![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 2, 2024, 6:35 PM IST
■ ಉದಯವಾಣಿ ಸಮಾಚಾರ
ಬಳ್ಳಾರಿ: ನಗರದ ತೇರು ಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಚಿನ್ನಾಭರಣಗಳ ಮಾರಾಟ ಮಳಿಗೆಯಲ್ಲಿ ಎಸಿಗೆ ತುಂಬಿಸುವ ಗ್ಯಾಸ್ ಸ್ಫೋಟಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ
ಗಂಭೀರವಾಗಿದೆ.
ಈ ಜ್ಯುವೆಲ್ಲರ್ ಶಾಪ್ ಸಂಪೂರ್ಣ ಸೆಂಟ್ರಲೈಜ್ ಎಸಿ ಸೌಲಭ್ಯ ಹೊಂದಿದೆ. ಎಸಿಯಲ್ಲಿನ ಗ್ಯಾಸ್ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಮಿಕರು ಗ್ಯಾಸ್ ತುಂಬಿಸಲು ಗುರುವಾರ ಮಳಿಗೆಗೆ ಬಂದಿದ್ದಾರೆ. ಎಸಿಗೆ ತುಂಬಿಸುವಾಗ ಗ್ಯಾಸ್ ಸ್ಫೋಟಗೊಂಡಿದ್ದು, ಗ್ಯಾಸ್ ತುಂಬಿಸುವ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಟ್ಟಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕನನ್ನು ಮಳಿಗೆಯ ಸಿಬ್ಬಂದಿ ಹೊರತಂದು ವಿಮ್ಸ್‌ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನುಳಿದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಮಳಿಗೆಯ ಕಿಟಕಿ, ಮುಖ್ಯದ್ವಾರದ
ಗಾಜುಗಳು ಪುಡಿಪುಡಿಯಾಗಿ ಚೆಲ್ಲಾಪಿಲ್ಲಾಗಿಯಾಗಿವೆ ಎಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಸಿಪಿಐ ಎಂ.ಎನ್.ಸಿಂಧೂರ
ತಿಳಿಸಿದ್ದಾರೆ. ಈ ಕುರಿತು ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.