ಸಾಧಕರಿಗೆ “ಕಾಯಕವೇ ಕೈಲಾಸ’ ಪ್ರಶಸ್ತಿ ಪ್ರದಾನ
Team Udayavani, Sep 22, 2018, 12:18 PM IST
ಹೂವಿನಹಡಗಲಿ: ಮೊದಲಿನಿಂದಲೂ ಜೆಸಿಐ ಸಂಸ್ಥೆ ಸಮಾಜಮುಖೀ ಕಾರ್ಯ ಮಾಡುತ್ತಾ ಬಂದಿದ್ದು, ಸಮಾಜದಲ್ಲಿ ಎಲೆಮರೆಯ ಕಾಯಿಯಂತೆ ದುಡಿಯುತ್ತಿರುವ ಅವರ ಕಾಯಕವನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಜೆಸಿಐ ಸಂಸ್ಥೆ ಅಧ್ಯಕ್ಷ ಡಾ| ಸೋಮಶೇಖರ್ ತಿಳಿಸಿದರು.
ಪಟ್ಟಣದಲ್ಲಿ ಜೆಸಿಐ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಇಲಾಖೆ, ಅಂಚೆ ಇಲಾಖೆ, ಅರಣ್ಯ ಇಲಾಖೆ, ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಆಟೋ ಚಾಲಕ ಸಂಘ, ಕೆಎಸ್‌ಆರ್‌ಟಿಸಿ ಇಲಾಖೆ ಹಾಗೂ ಪುರಸಭೆ ಪೌರ ಕಾರ್ಮಿಕರಿಗೆ ಈ ಬಾರಿ ಅವರ ಕರ್ತವ್ಯ ನಿಷ್ಠೆ ಗುರುತಿಸಿ ಉತ್ತಮ ಸೇವಾ ಕಾರ್ಯನಿರತ ಪ್ರಶಸ್ತಿಯಾದ “ಕಾಯಕವೇ ಕೈಲಾಸ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಕೆ. ರಾಘವೇಂದ್ರರಾವ್, ವಿವಿಧ ಕ್ಷೇತ್ರಗಳಲ್ಲಿ ಗುರುತರ ಕೆಲಸ ಮಾಡಿದವರನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸಿದರೆ ಮುಂದಿನ ದಿನಗಳಲ್ಲಿ ಅವರು ಇನ್ನೂ ಹೆಚ್ಚಿನ ಕೆಲಸ ಮಾಡಲು ಪ್ರೇರೆಣೆಯಾಗುತ್ತದೆ. ಜೆಸಿಐ ಇಂತಹ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗವಿಮಠದ ಡಾ| ಹಿರಿಶಾಂತವೀರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ನಿಕಟಪೂರ್ವ ಅಧ್ಯಕ್ಷ ಜೆಸಿಐ ಗಾಡ್ವಿನ್ ಸುಧಾಕರ್, ಜೆಸಿಐ ಭರತ್ ಕುಮಾರ್, ಚೌವ್ಹಾಣ್, ಜೆಸಿಐ ಡಾ| ಲಕ್ಷ್ಮಣನಾಯ್ಕ, ಡಾ| ಪ್ರಕಾಶ್ ಆಟವಾಳಗಿ, ಜೆಸಿಐ ದ್ವಾರಕೀಶ್‌ರೆಡ್ಡಿ, ಕೃಷ್ಣರೆಡ್ಡಿ, ಕಿರಣ್‌ಕುಮಾರ್ ಜೈನ್, ಎ.ಕೆ.ನಾಗರಾಜ್, ಡಾ| ಜೆ.ಡಿ.ಉಮೇಶ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.