ರಸ್ತೆಯಲ್ಲಿ ಬೆಳೆ ಹಾಕಿದ್ದ ರೈತರ ತರಾಟೆ
Team Udayavani, Jan 13, 2021, 4:39 PM IST
ಹರಪನಹಳ್ಳಿ: ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಾಹನಗಳು ಸಂಚರಿದಂತೆ ರಸ್ತೆ ತುಂಬಾ ತೊಗರಿ, ರಾಗಿ ಬೆಳೆ ಸೇರಿದಂತೆ ವಿವಿಧ ಬೆಳೆಗಳನ್ನು ಹಾಕಿರುವ ರೈತರಿಗೆ ಸ್ಥಳೀಯ ಸಿವಿಲ್ ನ್ಯಾಯಾಲಯದ ನ್ಯಾಯಾಧಿಧೀಶರಾದ ಮಂಜುಳಾ ಶಿವಪ್ಪ ಉಂಡಿ ತರಾಟೆ ತೆಗೆದುಕೊಂಡಿದ್ದಾರೆ.
ತಾಲೂಕಿನ ಹಲುವಾಗಲು ಪೊಲೀಸ್ ಠಾಣೆಗೆ ಭೇಟಿ ನೀಡಲು ಮಂಗಳವಾರ ತೆರಳುತ್ತಿದ್ದ ವೇಳೆ ದಾರಿ ಉದ್ದಕ್ಕೂ ಬೆಳೆ ಹಾಕಿರುವ ರೈತರಿಗೆ ತರಾಟೆ ತೆಗೆದುಕೊಂಡಿದ್ದಾರೆ. ನೀವು ಕಣದಲ್ಲಿ ಬೆಳಗಳನ್ನು ಹಾಕುವುದನ್ನು ಬಿಟ್ಟು ರಸ್ತೆಯಲ್ಲಿ ಹಾಕಿದ್ದಲ್ಲಿ ವಾನಹಗಳು ಹೇಗೆ ಸಂಚರಿಸಬೇಕು.
ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ತಿಪ್ಪರಲಾಗ ಹಾಕಿದ್ರೂ BJP ಅಧಿಕಾರಕ್ಕೆ ಬರುವುದಿಲ್ಲ: ಸಿದ್ದರಾಮಯ್ಯ
ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಮೊದಲು ರಸ್ತೆಯಿಂದ ಬೆಳೆಗಳನ್ನು ತೆಗೆಯುವಂತೆ ತಿಳಿಸಿರುವ ನ್ಯಾಯಾಧೀಶರು ರಸ್ತೆಯಿಂದ ಬೆಳೆ ತೆಗೆದ ನಂತರವೇ ಪ್ರಯಾಣ ಮಾಡಿದ್ದಾರೆ. ತಾಲೂಕಿನ ಹಲುವಾಗಲು, ಇಟ್ಟಿಗುಡಿ, ನೀಲಗುಂದ, ಕುಂಚೂರು, ಯರಬಾಳು, ಮತ್ತೂರು ಹಾಗೂ ಹರಪನಹಳ್ಳಿ ಭಾಗದ ಹುಲಿಕಟ್ಟಿ, ತೋಗರಿಕಟ್ಟೆ, ಹಾರಕನಾಳು ಸಣ್ಣ ತಾಂಡ ಭಾಗದ ರಸ್ತೆಯಲ್ಲಿ ಸಂಚರಿಸಿದ ನ್ಯಾಯಾಧಿಧೀಶರು ಕೆಲ ರೈತರಿಗೆ ಲಘು ಪ್ರಕರಣಗಳನ್ನು ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದರು. ಅಲ್ಲದೇ 20 ಜನರ ರೈತರನ್ನು ಬುಧವಾರ ನ್ಯಾಯಲಯಕ್ಕೆ ಹಾಜರು ಪಡಿಸುವಂತೆ ಸೂಚನೆ ನೀಡಿದರು. ಪಿಎಸ್‌ಐ ಸಿ.ಪ್ರಕಾಶ್, ಶಿರಸ್ತೇದಾರ್ ಶೀಲಾ ಮತ್ತಿತರರು ಉಪಸ್ಥಿತರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.