ತಿಂಗಳೊಳಗೆ 2 ಸಾವಿರ ವೈದ್ಯರ ನೇಮಕಕ್ಕೆ ಕ್ರಮ
Team Udayavani, Mar 31, 2021, 8:26 PM IST
ಬಳ್ಳಾರಿ: ಗ್ರಾಮೀಣ ಭಾಗಕ್ಕೂ ಸಮರ್ಪಕವಾಗಿ ವೈದ್ಯರನ್ನು ಒದಗಿಸುವ ಸಲುವಾಗಿ ತಿಂಗಳೊಳಗೆ ಎರಡು ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಹೇಳಿದರು.
ನಗರದ ವಿಮ್ಸ್ ಆವರಣದಲ್ಲಿ ಸಾರ್ವಜನಿಕರ ಬಳಕೆಗೆ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂಆರ್‌ಐ), ಗ್ರಂಥಾಲಯ, ಉಪನ್ಯಾಸಕರ ಸಭಾಂಗಣ ಮತ್ತು ಪರಿಕ್ಷಾ ಸಭಾಂಗಣ, 300 ವಿದ್ಯಾರ್ಥಿಗಳ ಆಸನ ಸಾಮರ್ಥ್ಯದ ಉಪನ್ಯಾಸ ರಂಗಮಂದಿರ, ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ದಂತ ವೈದ್ಯಕೀಯ ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಆನ್‌ಲೈನ್ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ಕಾಡುತ್ತಿದೆ. ಇದನ್ನು ಮನಗಂಡು ಗ್ರಾಮೀಣ ಪ್ರದೇಶಕ್ಕೂ ಸಮರ್ಪಕವಾಗಿ ವೈದ್ಯರನ್ನು ಒದಗಿಸುವ ನಿಟ್ಟಿನಲ್ಲಿ ತಿಂಗಳೊಳಗಾಗಿ ಎರಡು ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುತ್ತಿದೆ. ಈವರೆಗೂ ಯಾವ ಸರ್ಕಾರಗಳು 2 ಸಾವಿರ ವೈದ್ಯರನ್ನು ನೇಮಕಾತಿ ಮಾಡಿಕೊಂಡಿಲ್ಲ.
ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದರ ಜತೆಗೆ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ವೈದ್ಯರಿಗೆ ಉತ್ತೇಜನ ನೀಡಲು ಬಡ್ತಿ ಮತ್ತು ವೇತನ ಹೆಚ್ಚಳಕ್ಕೆ ನಿರ್ದಿಷ್ಟ ಕಾನೂನುಗಳನ್ನು ಬದಲಾವಣೆ ಮಾಡಲಾಗುತ್ತಿದೆ ಎಂದರು. ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಸಿಎಸ್‌ಆರ್ ಸಮಿತಿ ರಚಿಸಲಾಗಿದೆ. ಇದಕ್ಕೆ ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ಗೌರವ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ರಾಜ್ಯ ಸರ್ಕಾರವೂ ಸಹ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು. ಪೋಷಕರಿಗೆ ಲಸಿಕೆ ಹಾಕಿಸಿ: ದೇಶದಲ್ಲಿ ಕೋವಿಡ್ ಸೋಂಕು ಆವರಿಸಿದ 10 ತಿಂಗಳಲ್ಲೇ ಸೋಂಕನ್ನು ನಿಯಂತ್ರಿಸಲು ಸರ್ಕಾರ ಕೋವಿಡ್ ಲಸಿಕೆಯನ್ನು ತಂದಿದೆ. ಪ್ರತಿದಿನ ಮೂರು ಲಕ್ಷ ಜನರಿಗೆ ಲಸಿಕೆ ಕೊಡಲು ರಾಜ್ಯ ಸರ್ಕಾರ ಸಮರ್ಥವಾಗಿದೆ.
ಹೀಗಾಗಿ ಪೋಷಕರು ತಮ್ಮ ಚಿಕ್ಕ ಚಿಕ್ಕ ಮಕ್ಕಳನ್ನು ಕರೆದೊಯ್ದು ಲಸಿಕೆ ಹಾಕಿಸುತ್ತಿದ್ದ ಮಾದರಿಯಲ್ಲೇ ಇಂದು ಯುವಕರು ತಮ್ಮ ತಮ್ಮ ವಯಸ್ಸಾದ ಪೋಷಕರನ್ನು ಕರೆದೊಯ್ದು ಕೋವಿಡ್ ಲಸಿಕೆಯನ್ನು ಹಾಕಿಸುವ ಮೂಲಕ ಸೋಂಕನ್ನು ನಿಯಂತ್ರಿಸಲು ಸಹಕರಿಸಬೇಕು. ಜತೆಗೆ ಗುಂಪು ಸೇರದಂತೆ ಮಾಸ್ಕ್, ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರವನ್ನು ಕಾಪಾಡುವ ಮೂಲಕ ಜನರೇ ಸ್ವಯಂ ಜನತಾ ಕರ್ಫ್ಯೂವನ್ನು ವಿಧಿ ಸಿಕೊಳ್ಳಬೇಕು ಎಂದು ಕೋರಿದರು.
ದೇಶದಲ್ಲಿ ಕಳೆದ ವರ್ಷ 157 ವೈದ್ಯಕೀಯ ಕಾಲೇಜುಗಳು ಆರಂಭವಾಗಿದ್ದು ಈ ಪೈಕಿ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಇದರಿಂದ ರಾಜ್ಯದಲ್ಲಿ 27000 ವಿದ್ಯಾರ್ಥಿಗಳು ಎಂಬಿಬಿಎಸ್ ಪ್ರವೇಶಕ್ಕೆ ನೆರವಾಗಲಿದೆ ಎಂದವರು ಸ್ಪಷ್ಟಪಡಿಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್, ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಜಿ.ಕರುಣಾಕರರೆಡ್ಡಿ, ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಡಿಸಿ ಪವನ್‌ಕುಮಾರ್ ಮಾಲಪಾಟಿ, ಎಡಿಸಿ ಮಂಜುನಾಥ್, ವಿಮ್ಸ್ ನಿರ್ದೇಶಕ ಡಾ| ಗಂಗಾಧರಗೌಡ, ಅಧಿಧೀಕ್ಷಕ ಮರಿರಾಜ್ ಸೇರಿದಂತೆ ಹಲವರು ಇದ್ದರು. ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಆರೋಗ್ಯ ಕ್ಷೇತ್ರಕ್ಕೆ ವಿಮ್ಸ್ ಕೊಡುಗೆ ಅಪಾರ: ಸಚಿವ ಡಾ| ಸುಧಾಕರ್ ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಮ್ಸ್ ಆವರಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಹೀಗಾಗಿ ಬೆಳಗಾವಿ ಲೋಕಸಭೆ, ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಶತಃಸಿದ್ಧ. ಆಡಳಿತಾರೂಢ ಪಕ್ಷ ಯಾವುದೇ ಇರಲಿ ಉಪಚುನಾವಣೆಯಲ್ಲಿ ಸೋತಿರುವ ಉದಾಹರಣೆಯಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಗರ ಶಾಸಕ ಸೋಮಶೇಖರ ರೆಡ್ಡಿಗೆ ಬಿಟ್ಟದ್ದು. ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿಯವರು ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆಯ ಜವಾಬ್ದಾರಿ ವಹಿಸಲಿದ್ದಾರೆ.
ಅವರೇ ನಗರ ಶಾಸಕರಾಗಿರುವುದರಿಂದ ರಾಜ್ಯ ನಾಯಕರು ಈ ಜವಾಬ್ದಾರಿಯನ್ನು ಅವರಿಗೆ ವಹಿಸಬಹುದು ಎಂದು ನಾನು ಭಾವಿಸಿದ್ದೇನೆ. ಅಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದರೆ ಅವರನ್ನು ಮನವೊಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡೋ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಸಕ್ರಿಯರಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ತುಂಗಭದ್ರಾ ಜಲಾಶಯದ ಎಲ್‌ಎಲ್‌ಸಿ ಕಾಲುವೆಗೆ ಇದೇ ಏಪ್ರಿಲ್ 10ರವರೆಗೆ ನೀರು ಹರಿಸಲಾಗುವುದು ಎಂದ ಅವರು, ಈ ಕುರಿತು ಈಗಾಗಲೇ ಆದೇಶವನ್ನು ಹೊರಡಿಸಲಾಗಿದೆ ಎಂದರು.
ಗುತ್ತಿಗೆದಾರರಿಗೆ ಹಣದ ಸಮಸ್ಯೆ: ನಗರದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರ ಆರ್ಥಿಕವಾಗಿ ಸದೃಢವಾಗಿಲ್ಲದಿರುವುದು ಆಸ್ಪತ್ರೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯಲು ಕಾರಣವಾಗಿದೆ. ಈ ಕುರಿತು ಸರ್ಕಾರದ ಗಮನ ಸೆಳೆದು ಹೆಚ್ಚುವರಿ ಅನುದಾನ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಕಾಮಗಾರಿಗೆ ವೇಗ ನೀಡಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.