ಸಾರಿಗೆ ಸಂಚಾರದಲ್ಲಿ ತೊಂದರೆ ಆಗದಂತೆ ಕ್ರಮ
Team Udayavani, Apr 7, 2021, 7:32 PM IST
ಬಳ್ಳಾರಿ: ಸಾರಿಗೆ ಸಂಸ್ಥೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.7ರಿಂದ ಅನಿ ರ್ದಿಷ್ಠಾವಧಿ ಹೋರಾಟ ಆರಂಭಿಸಿಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ಧಿಕಾರಿ ಪವನಕುಮಾರ್ ಮಾಲಪಾಟಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಎನ್‌ಇಕೆಎಸ್‌ಆರಿಸಿ ಅಧಿಕಾರಿಗಳು ಮತ್ತು ಖಾಸಗಿ ಬಸ್‌ಗಳು, ಮ್ಯಾಕ್ಸಿಕ್ಯಾಬ್‌ಗಳ ಮಾಲೀಕರೊಂದಿಗೆ ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.
ಸಾರಿಗೆ ಸಂಸ್ಥೆಗಳ ಬಸ್‌ಗಳ ಓಡಾಟ ಕಡಿಮೆಯಾದ್ರೇ ಯಾವ ರೀತಿಯ ಪರ್ಯಾಯ ಕ್ರಮಗಳನ್ನು ಅನುಸರಿಬೇಕು ಎಂಬುದರ ಕುರಿತು ಅ ಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಮಾಲಪಾಟಿ ಅವರು ಜಿಲ್ಲೆಯ ಸಾರ್ವಜನಿಕರಿಗೆ ವಿವಿಧೆಡೆ ಸಂಚರಿಸುವಲ್ಲಿ ಯಾವುದೇ ರೀತಿಯಲ್ಲಿ ಸಾರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಅ ಧಿಕಾರಿಗಳು ಕೈಗೊಳ್ಳಬೇಕು ಎಂದು ಸೂಚಿಸಿದರು. ಸಾರಿಗೆ ಸಂಸ್ಥೆಗಳ ಬಸ್‌ಗಳ ಓಡಾಟ ಕಡಿಮೆಯಾದ ಪಕ್ಷದಲ್ಲಿ ಈಗಾಗಲೇ ಖಾಸಗಿ ಬಸ್‌ಗಳು, ಮ್ಯಾಕ್ಸಿಕ್ಯಾಬ್‌ಗಳ ಮಾಲೀಕರೊಂದಿಗೆ ಚರ್ಚಿಸಿದಂತೆ ಅವುಗಳನ್ನು ಪಡೆದುಕೊಂಡು ಯಾವ್ಯಾವ ಮಾರ್ಗದ ಕಡೆಗೆ ವಾಹನಗಳ ಅವಶ್ಯಕತೆ ಇದೆಯೋ ಆ ಕಡೆಗೆ ಅವುಗಳನ್ನು ಓಡಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಎಲ್ಲ ಖಾಸಗಿ ವಾಹನಗಳು ಕೆಎಸ್‌ಆರಿrಸಿ ಬಸ್ ನಿಲ್ದಾಣದಿಂದಲೇ ಕಾರ್ಯಾರಂಭ ಮಾಡಬೇಕು ಎಂದು ಸೂಚನೆ ನೀಡಿದರು.
ದುಡ್ಡು ಡಬಲ್ ಪಡೆದ್ರೇ ಕ್ರಮ: ಸಾರಿಗೆ ಮುಷ್ಕರದ ನೆಪವನ್ನಿಟ್ಟುಕೊಂಡು ಇದೇ ಒಳ್ಳೆಯ ಅವಕಾಶ ಅಂತ ಹೇಳಿಕೊಂಡು ತಮಗೆ ಸೂಚಿಸಲಾದ ಮಾರ್ಗಗಳಲ್ಲಿ ವಾಹನಗಳು ಓಡಿಸುವ ಸಂದರ್ಭದಲ್ಲಿ ಸಾರ್ವಜನಿಕರಿಂದ ನಿಗದಿಪಡಿಸಿದ ಹಣಕ್ಕಿಂತ ಡಬಲ್ ಹಣ ಪಡೆದ್ರೇ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಖಾಸಗಿ ವಾಹನಗಳ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಪ್ರಾದೇಶಿಕ ಸಾರಿಗೆ ಅ ಧಿಕಾರಿಗಳಿಂದ ಖಾಸಗಿ ಬಸ್ ಗಳು,ಮ್ಯಾಕ್ಸಿಕ್ಯಾಬ್‌ಗಳ ಸಂಪೂರ್ಣ ವಿವರವನ್ನು ಎನ್ ಇಕೆಆರಿrಸಿ ಅ ಧಿಕಾರಿಗಳು ಕೂಡಲೇ ಪಡೆದುಕೊಂಡು ತಮಗೆ ಅವಶ್ಯವಿರುವೆಡೆ ಅವುಗಳನ್ನು ಓಡಿಸುವುದರ ಮೂಲಕ ಸುಗಮ ಸಾರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಡಿ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಮ್ಮೊಂದಿಗೆ ಕೈಜೋಡಿಸಿ;ತಮಗೆ ಪೊಲೀಸ್ ಇಲಾಖೆ ವತಿಯಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ , ಅಪರ ಜಿಲ್ಲಾ ಧಿಕಾರಿ ಪಿ.ಎಸ್.ಮಂಜುನಾಥ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶೇಖರ್, ಎನ್‌ಇಕೆಎಸ್‌ಆರಿಸಿ ಡಿಸಿ ರಾಜಗೋಪಾಲ ಪುರಾಣಿಕ್, ಖಾಸಗಿ ವಾಹನಗಳ ಸಂಘಗಳ ಪ್ರಮುಖರು ಮತ್ತು ಮಾಲೀಕರು ಇದ್ದರು. ಸಾರಿಗೆ ಮುಷ್ಕರದ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಸಾರಿಗೆ ಸಂಚಾರಕ್ಕೆ ಕ್ರಮವಹಿಸುವ ನಿಟ್ಟಿನಲ್ಲಿ ಹರಪನಳ್ಳಿ, ಹೊಸಪೇಟೆಗಳಲ್ಲಿಯೂ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸಾರಿಗೆ ಅಧಿಕಾರಿಗಳು,ಖಾಸಗಿ ವಾಹನಗಳ ಮಾಲೀಕರೊಂದಿಗೆ ಮಂಗಳವಾರ ಸಂಜೆ ಸಭೆ ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.