ಕುಡಿಯುವ ನೀರಿನ ಯೋಜನೆ ಜಾರಿಗೆ ಕ್ರಮ
Team Udayavani, Oct 30, 2021, 2:26 PM IST
ಮರಿಯಮ್ಮನಹಳ್ಳಿ: ಪಟ್ಟಣಕ್ಕೆ ಪ್ರತ್ಯೇಕ ಕುಡಿಯುವ ನೀರಿನ ಯೊಜನೆ ಜಾರಿಗೆತರಲು ಪ್ರಯತ್ನಿಸಲಾಗುವುದು ಎಂದು ವಿಜಯನಗರ ಜಿಲ್ಲೆ ಜಿಲ್ಲಾಧಿ ಕಾರಿಅನಿರುದ್ಧ ಶ್ರವಣ್ ಹೇಳಿದರು.
ಅವರು ಶುಕ್ರವಾರ ಪಟ್ಟಣ ಪಂಚಾಯಿತಿಯಲ್ಲಿ 15ನೇ ಹಣಕಾಸಿನಯೋಜನೆಯ 2021-22ನೇಸಾಲಿನಲ್ಲಿ ಕೈಗೊಳ್ಳಬೇಕಾಗಿರುವ 1 ಕೋಟಿ 13 ಲಕ್ಷ ರೂ. ಮೊತ್ತದಕಾಮಗಾರಿಗಳ ಬಗ್ಗೆ ಪರಿಶೀಲಿಸಲು ಭೇಟಿ ನೀಡಿ ಮಾತನಾಡಿದರು.
ಪಟ್ಟಣ ಪಂಚಾಯಿತಿಗೆಬೇಕಾಗಿರುವ ಕುಡಿಯುವ ನೀರಿನಯೋಜನೆ ಬಗ್ಗೆ ಮನವಿಗಳು ನಮ್ಮ ಗಮನಕ್ಕೆ ಬಂದಿವೆ.ಮುಂದಿನ ದಿನಮಾನಗಳಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಪಟ್ಟಣ ಪಂಚಾಯಿತಿಯಲ್ಲಿ ಕಾಯಂ ಇಂಜಿನಿಯರ್ ಹಾಗೂಸಿಬ್ಬಂದಿ ಕೊರತೆಯಿದೆ. ಅದನ್ನು ಹಂತಹಂತವಾಗಿ ಸಿಬ್ಬಂದಿಗೆ ಕೊಡಲಾಗುವುದು. ಕೊರೊನಾ ಲಸಿಕೆ ನಮ್ಮ ಜಿಲ್ಲೆಯಲ್ಲಿ ಸುಮಾರು ಶೇ.85ರಷ್ಟು ಜನರಿಗೆ ಮೊದಲ ಡೋಸ್ ಹಾಕಲಾಗಿದೆ ಆಗಿದೆ. ಇನ್ನೂ ಹೆಚ್ಚುಹೆಚ್ಚು ಲಸಿಕೆಗಳನ್ನು ತ್ವರಿತಗತಿಯಲ್ಲಿ ಹಾಕಲಾಗುವುದು ಎಂದರು.
ವಿವಿಧ ಸ್ಥಳಗಳಿಗೆ ಭೇಟಿ: ಪಟ್ಟಣದ ಖ್ಯಾತ ಜನಪದ ಕಲಾವಿದೆ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ. ಮಂಜುಮ್ಮ ಜೋಗತಿ ಅವರ ಮನೆಗೆ ಭೇಟಿನೀಡಿ ಅಲ್ಲಿನ ವಾರ್ಡಿನ ಸಮಸ್ಯೆಗಳನ್ನು ಆಲಿಸಿದರು.
ಶಾಲಾ ಆವರಣದಲ್ಲಿ ಭೇಟಿ ನೀಡಿ ಅಲ್ಲಿನ ಮಕ್ಕಳೊಂದಿಗೆ ಮಾತನಾಡಿ ವಿಚಾರಿಸಿದರು. 8ನೇ ವಾರ್ಡಿನಲ್ಲಿರುವ ಬಾಲಕರ ಹಾಸ್ಟೆಲ್‌ಗೆ ಭೇಟಿನೀಡಿ ಮಕ್ಕಳೊಂದಿಗೆ ಚರ್ಚಿಸಿದರು. ನಗರೋತ್ಥಾನ ಅನುದಾನದಲ್ಲಿ ನಿರ್ಮಿಸಿ ಬಳಕೆಯಾಗದೇ ನಿಂತಿರುವ ನೀರಿನ ಟ್ಯಾಂಕ್ ಪರಿಶೀಲಿಸಿದರು.
ಹೊಸಪೇಟೆ ತಹಸೀಲ್ದಾರ್ ಎಚ್. ವಿಶ್ವನಾಥ, ಮುಖ್ಯಾಧಿಕಾರಿ ಫಕೃದ್ದೀನ್, ಕಂದಾಯ ನಿರೀಕ್ಷಕ ಅಂದಾನಗೌಡ, ಪಟ್ಟಣ ಪಂಚಾಯಿತಿ ಪ್ರಭಾರಿ ಅಭಿಯಂತರ ಮಂಜುನಾಥಪಾಟೀಲ್, ಸ್ಥಾಯಿ ಸಮಿತಿ ಅಧ್ಯಕ್ಷಎಸ್. ನವೀನ್ ಕುಮಾರ್, ಸದಸ್ಯ ಆದಿಮನಿ ಹುಸೇನ್ ಭಾಷಾ, ಹಿರಿಯ ಆರೋಗ್ಯ ಸಹಾಯಕಿ ಲತಾ ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.