ಕಾರಾಗೃಹದಲ್ಲಿದ್ದ ಕೈದಿ ನಾಪತ್ತೆ
Team Udayavani, Aug 16, 2018, 7:50 AM IST
ಬಳ್ಳಾರಿ: ಜೀವಾವಧಿ ಶಿಕ್ಷೆಗೆ ಒಳಗಾಗಿ ನಗರದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ರಕ್ತ ಪರೀಕ್ಷೆಗೆಂದು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದ ವೇಳೆ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಮಂಗಳವಾರ ರಾತ್ರಿ ಪರಾರಿಯಾಗಿದ್ದಾನೆ.
ಮೈಸೂರು ಜಿಲ್ಲೆ ಮೂಲದ ಸಂಜಯ ಅಲಿಯಾಸ್ ಕೃಷ್ಣನಾಯ್ಕ (32) ಪರಾರಿಯಾದ ಕೈದಿ. ಕೊಲೆ ಪ್ರಕರಣವೊಂದರಲ್ಲಿ 2004ರಲ್ಲಿ ಈತ ಬಂ ಧಿತನಾಗಿದ್ದ. ಜೀವಾವ ಧಿ ಶಿಕ್ಷೆ ವಿ ಧಿಸಿದ ಬಳಿಕ ಬೆಂಗಳೂರು ಜೈಲಿನಲ್ಲಿದ್ದ ಈತನನ್ನು 2016ರಲ್ಲಿ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು.
ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಮಂಗಳವಾರ ಸಂಜೆ 4.15ರ ಸುಮಾರಿಗೆ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ವಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಅಲ್ಲಿ ವೈದ್ಯರ ಸಲಹೆ ಮೇರೆಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ನಂತರ ಕೈದಿಯನ್ನು ಕೊಠಡಿಯೊಂದರಲ್ಲಿ ಕೂಡಿಸಿ ಒಬ್ಬರು ರಕ್ತಪರೀಕ್ಷೆ ವರದಿ ಪಡೆಯಲು, ಮತ್ತೂಬ್ಬ ಸಿಬ್ಬಂದಿ ವೈದ್ಯಕೀಯ ವರದಿ ಪಡೆಯಲು ತೆರಳಿದ್ದಾರೆ. ವಾಪಸ್ ಬಂದು ನೋಡಿದಾಗ, ಸ್ಥಳದಲ್ಲಿ ಕೈದಿ ಇರಲಿಲ್ಲ. ತಕ್ಷಣ ಕಾರಾಗೃಹದ ಅ ಧೀಕ್ಷಕ ಡಾ| ಪಿ.ರಂಗನಾಥ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.