ಪದೇ ಪದೆ ಕೆಟ್ಟು ನಿಲ್ಲುವ ನೀರಿನ ಘಟಕ; ನೀರಿಗಾಗಿ ಗ್ರಾಮಸ್ಥರ ನಿತ್ಯ ಪರದಾಟ
ಒಮ್ಮೊಮ್ಮೆ 5 ರೂ ಬಿಲ್ಲೆ ಹಾಕಿದರೂ ನೀರು ಬರಲ್ಲ
Team Udayavani, Jul 27, 2020, 1:20 PM IST
ಸಿರುಗುಪ್ಪ: ಎಚ್. ಹೊಸಳ್ಳಿ ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಪಡೆಯಲು ಕಾಯಿನ್ ಹಾಕಿದ ಬಾಲಕ ನೀರು ಬಾರದೆ ಕಾಯಿನ್ ಬಾಕ್ಸ್ ಅಲ್ಲಾಡಿಸುತ್ತಿರುವ ಬಾಲಕ.
ಸಿರುಗುಪ್ಪ: ತಾಲೂಕಿನ ಎಚ್.ಹೊಸಳ್ಳಿ ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ 2-3 ದಿನಕ್ಕೊಮ್ಮೆ ಕೆಟ್ಟು ನಿಲ್ಲುತ್ತಿದ್ದು, ಶುದ್ಧ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವುದು ಸಾಮಾನ್ಯವಾಗಿದೆ. ಈ ಗ್ರಾಮದಲ್ಲಿರುವ ಬೋರ್‌ವೆಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಕುಡಿಯುವ ನೀರಿಗಾಗಿ ಕೆರೆಯನ್ನು ಮತ್ತು ಒಂದು ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಕೆರೆಯಲ್ಲಿ ನೀರು ಖಾಲಿಯಾಗಿದ್ದು, ಇರುವ ಒಂದು ಶುದ್ಧ ಕುಡಿಯುವ ನೀರಿನ ಘಟಕದಿಂದಲೇ ನೀರನ್ನು ತಂದು ಬಳಕೆ ಮಾಡುತ್ತಾರೆ. ಆದರೆ ಈ ಘಟಕವು ಕಳೆದ 2 ತಿಂಗಳಿಂದ 2-3ದಿನಕ್ಕೊಮ್ಮೆ ಕೆಟ್ಟು ನಿಲ್ಲುತ್ತಿದ್ದು, ಶುದ್ಧ ಕುಡಿಯುವ ನೀರಿಗಾಗಿ 5 ಕಿಮೀ ದೂರದಲ್ಲಿರುವ ಕರೂರು ಅಥವಾ ದರೂರು ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ತಂದು ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶುದ್ಧ ಕುಡಿಯುವ ನೀರು ಪಡೆಯಲು ಗ್ರಾಮಸ್ಥರು ರೂ. 5ಗಳ ಬಿಲ್ಲೆಯನ್ನು ಹಾಕಿದರೆ ಮಾತ್ರ ನೀರು ಬರುತ್ತವೆ. ಹಲವು ಬಾರಿ ರೂ. 5 ಬಿಲ್ಲೆ ಹಾಕಿದರೂ ನೀರು ಬರುತ್ತಿಲ್ಲ. ಮತ್ತೂಮ್ಮೆ ರೂ. 5 ಹಾಕಿದರೆ ನೀರು ಬರುತ್ತವೆ. ಇದರಿಂದಾಗಿ ಕೆಲವು ಬಾರಿ ಕಾಯಿನ್ ಹಾಕಿದರೂ ನೀರು ಬಾರದೆ ತಾಂತ್ರಿಕ ಸಮಸ್ಯೆ ಇದ್ದರೂ
ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಪದೇ ಪದೆ ಘಟಕ ಕೆಟ್ಟು ನಿಲ್ಲುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಘಟಕವನ್ನು ಸರಿಯಾಗಿ ರಿಪೇರಿ ಮಾಡಿಸಿ ಸತತವಾಗಿ ಶುದ್ಧ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಎಚ್. ಹೊಸಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಪೇರಿ ಮಾಡಿಸಿ ಶುದ್ಧ ನೀರೊದಗಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಾಪಂ ಇ.ಒ. ಶಿವಪ್ಪ ಸುಬೇದಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.