿದ್ದಾರೆ. ಹಾಗಾಗಿ ಬೆಟ್ಟದ ಮೇಲಿನ ದೇವಸ್ಥಾನವರೆಗೆ ರಸ್ತೆ ನಿರ್ಮಿಸಲು ಲೋಕೋಪಯೋಗಿ ಇಲಾಖೆ ವತಿಯಿಂದ ಅನುದಾನ ಮಂಜೂರಾಗಿದೆ ಎಂದರು.

ನಾನು ಕೂಡ ಉಚ್ಚೆಂಗೆಮ್ಮದೇವಿ ಭಕ್ತನಾಗಿದ್ದು, ಅವಕಾಶ ಕಲ್ಪಿಸಿದರೆ ರಸ್ತೆ ನಿರ್ಮಿಸುವುದಾಗಿ ದೇವಿಗೆ ಸಂಕಲ್ಪ ಹೊಂದಿದ್ದೆ. ಅದರಂತೆ ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಮನವಿ ಮಾಡಿಕೊಂಡು ಹಣ ಮಂಜೂರು ಮಾಡಿಸಿದ್ದೇನೆ. 2013ರಲ್ಲಿ ಸಚಿವನಾಗಿದ್ದಾಗ ರಸ್ತೆ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು, ಆದರೆ 2 ವರ್ಷ ಕಳೆದರೂ ಅನುದಾನ ವಿನಿಯೋಗವಾಗದಿದ್ದರಿಂದ ಶಾಸಕರು ಅನ್ಯ ಕಾಮಗಾರಿಗೆ ಬಳಕೆ ಮಾಡಿಕೊಂಡರು. ಮೈಸೂರು, ತಿರುಪತಿ ಬೆಟ್ಟದ ಮೇಲೆ ರಸ್ತೆ ನಿರ್ಮಾಣದ ಮಾಡಿರುವ ತಾಂತ್ರಿಕ ಪರಿಣಿತಿ ಹೊಂದಿರುವವರೊಂದಿಗೆ ಶೀಘ್ರವೇ ಬೆಟ್ಟಕ್ಕೆ ಆಗಮಿಸಿ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ತಿಳಿಸಿದರು.

ಉಚ್ಚೆಂಗೆಮ್ಮದೇವಿ ಬೆಟ್ಟ ಪುರಾತತ್ವ ಇಲಾಖೆ ಅಧೀನಕ್ಕೆ ಒಳಪಡುತ್ತಿರುವುದರಿಂದ ಅಭಿವೃದ್ಧಿ ಕಾಮಗಾರಿ ಮಾಡಲು ಆಕ್ಷೇಪಣೆ ಮಾಡುತ್ತಿದ್ದಾರೆ. ರಾಜ್ಯದ ಪುರಾತತ್ವ ಇಲಾಖೆ ಅಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ. ಆದರೆ ಕೇಂದ್ರ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆ ಇದೆ. ಹಾಗಾಗಿ ಅಗತ್ಯ ಬಿದ್ದರೆ ದೆಹಲಿಗೆ ತೆರಳಿ ಅಧಿಕಾರಿಗಳ ಆತಂಕ ನಿವಾರಣೆ ಮಾಡಲಾಗುವುದು. ದೇವಸ್ಥಾನ ಯಾತ್ರಿ ನಿವಾಸ, ವಾಹನ ಪಾರ್ಕಿಂಗ್‌, ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯಿಂದ 4 ಕೋಟಿ ರೂ. ಅನುದಾನ ಮಂಜೂರಾಗಿದೆ. ಇದಕ್ಕೆ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಾರು ಆಪರೇಷನ್‌ ಕಮಲ ಮಾಡಲು ಹೊರಟ್ಟಿದ್ದರೋ ಅವರೇ ಇಂದು ಆಪರೇಷನ್‌ ಆಗುತ್ತಿದ್ದಾರೆ. ಇದನ್ನು ಮಾಡಲು ಹೊರಟವರಿಗೆ ಮುಂದಿನ ದಿನಗಳಲ್ಲಿ ಗೊತ್ತಾಲಿದೆ ಎಂದು ತಿಳಿಸಿದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎಂ.ಶಿವಕುಮಾರಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಮಂಜುನಾಥ, ಮುಖಂಡರಾದ ಶಶಿಧರ ಪೂಜಾರ್‌, ಯರಬಳ್ಳಿ ಉಮಾಪತಿ, ಲಕ್ಷ್ಮಿಪುರ ಗ್ರಾಪಂ ಅಧ್ಯಕ್ಷ ಪಿ.ಟಿ.ಭರತ್‌, ಪಿ.ಎಲ್‌.ಪೋಮ್ಯನಾಯ್ಕ, ಎಂ.ಟಿ.ಬಸವನಗೌಡ, ಕಾವಲಹಳ್ಳಿ ರವೀಂದ್ರನಾಥ, ಈರಣ್ಣ, ಚಂದ್ರನಾಯ್ಕ ಇಟ್ಟಿಗೆ, ಹಡಗಲಿ ಚಿದಾನಂದ, ಪರಮೇಶ್ವರಪ್ಪ, ಕೆ.ಕೆಂಚಪ್ಪ, ಟಿ.ಮಂಜಪ್ಪ, ಮಹಾಂತೇಶನಾಯ್ಕ, ಕರಡಿದುರ್ಗದ ಚೌಡಪ್ಪ, ರಮೇಶ್‌, ಸಿಪಿಐ ಡಿ.ದುರ್ಗಪ್ಪ, ಪಿಎಸ್‌ಐ ಸಿದ್ದೇಶ್‌, ಕಂದಾಯ ನಿರೀಕ್ಷಕ ಶ್ರೀಧರ್‌ ಇದ್ದರು.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.